Advertisement
ಪರೀಕ್ಷೆ ನಡೆಸುವ ರಾಜ್ಯ ಸಕಾ೯ರದ ನಿಧಾ೯ರವನ್ನು ಇಡೀ ದೇಶವೇ ಎದುರು ನೋಡುತ್ತಿದೆ. ಹೀಗಾಗಿ ಇದನ್ನು ಸವಾಲಾಗಿ ಸ್ವೀಕರಿಸಿ ಜಾಗರೂಕತೆಯಿಂದ ಪರೀಕ್ಷೆಯನ್ನು ನಡೆಸಬೇಕು. ರಾಜ್ಯದ 2879 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ಆರಂಭವಾಗುವ ಪರೀಕ್ಷೆಯಲ್ಲಿ 8,48,203 ವಿದ್ಯಾಥಿ೯ಗಳು ಪಾಲ್ಗೊಳ್ಳಲಿದ್ದಾರೆ. ಯಾವುದೇ ಗೊಂದಲಗಳಿಗೆ ಅವಕಾಶಗಳಿಲ್ಲದಂತೆ ಸಕಾ೯ರ ನೀಡಿರುವ ಸೂಚನೆಗಳನ್ನು ಜಾರಿಗೊಳಿಸಬೇಕು ಎಂದು ಅಧಿಕಾರಿಗಳಿಗೆ ಅವರು ತಿಳಿಸಿದರು.
Related Articles
Advertisement
ಕ್ವಾರಂಟೈನ್ ಪ್ರದೇಶಗಳ ಮಕ್ಕಳಿಗೆ ಪ್ರತ್ಯೇಕ ಕೇಂದ್ರಗಳನ್ನು ಮೀಸಲಿಟ್ಟು ಒಂದು ವೇಳೆ ಅವರು ಪರೀಕ್ಷೆ ಬರೆಯಲು ಸಾಧ್ಯವಾಗದಿದ್ದಲ್ಲಿ ಆಗಸ್ಟ್‌ನಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂಬುದನ್ನು ಖಚಿತ ಪಡಿಸಿಕೊಂಡ ಸಚಿವರು, ಪೋಷಕರಿಗೆ ಆತಂಕಗಳಿಲ್ಲದಂತೆ ಜಿಲ್ಲಾಡಳಿತಗಳು ಮಾಧ್ಯಮಗಳ ಮೂಲಕ ಸಕಾ೯ರ ಕೈಗೊಂಡಿರುವ ಕ್ರಮಗಳ ಮಾಹಿತಿ ನೀಡಬೇಕು ಎಂದರು.
ಶಿಕ್ಷಣ ಇಲಾಖೆ ಇತರೆ ಇಲಾಖೆಗಳ ಸಮನ್ವಯದೊಂದಿಗೆ ಮಾಡಿಕೊಂಡಿರುವ ಸಿದ್ದತೆ, ವಿದ್ಯಾಥಿ೯, ಪರೀಕ್ಷಾ ಸಿಬ್ಬಂದಿ ಮತ್ತು ಈ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವ ಎಲ್ಲರಿಗೆ ನೀಡಿರುವ ಮಾಗ೯ಸೂಚಿಗಳ ಮಾಹಿತಿ ಪಡೆದ ಸಚಿವರು, ಎಲ್ಲವೂ ಯೋಜನಾಬದ್ಧವಾಗಿ, ವೈಜ್ಞಾನಿಕ ಆಲೋಚನೆ ಹಿನ್ನಲೆಯಲ್ಲಿ ತೀಮಾ೯ನಗಳನ್ನು ಕೈಗೊಳ್ಳಲಾಗಿದೆ. ಆದರೆ ಅವುಗಳನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಆ ಮೂಲಕ ರಾಜ್ಯ ಸಕಾ೯ರದ ನಿಧಾ೯ರದ ಜತೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ 458 ಕ್ವಾರಂಟೈನ್ ಪ್ರದೇಶಗಳಿವೆ. ಅಲ್ಲಿ ಪರೀಕ್ಷೆ ಬರೆಯುವ ಮಕ್ಕಳ ಬಗ್ಗೆ ಗರಿಷ್ಠ ಪ್ರಮಾಣದ ಎಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. ಒಂದು ವೇಳೆ ಆ ಮಕ್ಕಳಲ್ಲಿ ಯಾರಿಗಾದರೂ ಸೋಂಕಿನ ಸೂಚನೆ ಕಂಡು ಬಂದಲ್ಲಿ ತಕ್ಷಣವೇ ಪರೀಕ್ಷಾಕೇಂದ್ರದ ಬಳಿಯಿರುವ ಆರೋಗ್ಯ ಇಲಾಖೆ ಸಿಬ್ಬಂದಿ ಹತ್ತಿರದ ಕೋವಿಡ್ ಕೇರ್ ಸೆಂಟರ್‌ಗಳಿಗೆ ಕರೆದೊಯ್ದು ಪರೀಕ್ಷೆ ನಡೆಸಬೇಕು. ಅದಕ್ಕಾಗಿ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಶಿಕ್ಷಣ ಸಚಿವ ಸುರೇಶ್ ಕುಮಾರ್, ಹೆಚ್ಚುವರಿ ಮುಖ್ಯ ಕಾಯ೯ದಶಿ೯ ಜಾವೇದ್ ಅಖ್ತರ್, ಶಿಕ್ಷಣ ಇಲಾಖೆ ಕಾಯ೯ದಶಿ೯ ಉಮಾಶಂಕರ್, ವೈದ್ಯಕೀಯ ಶಿಕ್ಷಣ ಇಲಾಖೆ ಕಾಯ೯ದಶಿ೯ ಅನಿಲ್‌ಕುಮಾರ್, ಬಿಬಿಎಂಪಿ ಉಸ್ತುವಾರಿ ಮಂಜುನಾಥ್, ನಿದೇ೯ಶಕಿ ಸುಮಂಗಲ, ತಜ್ಞರಾದ ಡಾ. ಸುದಶ೯ನ್, ಡಾ. ಗಿರಿಬಾಬು ಸೇರಿದಂತೆ ಅನೇಕ ಹಿರಿಯ ಅಧಿಕಾರಿಗಳು ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದರು.
ʼಪರೀಕ್ಷೆಗಳನ್ನು ಸಮಪ೯ಕವಾಗಿ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪೋಷಕರು ಯಾವುದೇ ಆತಂಕಗಳಿಲ್ಲದೆ ಮಕ್ಕಳನ್ನು ಕಳುಹಿಸಿಕೊಡಿ. ಇಡೀ ದೇಶವೇ ಎದುರುನೋಡುತ್ತಿರವ ಈ ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಅಧಿಕಾರಿ ಸಿಬ್ಬಂದಿಗಳು ಶ್ರಮಿಸುತ್ತಿದ್ದಾರೆ. ಒಬ್ಬ ವಿದ್ಯಾಥಿ೯ಗೂ ಸೋಂಕು ತಗುಲದಂತೆ ಜಾಗೃತೆವಹಿಸಲಾಗಿದೆʼ
– ಡಾ. ಕೆ. ಸುಧಾಕರ್, ವೈದ್ಯಕೀಯ ಶಿಕ್ಷಣ ಸಚಿವರು.