Advertisement

ಜುಲೈ 3ನೇ ವಾರದಲ್ಲಿ SSLC ಪರೀಕ್ಷೆ : ಮಾರ್ಗಸೂಚಿ ಬಿಡುಗಡೆ

04:39 PM Jun 23, 2021 | Team Udayavani |

ಬೆಂಗಳೂರು: ಕೋವಿಡ್ ಸೋಂಕಿನ ಎರಡನೇ ಅಲೆ ತೀವ್ರವಾದ ಕಾರಣ ಮುಂದೂಡಲ್ಪಟ್ಟಿದ್ದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಜುಲೈ ಮೂರನೇ ವಾರದಲ್ಲಿ ನಡೆಸಲು ಸರ್ಕಾರ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸಲು ಪ್ರಮಾಣಿ ಕಾರ್ಯಾಚರಣಾ ವಿಧಾನವನ್ನು ಸಿದ್ಧಪಡಿಸಲಾಗಿದೆ.

Advertisement

ಇದೀಗ ಬಿಡುಗಡೆ ಮಾಡಲಾಗಿರುವ ಎಸ್ ಓ ಪಿಯಲ್ಲಿನ ಮಾರ್ಗಸೂಚಿಯನ್ನು ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು, ಸಂಬಂಧಿಸಿದ ಇತರೆ ಇಲಾಖೆಯ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಸಮನ್ವಯ ಸಾಧಿಸಿ, ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ಆದೇಶಿಸಿದೆ.

ಮಾರ್ಗಸೂಚಿ :

  1. ಪ್ರತಿ ಪರೀಕ್ಷಾ ಕೇಂದ್ರವನ್ನು ಪರೀಕ್ಷೆಯ ಮುನ್ನಾ ಮತ್ತು ಪರೀಕ್ಷೆಯಾದ ನಂತರ 1% ಸೋಡಿಯಂ ಹೈಪೊಕ್ಲೋರೈಟ್ಸ್ ಸೆಲ್ಯೂಷನ್ ಸೋಂಕು ನಿವಾರಕ ದ್ರಾವಣವನ್ನು ಸಂಬಂಧಪಟ್ಟ ನಗರ/ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಮೂಲಕ ಸಿಂಪಡಿಸಿ ಸ್ವಚ್ಛಗೊಳಿಸುವುದು.
  2. ಪ್ರತಿ ಪರೀಕ್ಷೆಯ ಮುನ್ನಾ ಮತ್ತು ಪರೀಕ್ಷೆಯಾದ ನಂತರ ಪರೀಕ್ಷೆಯಾದ ನಂತರ ಪರೀಕ್ಷಾ ಕೇಂದ್ರದ ಎಲ್ಲಾ ಕೊಠಡಿಗಳು/ಪೀಠೋಪಕರಣಗಳನ್ನು ಮತ್ತು ಇನ್ನಿತರ ವಸ್ತುಗಳನ್ನು 2.5 % ಲೈಸೂಲ್ ಅಥವಾ ಹ್ಯಾಂಡ್ ಸ್ಯಾನಿಟೈಸರ್ನಿಂದ ಸ್ಯಾನಿಟೈಸ್ ಮಾಡುವುದು.
  3. ಪ್ರತಿ ಪರೀಕ್ಷಾ ಕೇಂದ್ರದಲ್ಲೂ, ಪರೀಕ್ಷಾ ಕೇಂದ್ರದ ಒಳಗೆ ಪ್ರವೇಶಿಸುವ ಪ್ರದೇಶ ಹಾಗೂ ಪರೀಕ್ಷಾ ಕೊಠಡಿಗಳಲ್ಲಿ ಆರು ಅಡಿ ಅಥವಾ 2 ಮೀಟರ್ ದೈಹಿಕ ಅಂತರವನ್ನು ಕಾಯ್ದುಕೊಳ್ಳಲು ಸೂಕ್ತ ವ್ಯವಸ್ಥೆ ಕಲ್ಪಿಸುವುದು.
  4. ಗ್ರಾಮೀಣ ಭಾಗದ ಶಾಲೆಗಳ ವಿದ್ಯಾರ್ಥಿಗಳು ತಾಲ್ಲೂಕು ಕೇಂದ್ರಕ್ಕೆ ಹೋಗದಂತೆ ಪರೀಕ್ಷಾ ಕೇಂದ್ರ ರಚಿಸುವುದು.
  5. ದೈಹಿಕ ಕನಿಷ್ಠ ಆರು ಅಡಿಗಳ ಅಂತರ ಕಾಪಾಡಿಕೊಳ್ಳುವುದು.
  6. ಪ್ರತಿ ಕೊಠಡಿಯಲ್ಲಿ ಗರಿಷ್ಠ 12 ಮಕ್ಕಳಿರಬೇಕು. ಒಂದು ಡೆಸ್ಕ್ ಗೆ ಒಬ್ಬ ವಿದ್ಯಾರ್ಥಿಯಂತೆ, ಒಬ್ಬ ವಿದ್ಯಾರ್ಥಿಯಿಂದ ಮತ್ತೊಬ್ಬ ವಿದ್ಯಾರ್ಥಿಯ ನಡುವೆ 6 ಅಡಿ ಅಂತರವಿರಬೇಕು.
  7. ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಗಳ ಆಸನ ವ್ಯವಸ್ಥೆಯ ಬಗ್ಗೆ ಅಂದರೆ ಯಾವ ವಿದ್ಯಾರ್ಥಿ ಯಾವ ಕೊಠಡಿಯಲ್ಲಿ ಬರೆಯುತ್ತಾನೆ ಎಂಬುದನ್ನು ಮುಂಚಿತವಾಗಿ ವಿದ್ಯಾರ್ಥಿಗಳಿಗೆ ತಿಳಿಸುವ ವ್ಯವಸ್ಥೆ ಮಾಡುವುದು. ಈ ರೀತಿ ಮಾಡುವುದರಿಂದ ವಿದ್ಯಾರ್ಥಿಗಳು ಸೂಚನಾ ಫಲಕದ ಮುಂದೆ ಗುಂಪುಗೂಡುವುದನ್ನು ತಡೆಗಟ್ಟಬಹುದು.
  8. ಪ್ರತಿ ವಿದ್ಯಾರ್ಥಿಯು ತಮ್ಮದೇ ಆದ ನೀರಿನ ಬಾಟಲಿಗಳನ್ನು ತರಲು ಅವಕಾಶ ನೀಡುವುದು. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ಬೆಳಿಗ್ಗೆ ಸಾಕಷ್ಟು ಮುಂಚಿತವಾಗಿ ಬರುವುದರಿಂದ ಅಪೇಕ್ಷೆ ಪಟ್ಟಲ್ಲಿ ತಮ್ಮ ಮನೆಯಿಂದ ಆಹಾರದ ಡಬ್ಬಿಯನ್ನು ಒಯ್ಯಲು ಅನುವು ಮಾಡಿಕೊಡುವುದು.
  9. ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿನ ಪರೀಕ್ಷಾ ಕೇಂದ್ರಗಳಲ್ಲಿ ಕೊಠಡಿಯೊಳಗೆ ಮಳೆಯ ನೀರು ಎರಚುವಿಕೆಯಿಂದ ತೊಂದರೆ ಉಂಟಾಗುತ್ತಿದೆ ಎಂದು ಭಾವಿಸಿದ್ದಲ್ಲಿ ಪರೀಕ್ಷಾ ಕೇಂದ್ರಗಳ ಕೊಠಡಿ ಲಭ್ಯತೆಗನುಸಾರವಾಗಿ ಕೊಠಡಿಗಳ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳುವುದು. ಇದಕ್ಕೆ ಅನುಗುಣವಾಗಿ ಕೊಠಡಿ ಮೇಲ್ವಿಚಾರಕರನ್ನು ನಿಯೋಜಿಸಿಕೊಳ್ಳುವುದು.
  10. ಕೆಮ್ಮ/ನೆಗಡಿ/ಜ್ವರ ಮೊದಲಾದವುಗಳಿಂದ ಬಳಲುತ್ತಿರುವ/ ಲಕ್ಷಣಗಳಿರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಕನಿಷ್ಠ ಎರಡು ಕೊಠಡಿಗಳನ್ನು ವಿಶೇಷ ಕೊಠಿಗಳೆಂದು ಹೆಸರಿಸಿ ಕಾಯ್ದಿರಿಸುವುದು.
  11. ಪ್ರತಿ ತಾಲ್ಲೂಕಿನ ಕೇಂದ್ರ ಸ್ಥಾನ ಮತ್ತು ಜಿಲ್ಲಾ ಕೇಂದ್ರ ಸ್ಥಾನಗಳಲ್ಲಿ ಕನಿಷ್ಠ ಎರಡು ಹೆಚ್ಚುವರಿ ಪರೀಕ್ಷಾ ಕೇಂದ್ರಗಳನ್ನು ಗುರುತಿಸಿ, ಅವುಗಳನ್ನು ಕಾಯ್ದಿರಿಸಿದ ಪರೀಕ್ಷಾ ಕೇಂದ್ರಗಳಾಗಿ ಇಡುವುದು.
  12. ಪರೀಕ್ಷಾ ಕೇಂದ್ರಕ್ಕೆ ಒಳಬರುವಾಗ ಮತ್ತು ಹೊರಗೆ ಹೋಗುವ ಸಮಯದಲ್ಲಿ ವಿದ್ಯಾರ್ಥಿಗಳು ಗುಂಪು-ಗುಂಪಾಗಿರಲು ಬಿಡಬಾರದು. ವಿದ್ಯಾರ್ಥಿಗಳು ಒಬ್ಬೊಬ್ಬರಾಗಿ ದೈಹಿಕ ಅಂತರವನ್ನು ಕಾಯ್ದುಕೊಂಡು ಒಳಬರಲು ಮತ್ತು ಹೊರ ಹೋಗಲು ಕ್ರಮವಹಿಸುವುದು.
  13. ಒಂದು ವೇಳೆ ವಿದ್ಯಾರ್ಥಿಯು ಸರಿಯಾದ ಅಳತೆಯುಳ್ಳು ಉತ್ತಮ ಬಟ್ಟೆ ಮಾಸ್ಕನ್ನು ಧರಿಸಿ ಪರೀಕ್ಷಾ ಕೇಂದ್ರಕ್ಕೆ ಹಾಜರಾದಲ್ಲಿ ಅನುಮತಿಸುವುದು. ಇಲ್ಲವಾದರಲ್ಲಿ ಸರಿಯಾದ ಅಳತೆಯ ಉತ್ತಮ ಬಟ್ಟೆ ಮಾಸ್ಕನ್ನು ಅಂತಹ ವಿದ್ಯಾರ್ಥಿಗಳಿಗೆ ನೀಡುವುದು. ಮುಂದುವರೆದು ಕೆಮ್ಮ/ ನೆಗಡಿ/ ಜ್ವರ ಮೊದಲಾದವುಗಳಿಂದ ಬಳಲುತ್ತಿರುವ /ಲಕ್ಷಣಗಳಿರುವ ವಿದ್ಯಾರ್ಥಿಗೆ ವೈದ್ಯಕೀಯ ತಪಾಸಣೆಗೆ ಕಳುಹಿಸುವ ಮುನ್ನಾ ಎನ್ 95 ಮಾಸ್ಕನ್ನು ನೀಡುವುದು.
  14. ಸ್ಯಾನಿಟೈಸರ್ ನ್ನು ಮಂಡಳಿಯಿಂದ ನೀಡಲಾಗುವುದು. ಆರೋಗ್ಯ ತಪಾಸಣಾ ಕೌಂಟರಿನಲ್ಲಿ ವಿದ್ಯಾರ್ಥಿಗಳಿಗೆ ಹ್ಯಾಂಡ್ ಸ್ಯಾನಿಟೈಸ್ ಮಾಡುವುದು.
Advertisement

Udayavani is now on Telegram. Click here to join our channel and stay updated with the latest news.

Next