ಕೋಲಾರ: ಕಂಟೈನ್‌ಮೆಂಟ್ ಝೋನ್‌ಗಳಲ್ಲೂ ಎಲ್ಲಾ ರೀತಿಯ ಮುಂಜಾಗ್ರತೆ ವಹಿಸಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗುತ್ತದೆ, ಪೋಷಕರು ಆತಂಕಕ್ಕೊಳಗಾಗಬೇಕಾಗಿಲ್ಲ ಎಂದು ರಾಜ್ಯಪ್ರಾಥಮಿಕ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ತಿಳಿಸಿದ್ದಾರೆ ಎಂದು ಡಿಡಿಪಿಐ ಕೆ.ರತ್ನಯ್ಯ ತಿಳಿಸಿದರು. ಜಿಲ್ಲಾಧಿಕಾರಿಗಳು, ಜಿಪಂ ಸಿಇಒ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿ ಗಳೊಂದಿಗೆ ನಡೆಸಿದ ವೀಡಿಯೋ ಕಾನೆ#ರೆನ್ಸ್‌ನಲ್ಲಿ ಅವರು ಈ ಸೂಚನೆ ನೀಡಿದ್ದಾರೆ ಎಂದು ತಿಳಿಸಿದರು.
ಕಂಟೈನ್ ಮೆಂಟ್‌ಝೋನ್‌ಗಳಿಂದ ಬರುವ ವಿದ್ಯಾರ್ಥಿಗಳಿಗೆ ಎನ್ -95 ಮಾಸ್ಕ್ ವಿತರಿಸುವಂತೆ ಸೂಚಿಸಿದ ಅವರು,ಕಂಟೈನ್ ಮೆಂಟ್ ವಲಯಗಳಲ್ಲಿ ಪರೀಕ್ಷಾ ಕೇಂದ್ರವಿದ್ದರೂ, ಎಲ್ಲಾ ರೀತಿಯ ಮುಂಜಾಗ್ರತೆ ವಹಿಸಿ ಪರೀಕ್ಷೆ ನಡೆಸುತ್ತೇವೆ ಎಂದು ಸಚಿವರು ತಿಳಿಸಿದರು. ಶ್ರೀನಿವಾಸಪುರ ಮತ್ತು ಕೋಲಾರ ತಾಲ್ಲೂಕುಗಳನ್ನು ಹೊರತುಪಡಿಸಿ ಉಳಿದ ತಾಲ್ಲೂಕುಗಳ 96 ಮಾರ್ಗಗಳಲ್ಲಿ ಸಾರಿಗೆ ಸಂಸ್ಥೆ ಪರೀಕ್ಷೆಗೆ ಬರುವ ಮಕ್ಕಳಿಗೆ ಉಚಿತ ಪ್ರಯಾಣಕ್ಕೆ ವ್ಯವಸ್ಥೆ ಮಾಡಿದ್ದು, ಇದರ ಸದುಪಯೋಗ ಪಡೆದುಕೊಳ್ಳಲು ಎಂದು ಡಿಡಿಪಿಐ ಕೆ.ರತ್ನಯ್ಯ ಕೋರಿದ್ದಾರೆ.
ಮಕ್ಕಳೇ ಮನೆಯಿಂದ ನೀರು, ತಿಂಡಿ ತರುವಂತೆ ಸಲಹೆ ನೀಡಿರುವ ಅವರು, ಅಗತ್ಯ ಸಂದರ್ಭದಲ್ಲಿ ಕುಡಿಯುವ ನೀರಿಗೆ ವ್ಯವಸ್ಥೆ ಪ್ರತಿ ಕೇಂದ್ರದಲ್ಲೂ ಮಾಡಲಾಗಿದೆ ಎಂದು ಮಾಹಿತಿ ನೀಡಿ ದ್ದಾರೆ.ಈಗಾಗಲೇ ಪ್ರವೇಶ ಪತ್ರದೊಂದಿಗೆ ಮಕ್ಕಳಿಗೆ ತಾವು ಪರೀಕ್ಷೆ ಬರೆಯುವ ಕೊಠಡಿ ಸಂಖ್ಯೆ ನೀಡಿದ್ದು, ಯಾರಿಗಾದರೂ ಕೊಠಡಿ ಸಂಖ್ಯೆ ಸಿಗದಿ ದ್ದಲ್ಲಿ ಸಂಬಂಧಿಸಿದ ಶಾಲೆಗಳ ಮುಖ್ಯ ಶಿಕ್ಷಕರು,ಸಹಶಿಕ್ಷಕರಿಂದ ಪಡೆದುಕೊಳ್ಳಲು ಸೂಚಿಸಿದ್ದಾರೆ.
ಪೂರಕ ಪರೀಕ್ಷೆಗೂ ಫ್ರೆಶ್ ಕ್ಯಾಂಡಿಡೇಟ್: ಕೋವಿಡ್ ಸೋಂಕು ವಿದ್ಯಾರ್ಥಿಗಳಲ್ಲಿ ಕಂಡು ಬಂದಲ್ಲಿ ಅಥವಾ ಪ್ರಾಥಮಿಕ ಸಂಪರ್ಕ ಹೊಂದಿದವ ರಾಗಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗಳಲ್ಲಿ ಫ್ರೆಶ್ ಅಭ್ಯರ್ಥಿ ಯೆಂದೇ ಪರಿಗಣಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು. ಪೋಷಕರೇ ಮಕ್ಕಳನ್ನು ಕೇಂದ್ರಕ್ಕೆ ಕರೆದುಕೊಂಡು ಬಂದು ಬಿಟ್ಟು ತೆರಳಬೇಕು, ಅಲ್ಲಿ ಗುಂಪು ಸೇರುವುದಕ್ಕೆ ಅವಕಾಶ ನೀಡಬಾರದು ಎಂದು ಕೋರಿದರು.
ಈ ಸಂಬಂಧ ಇಲಾಖೆಯ ಮಾರ್ಗಸೂಚಿ ಪಾಲಿಸಲು ಸಹಕಾರ ನೀಡಿ ಎಂದು ಕೋರಿದರು. ವೀಡಿಯೋ ಕಾನೆ#ರೆನ್ಸ್‌ನಲ್ಲಿ ಸರ್ಕಾರದ ಪ್ರಧಾನ ಕಾರ್ಯ ದರ್ಶಿಗಳು ಜಿಲ್ಲೆಯಲ್ಲಿ ನಡೆಸಿದ ಅಣಕು ಪರೀಕ್ಷೆಯನ್ನೇ ಮಾದರಿಯಾಗಿಟ್ಟುಕೊಂಡು ಪರೀಕ್ಷೆ ನಡೆಸಲು ಸೂಚಿಸಿದರು ಎಂದು ತಿಳಿಸಿದರು. ವೀಡಿಯೋ ಕಾನ್ಪರೆನ್ಸ್‌ನಲ್ಲಿ ಆಯುಕ್ತರು ಪಾಲ್ಗೊಂಡಿದ್ದು, ನಗರದಲ್ಲಿ ಜಿಲ್ಲಾ—ಕಾರಿಗಳು, ಜಿಪಂ ಸಿಇಒ, ಇತರೆ ಅಧಿಕಾರಿಗಳು ಇದ್ದರು ಎಂದು ತಿಳಿಸಿದರು.