Advertisement

ಮೇ 24 ರಿಂದ PUC ಹಾಗೂ ಜೂನ್ 21 ರಿಂದ SSLC ಪರೀಕ್ಷೆ : ಸುರೇಶ್ ಕುಮಾರ್

06:43 PM Apr 08, 2021 | Girisha |

ವಿಜಯಪುರ : ಮೇ 24 ರಿಂದ ಪಿಯುಸಿ ಹಾಗೂ ಜೂನ್ 21 ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯಲಿವೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಗುರುವಾರ ತಿಳಿಸಿದ್ದಾರೆ.

Advertisement

ಬಾಗಲಕೋಟೆ, ಚಿಕ್ಕೋಡಿ, ವಿಜಯಪುರ ಜಿಲ್ಲೆಗಳಲ್ಲಿ SSLC ಮತ್ತು PUC ಪರೀಕ್ಷೆಗಳ ಪೂರ್ವ ತಯಾರಿಯ ಪರಿಶೀಲನಾ ಸಭೆ ನಡೆಸಿದ ಅವರು ಕಳೆದ ವರ್ಷ ಆರ್ಥಿಕ ತೊಂದರೆಗಳನ್ನು ಎದುರಿಸುತ್ತಿದ್ದರೂ ಹೆಚ್ಚಿನ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳ ಬಗ್ಗೆ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

1 ರಿಂದ 9ನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವ ಸಂಬಂಧ ಇನ್ನೂ ತೀರ್ಮಾನ ಕೈಗೊಂಡಿಲ್ಲ, ಪರೀಕ್ಷೆ ನಡೆಸಬೇಕೆ ಅಥವಾ ಬೇಡವೆ ಎಂಬ ಬಗ್ಗೆ ಸರ್ಕಾರ ಇನ್ನೂ ತೀರ್ಮಾನ ಕೈಗೊಂಡಿಲ್ಲ ಎಂದು ತಿಳಿಸಿದ್ದಾರೆ.

ಇನ್ನು ಬೋರ್ಡ್ ಪರೀಕ್ಷೆಗಳು ಯಾವುದೇ ಅಡೆತಡೆ ಇಲ್ಲದೇ ಸರಾಗವಾಗಿ ನಡೆಯುವ ದೃಷ್ಟಿಯಿಂದ ಸ್ಟ್ಯಾಂಡರ್ಡ್ ಆಪರೇಟಿಂಗ್ ಕಾರ್ಯವಿಧಾನ ಜಾರಿ ಗೆ ತರಲಾಗುತ್ತದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next