Advertisement
ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಪೂರ್ವ ಸಿದ್ಧತೆ ಕುರಿತು ವಿಡಿಯೋ ಸಂವಾದ ನಡೆಸಿದ ಅವರು ಜೂ. 25ರಿಂದ ಜು.4ರವರೆಗೆ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ನೂಕುನುಗ್ಗಲು ಉಂಟಾಗದಂತೆ ಹಾಗೂ ಪರೀಕ್ಷೆಗೆ ಮುನ್ನ ಮತ್ತು ನಂತರ ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಂಡು ಪರೀಕ್ಷೆ ಬರೆಯುವಂತೆ ಕಟ್ಟನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದರು.
Related Articles
Advertisement
ಸರ್ಕಾರದಿಂದ ವಿದ್ಯಾರ್ಥಿಗಳಿಗೆ ನೀಡಿರುವ ಮಾಸ್ಕ್ಗಳನ್ನು ಹೊರತುಪಡಿಸಿ ಯಾರಾದರೂ ದಾನಿಗಳು, ಸಂಘ ಸಂಸ್ಥೆಗಳು ಮಾಸ್ಕ್ ನೀಡಲು ಬಂದರೆ ಅಂತಹವರನ್ನು ಪರೀಕ್ಷಾ ಕೇಂದ್ರದ ಬಳಿ ಸೇರಿಸದಂತೆ ಪೊಲೀಸ್ ಸಿಬ್ಬಂದಿ ಎಚ್ಚರ ವಹಿಸಬೇಕು. ಮಾಸ್ಕ್ ಮರೆತು ಬಂದ ವಿದ್ಯಾರ್ಥಿಗಳಿಗೆ ಮತ್ತೂಂದು ಮಾಸ್ಕ್ ನೀಡಬೇಕು. ವಿದ್ಯಾರ್ಥಿ ಗಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂದರು.
ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಜಗದೀಶ್ ಮಾತನಾಡಿ, ವಿದ್ಯಾರ್ಥಿಗಳಿಗೆ ಸಾರಿಗೆ ವ್ಯವಸ್ಥೆ ಕಲ್ಪಿಸಿ ಹಾಗೂ ಮಲೆನಾಡು ಮತ್ತು ಕರಾವಳಿ ಪ್ರದೇಶಗಳಿಗೆ ವಿಶೇಷ ಗಮನಹರಿಸಿ ಮಕ್ಕಳು ಸರಿಯಾದ ಸಮಯಕ್ಕೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗುವಂತೆ ವ್ಯವಸ್ಥೆ ಮಾಡಬೇಕು ಎಂದರು. ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಅವರು ಹಾಸನ ಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಮಾಡಿಕೊಂಡಿರುವ ಪೂರ್ವ ಸಿದ್ಧತೆ ಕುರಿತು ಸಚಿವರಿಗೆ ಮಾಹಿತಿ ನೀಡಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸ ಗೌಡ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಚಂದ್ರಶೇಖರ್, ಡಿಡಿಪಿಐ ಪ್ರಕಾಶ್ ಹಾಗೂ ಎಲ್ಲ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಜರಿದ್ದರು.