Advertisement

ಭಿನ್ನ ಮಾದರಿಯಲ್ಲಿ ನಡೆಯಲಿದೆ SSLC ಪರೀಕ್ಷೆ: ಪರೀಕ್ಷೆ ಮಾದರಿ ತಿಳಿಸಿದ ಸಚಿವರು

11:27 AM Jun 04, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಭಿನ್ನ ಮಾದರಿಯಲ್ಲಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

Advertisement

ಎಸ್ಸೆಸ್ಸೆಲ್ಸಿಗೆ ಕೋರ್ ವಿಷಯ (ವಿಜ್ಞಾನ, ಗಣಿತ, ಸಮಾಜ ವಿಜ್ಞಾನ)ಕ್ಕೆ ಒಂದು ಪರೀಕ್ಷೆ. ಬಹು ಆಯ್ಕೆ ಪ್ರಶ್ನೆಗಳು ಮಾತ್ರ ಇರಲಿದೆ ಹಾಗೂ ಸರಳವಾಗಿರಲಿದೆ. ಪ್ರಥಮ ಭಾಷೆ, ದ್ವಿತೀಯ ಹಾಗೂ ತೃತೀಯ ಭಾಷೆಗೆ ಮತ್ತೊಂದು  ಪರೀಕ್ಷೆ ಇರಲಿದೆ.

ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಸೇರಿ ಒಂದು ಬಹು ಆಯ್ಕೆ ಪ್ರಶ್ನೆ ಪತ್ರಿಕೆ ತಯಾರಿಸಲಾಗುತ್ತದೆ. ಕೆಲವೇ ದಿನಗಳಲ್ಲಿ ಮಾದರಿ ಪ್ರಶ್ನೆ ಪತ್ರಿಕೆ ಬಿಡುಗಡೆ ಮಾಡುತ್ತೇವೆ. ಒಂದು ಕೊಠಡಿಯಲ್ಲಿ 10ರಿಂದ 12 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು. ಪರೀಕ್ಷೆ ಬರೆಯುವ ಎಲ್ಲಾ ವಿದ್ಯಾರ್ಥಿಗಳಿಗೆ n 95 ಮಾಸ್ಕ್ ವಿತರಣೆ ಮಾಡಲಾಗುತ್ತದೆ.

ಇದನ್ನೂ ಓದಿ: ರಾಜ್ಯದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು: ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಹತ್ವದ ಆದೇಶ

ಗ್ರೇಡಿಂಗ್ ಮಾದರಿಯಲ್ಲಿ ಫಲಿತಾಂಶಗಳು ಪ್ರಕಟವಾಗಲಿದ್ದು, ಕೋವಿಡ್ ಕಾರಣದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದೆ ಇದ್ದರೆ ಮತ್ತೊಂದು ಅವಕಾಶ ನೀಡಲಾಗುವುದು. ಈ ಬಾರಿ ದುಪ್ಪಟ್ಟು ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುವುದು. ಜುಲೈ ಮೂರನೇ ವಾರ sslc ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ ಎಂದರು.

Advertisement

ಪರೀಕ್ಷೆಯಲ್ಲಿ ಯಾರನ್ನೂ ಕೂಡ ಫೈಲ್ ಮಾಡುವುದಿಲ್ಲ.  ಪರೀಕ್ಷಾ ಮೇಲ್ವಿಚಾರಕರು  ಕಡ್ಡಾಯವಾಗಿ ಲಸಿಕೆ ಪಡೆದುಕೊಳ್ಳಬೇಕು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next