Advertisement

ಕೋವಿಡ್ ಆತಂಕದ ನಡುವೆಯೂ SSLC ಪರೀಕ್ಷೆ ಬರೆದ ವಿದ್ಯಾರ್ಥಿಗಳು

01:09 PM Jul 19, 2021 | Team Udayavani |

ಕಾಪು : ಕೋವಿಡ್‌ ಮುನ್ನೆಚ್ಚರಿಕೆಯನ್ನು ಪಾಲಿಸಿಕೊಂಡು ಆರಂಭಗೊಂಡ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ  ಕಾಪು ತಾಲೂಕಿನ‌ 11 ಕೇಂದ್ರಗಳಲ್ಲಿ ಒಟ್ಟು 1783  ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

Advertisement

ಪೊಲಿಪು ಸರಕಾರಿ ಪದವಿ ಪೂರ್ವ ಕಾಲೇಜು (116), ದಂಡತೀರ್ಥ ವಿದ್ಯಾ ಸಂಸ್ಥೆಗಳು ( 142), ಅದಮಾರು ಪೂರ್ಣ ಪ್ರಜ್ಞ ಪದವಿ ಪೂರ್ವ ಕಾಲೇಜು (235), ಉದ್ಯಾವರ ಸೈಂಟ್ ಜೋನ್ಸ್ ವಿದ್ಯಾ ಸಂಸ್ಥೆಗಳು (145), ಕಟಪಾಡಿ ಎಸ್.ವಿ.ಎಸ್ ವಿದ್ಯಾ ಸಂಸ್ಥೆಗಳು ( 124), ಇನ್ನಂಜೆ ಎಸ್.ವಿ.ಎಸ್.  ವಿದ್ಯಾ ಸಂಸ್ಥೆ (124 ), ಶಂಕರಪುರ ಸೈಂಟ್ ಜೋನ್ಸ್ ವಿದ್ಯಾ ಸಂಸ್ಥೆ (130 ), ಮೂಳೂರು ಅಲ್ ಇಹ್ಸಾನ್ ಎಜುಕೇಶನ್ ಸೆಂಟರ್ ( 294), ಶಿರ್ವ ಸಂತ ಮೇರಿ ವಿದ್ಯಾಲಯ (223 ), ಶಿರ್ವ ಹಿಂದೂ ಜೂನಿಯರ್ ಕಾಲೇಜು (142) ಮತ್ತು ಹೆಜಮಾಡಿ ಸರಕಾರಿ ಪಿ.ಯು. ಕಾಲೇಜ್ (108 ) ನಲ್ಲಿ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ.

ಇದನ್ನೂ ಓದಿ :  ಅತಿ ಹೆಚ್ಚು ಸೋಂಕು ಪತ್ತೆಯಾದ ದೇಶಗಳ ಪಟ್ಟಿಯಲ್ಲಿ ಪಾಕಿಸ್ತಾನಕ್ಕೆ 30ನೇ ಸ್ಥಾನ..!

ಪರೀಕ್ಷಾ ಕೇಂದ್ರಗಳಲ್ಲಿ ಕೋವಿಡ್ ಹಿನ್ನೆಲೆಯಲ್ಲಿ ವಿಶೇಷ ಸಿದ್ದತೆಗಳನ್ನು ನಡೆಸಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ವಿದ್ಯಾರ್ಥಿಗಳು ಬಲು ಬೇಗನೇ ಪರೀಕ್ಷಾ ಕೇಂದ್ರಗಳಿಗೆ ಆಗಮಿಸಿ, ಪರೀಕ್ಷಾ ಸಿದ್ದತೆಗಳನ್ನು‌ ನಡೆಸಿದರು.

ಎಲ್ಲಾ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆಯ ಬಳಿಕ ವಿದ್ಯಾರ್ಥಿಗಳನ್ನು ಪರೀಕ್ಷಾ ಕೊಠಡಿಗೆ ಕಳುಹಿಸಲಾಗಿದ್ದು, ಸಾಮಾಜಿಕ ಅಂತರ ಪಾಲನೆ, ಮಾಸ್ಕ್ ಧಾರಣೆ, ಸ್ಯಾನಿಟೈಸೇಷನ್ ಗೆ ಪ್ರತೀ ಪರೀಕ್ಷಾ ಕೇಂದ್ರಗಳಲ್ಲೂ ವಿಶೇಷ ಒತ್ತು ನೀಡಲಾಗಿತ್ತು.

Advertisement

ಪರೀಕ್ಷಾ ಕೇಂದ್ರದ ಎಲ್ಲಾ ವಿದ್ಯಾರ್ಥಿಗಳಿಗೂ ಕ್ಯಾಂಪ್ಕೋ ಸಂಸ್ಥೆ ಎನ್ 95 ಮತ್ತು ಸರ್ಜಿಕಲ್ ಮಾಸ್ಕ್, ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸರ್ಜಿಕಲ್ ಮಾಸ್ಕ್ ಗಳನ್ನು ಒದಗಿಸಲಾಗಿದೆ. ಕೆಲವೆಡೆ ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು ವಿದ್ಯಾರ್ಥಿಗಳಿಗೆ ಮಾಸ್ಕ್ ಮತ್ತು ಬಿಸ್ಕಿಟ್ ಗಳನ್ನು ವಿತರಿಸಿ, ಪ್ರೋತ್ಸಾಹ ನೀಡಿದರು.

ಇಂದು (ಸೋಮವಾರ, ಜುಲೈ 19) ಬೆಳಗ್ಗೆ ಉಡುಪಿ ವಲಯ ಹಾಗೂ ಕಾಪು ತಾಲೂಕಿನ ಕೆಲವು ಪರೀಕ್ಷಾ ಕೇಂದ್ರಕ್ಕೆ ಜಿಲ್ಲಾಧಿಕಾರಿ ಜಿ. ಜಗದೀಶ್, ಸಿಇಒ ನವೀನ್ ಭಟ್, ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕ ಸುಪ್ರಿಯನ್ ಮೊಂತೆರೋ, ಡಿಡಿಪಿಐ ಎಚ್. ಎನ್.‌ನಾಗೂರು, ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ ಹಾಗೂ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಪರೀಕ್ಷಾ ಸಿದ್ದತೆ ಬಗ್ಗೆ ಶಿಕ್ಷಣ ಸಚಿವರಿಂದ ಮೆಚ್ಚುಗೆ : ಉಡುಪಿ ಜಿಲ್ಲೆಯಲ್ಲಿ ನಡೆಸಿರುವ ಪರೀಕ್ಷಾ ಸಿದ್ದತೆಯ ಬಗ್ಗೆ ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಶಿಕ್ಷಣ ಸಚಿವರು ಸೋಮವಾರ ಬೆಳಗ್ಗೆ ದೂರವಾಣಿ ಮೂಲಕ‌ ಮಾತುಕತೆ ನಡೆಸಿದ್ದು, ಗ್ರಾಮೀಣ ಭಾಗದ ಪರೀಕ್ಷಾ ಕೇಂದ್ರಗಳಲ್ಲಿನ ಸಿದ್ದತೆ, ಮಳೆಯ ಪ್ರಮಾಣ ಮತ್ತು ವಿದ್ಯಾರ್ಥಿಗಳ ಉತ್ಸಾಹದ ಬಗ್ಗೆ ಮಾಹಿತಿ ಪಡೆದಿದ್ದು, ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ ಎಂದು ಉಡುಪಿ ವಲಯ ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಂದ್ರಪ್ಪ ಅವರು ಉದಯವಾಣಿಗೆ ತಿಳಿಸಿದ್ದಾರೆ.

ಇದನ್ನೂ ಓದಿ :  ಸಂಸತ್ ಮುಂಗಾರು ಅಧಿವೇಶನ: ಕೋಲಾಹಲ-ಲೋಕಸಭೆ ಕಲಾಪ ಮಧ್ಯಾಹ್ನ 2ಗಂಟೆಗೆ ಮುಂದೂಡಿಕೆ

Advertisement

Udayavani is now on Telegram. Click here to join our channel and stay updated with the latest news.

Next