Advertisement

ಎಸೆಸೆಲ್ಸಿ ಪರೀಕ್ಷೆ ಮುಕ್ತಾಯ: ಎ. 24ರಿಂದ ಮೌಲ್ಯಮಾಪನ

11:38 PM Apr 15, 2023 | Team Udayavani |

ಬೆಂಗಳೂರು: ಎಸೆಸೆಲ್ಸಿ ಪರೀಕ್ಷೆಗಳು ಶನಿವಾರ ಮುಕ್ತಾಯಗೊಂಡಿದ್ದು ಎ.24ರಿಂದ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿದೆ.

Advertisement

ರಾಜ್ಯಾದ್ಯಂತ ಒಟ್ಟು 236 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಆರಂಭವಾಗಲಿದೆ. ಈ ಬಾರಿ ಪರೀಕ್ಷೆ ಬರೆದಿರುವ 8.42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ 50 ಲಕ್ಷಕ್ಕೂ ಹೆಚ್ಚು ಉತ್ತರ ಪತ್ರಿಕೆಗಳ ಮೌಲ್ಯಮಾಪನ ನಡೆಯಲಿದೆ. ಮೌಲ್ಯಮಾಪನ ಕಾರ್ಯಕ್ಕೆ ಒಟ್ಟು 73 ಸಾವಿರಕ್ಕೂ ಹೆಚ್ಚು ಶಿಕ್ಷಕರನ್ನು ನಿಯೋಜಿಸಲಾಗಿದೆ ಎಂದು ಕರ್ನಾಟಕ ರಾಜ್ಯ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ (ಕೆಎಸ್‌ಇಎಬಿ) ನಿರ್ದೇಶಕ (ಪರೀಕ್ಷೆಗಳು) ಎಚ್‌.ಎನ್‌. ಗೋಪಾಲಕೃಷ್ಣ ಅವರು ಮಾಹಿತಿ ನೀಡಿದ್ದಾರೆ.

ಮಾ. 31ರಿಂದ ಎಸೆಸೆಲ್ಸಿ ಪರೀಕ್ಷೆಗಳು ಆರಂಭಗೊಂಡಿದ್ದವು. ಶನಿವಾರ ಸಮಾಜ ವಿಜ್ಞಾನ ಪರೀಕ್ಷೆ ಮುಕ್ತಾಯಗೊಳ್ಳುವುದರೊಂದಿಗೆ ಈ ವರ್ಷದ ಪರೀಕ್ಷೆ ಮುಕ್ತಾಯಗೊಂಡಿದೆ. ಬೆಳಗಾವಿ, ಕಲಬುರಗಿಯಲ್ಲಿ ನಕಲಿನ ಪ್ರಕರಣಗಳು ವರದಿಯಾಗಿದ್ದು ಹೊರತು ಪಡಿಸಿ ಉಳಿದಂತೆ ಪರೀಕ್ಷೆ ಸುಸೂತ್ರವಾಗಿ ನಡೆದಿದೆ.
ಈ ಬಾರಿ ಪರೀಕ್ಷೆಗೆ 8.42 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ನೋಂದಣಿಯಾಗಿ ಪರೀಕ್ಷೆ ಬರೆದಿದ್ದರು. ರಾಜ್ಯಾದ್ಯಂತ 3305 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು. ಎ.24ರಿಂದ ಮೌಲ್ಯಮಾಪನ ಆರಂಭಿಸಲು ನಿರ್ಧರಿಸಲಾಗಿದೆ. ಅಗತ್ಯ ಶಿಕ್ಷಕರನ್ನು ಈಗಾಗಲೇ ನಿಯೋಜಿಸಲಾಗಿದೆ. ಮೌಲ್ಯಮಾಪನ ಕಾರ್ಯ ಸಂಪೂರ್ಣ ಮುಗಿದ ಬಳಿಕ ಫ‌ಲಿತಾಂಶವನ್ನು ಕಂಪ್ಯೂಟರೀಕರಣಗೊಳಿಸಿ ಯಾವಾಗ ಪ್ರಕಟಿಸಬಹುದು ಎಂಬುದನ್ನು ಪರಿಶೀಲಿಸಿ ಫ‌ಲಿತಾಂಶ ಪ್ರಕಟಣೆಯ ದಿನಾಂಕವನ್ನು ನಿಗದಿಪಡಿಸಲಾಗುತ್ತದೆ ಎಂದು ಗೋಪಾಲಕೃಷ್ಣ ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next