Advertisement
ಜು.19ರಂದು ಬೆಳಗ್ಗೆ 10.30ರಿಂದ 1.30ರವರೆಗೆ ಕೋರ್ ವಿಷಯದ ಪರೀಕ್ಷೆ ನಡೆಯಲಿದ್ದು, ಬೆಳಗ್ಗೆ 8.30ಕ್ಕೆ ಪರೀಕ್ಷಾ ಕೇಂದ್ರಕ್ಕೆ ಮಕ್ಕಳು ಬರಲು ಅವಕಾಶ ಮಾಡಲಾಗಿದೆ. ಎಲ್ಲ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಿದ ಬಳಿಕವೇ ಪರೀಕ್ಷಾ ಕೊಠಡಿಗೆ ಕಳುಹಿಸಲಾಗುತ್ತದೆ. ಸಾಮಾಜಿಕ ಅಂತರ, ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಕೆಗೆ ವಿಶೇಷ ಆದ್ಯತೆ ನೀಡಲಾಗಿದೆ.
ದ.ಕ. ಜಿಲ್ಲೆಯಲ್ಲಿ 2718 ಪರೀಕ್ಷಾ ಕೊಠಡಿಗಳಿದ್ದು 3,708 ಮಂದಿ ಪರೀಕ್ಷಾ ಸಿಬಂದಿ ಕರ್ತವ್ಯ ನಿರ್ವಹಿಸಲಿದ್ದಾರೆ. ಉಡುಪಿ ಜಿಲ್ಲೆಯಲ್ಲಿ 1,780 ಕೊಠಡಿಗಳನ್ನು ಪರೀಕ್ಷಾ ಕೇಂದ್ರಕ್ಕೆ ಬಳಸಲಾಗುತ್ತಿದ್ದು, ಕೊಠಡಿ ಮೇಲ್ವಿಚಾರಕರನ್ನು ನೇಮಿಸಲಾಗಿದೆ. ಪ್ರತೀ ಕೇಂದ್ರದಲ್ಲಿ 4 ಮಂದಿ ಹೆಚ್ಚುವರಿ ಕೊಠಡಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ.
Related Articles
ಪರೀಕ್ಷಾ ದಿನಗಳಂದು ಪ್ರತಿ ಕೇಂದ್ರದ ಸುತ್ತಲೂ 200 ಮೀಟರ್ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿಗೊಳಿಸಲಾಗಿದೆ.
Advertisement
ಸೋಂಕಿತ ವಿದ್ಯಾರ್ಥಿಗಳು!ದ.ಕ. ಜಿಲ್ಲೆಯಲ್ಲಿ 9 ಮಂದಿ ಕೊರೊನಾ ಸೋಂಕಿತ ವಿದ್ಯಾರ್ಥಿಗಳಿಗೆ ಕೋವಿಡ್ ಕೇರ್ ಕೇಂದ್ರಗಳಲ್ಲಿ ಆರೋಗ್ಯ ಇಲಾಖೆಯ ಸಿಬಂದಿ ಸಹಕಾರದಲ್ಲಿ ಪರೀಕ್ಷೆ ಎದುರಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ದ.ಕ. ಜಿಲ್ಲಾ ಡಿಡಿಪಿಐ ಮಲ್ಲೇಸ್ವಾಮಿ ತಿಳಿಸಿದ್ದಾರೆ. ಕೇರಳದ 441 ವಿದ್ಯಾರ್ಥಿಗಳು
ಕೇರಳದ 441 ಮಂದಿ ಎಸೆಸೆಲ್ಸಿ ವಿದ್ಯಾರ್ಥಿಗಳು ದ.ಕ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲಿದ್ದಾರೆ. ಅವರಿಗೆ ಕೆಎಸ್‌ಆರ್‌ಟಿಸಿ, ಖಾಸಗಿ ಬಸ್‌ಗಳಲ್ಲಿ ಮಕ್ಕಳ ಪರೀಕ್ಷೆ ಪ್ರವೇಶ ಪತ್ರದ ಆಧಾರದಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಗಳಿಗೆ ತಲಪಿಸಲು ಮನವಿ ಮಾಡಲಾಗಿದೆ. ಇದಲ್ಲದೆ ಶಿಕ್ಷಣ ಇಲಾಖೆಯು 4 ಬಸ್‌ಗಳನ್ನು ತಲಪಾಡಿ ಗಡಿಯಲ್ಲಿ ಇರಿಸಲು ಸೂಚಿಸಿದೆ. ಈಗಾಗಲೇ ಸುಮಾರು 50ರಷ್ಟು ವಿದ್ಯಾರ್ಥಿಗಳು ಬಸ್ ವ್ಯವಸ್ಥೆಗಾಗಿ ಬೇಡಿಕೆ ಸಲ್ಲಿಸಿದ್ದು, ಅವರಿಗೆ ಸೂಕ್ತ ವ್ಯವಸ್ಥೆಗೆ ಸೂಚನೆ ನೀಡಲಾಗಿದೆ ಎಂದು ಮಲ್ಲೇಸ್ವಾಮಿ ತಿಳಿಸಿದ್ದಾರೆ. ಈ ಬಾರಿಯ ಎಸೆಸೆಲ್ಸಿ ಪರೀಕ್ಷೆಯು ಒಎಂಆರ್ ಶೀಟ್ ಆಧಾರದಲ್ಲಿ ನಡೆಯಲಿದೆ. ಅದಕ್ಕಾಗಿ ಈಗಾಗಲೇ ಮಾದರಿ ಪರೀಕ್ಷೆಯನ್ನು ಕೂಡ ನಡೆಸಲಾಗಿದೆ. ಮಾದರಿ ಪ್ರಶ್ನೆ ಪತ್ರಿಕೆಗಳೂ ವಿದ್ಯಾರ್ಥಿಗಳಿಗೆ ತಲಪಿಸಲಾಗಿದೆ. ವಿದ್ಯಾರ್ಥಿಗಳು ಯಾವುದೇ ಗೊಂದಲ, ಆತಂಕವಿಲ್ಲದೆ ಪರೀಕ್ಷೆ ಎದುರಿಸುವ ನಿಟ್ಟಿನಲ್ಲಿ ಎಲ್ಲ ವ್ಯವಸ್ಥೆ ಮಾಡಲಾಗಿದೆ ಎಂದು ಜಿ.ಪಂ. ಸಿಇಒ ಡಾ| ಕುಮಾರ್ ಹೇಳಿದ್ದಾರೆ.