ಅವರು, ಕೋವಿಡ್ ಹಿನ್ನೆಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ಸಮರ್ಪಕವಾಗಿ ಆಯೋಜಿಸುವುದು ಶಿಕ್ಷಣ ಇಲಾಖೆ ಹಾಗೂ ಜಿಲ್ಲಾಡಳಿತಕ್ಕೆ ಸವಾಲಾಗಿದೆ. ಪ್ರತಿಯೊಬ್ಬ ಅಧಿಕಾರಿ, ಶಿಕ್ಷಕರು ಮತ್ತು ಸಿಬ್ಬಂದಿ ವಿಶೇಷ ಎಚ್ಚರಿಕೆ ವಹಿಸಿ ಪರೀಕ್ಷೆ ನಡೆಸಬೇಕು. ಜಿಲ್ಲೆಯ ಎಲ್ಲಾ ಬಿಇಒಗಳು, ಪ್ರೌಢಶಾಲಾ ಮುಖ್ಯೋಪಾಧ್ಯಾಯರು ಎಲ್ಲಾ ವಿದ್ಯಾರ್ಥಿಗಳನ್ನು ಖುದ್ದಾಗಿ ಸಂಪರ್ಕಿಸಿ ಅವರ ಸಾರಿಗೆ ವ್ಯವಸ್ಥೆ ಖಚಿತಪಡಿಸಿಕೊಳ್ಳಬೇಕು. ಇದಕ್ಕಾಗಿ ಸೂಕ್ಷ್ಮ ಯೋಜನೆ ಮಾಡಬೇಕು. ಯಾವ ವಿದ್ಯಾರ್ಥಿಯೂ ಪರೀಕ್ಷೆಯಿಂದ ವಂಚಿತರಾಗಬಾರದು ಎಂದು ಸೂಚಿಸಿದರು.
Advertisement
ಕೋವಿಡ್ ನಿಯಂತ್ರಣ, ಮೆಕ್ಕೆಜೋಳ ಬೆಳೆದ ರೈತರು, ಆಟೋ ಚಾಲಕರು, ಕಾರ್ಮಿಕರು, ಮೊದಲಾದ ವರ್ಗಗಳಿಗೆ ಪರಿಹಾರ ವಿತರಣೆ, ಕೈಗಾರಿಕೆಗಳ ಪುನರಾರಂಭ ಸೇರಿದಂತೆ ಮತ್ತಿತರ ವಿಷಯಗಳ ಕುರಿತು ಸಭೆಯಲ್ಲಿ ಸಚಿವರು ಚರ್ಚಿಸಿದರು. ಜಿಲ್ಲಾ ಸರ್ವೆಕ್ಷಣಾಧಿಕಾರಿ ಡಾ| ಸುಜಾತಾ ಹಸವೀಮಠ ಕೋವಿಡ್ ಅಂಕಿ-ಅಂಶ ನೀಡಿದರು. ಡಿಸಿ ದೀಪಾ ಚೋಳನ್, ಪೊಲೀಸ್ ಆಯುಕ್ತ ಆರ್. ದಿಲೀಪ್, ಎಸ್‌ಪಿ ವರ್ತಿಕಾ ಕಟಿಯಾರ್, ಜಿಪಂ ಸಿಇಒ ಡಾ| ಬಿ.ಸಿ. ಸತೀಶ, ಕಿಮ್ಸ್ ನಿರ್ದೇಶಕ ಡಾ| ರಾಮಲಿಂಗಪ್ಪ ಅಂಟರತಾನಿ, ಅಪರ ಜಿಲ್ಲಾಧಿಕಾರಿ ಶಿವಾನಂದ ಕರಾಳೆ, ಮಹಾನಗರಪಾಲಿಕೆ ಆಯುಕ್ತ ಡಾ|ಸುರೇಶ್ ಇಟ್ನಾಳ, ಡಿಡಿಪಿಐ ಮೋಹನ ಹಂಚಾಟೆ ಇದ್ದರು.
ಧಾರವಾಡ: ಜೂ. 25ರಿಂದ ಜು. 4ರ ವರೆಗೆ ಜರುಗುವ ಎಸ್ಸೆಸ್ಸೆಲ್ಸಿ ಪರೀಕ್ಷೆಗಳಲ್ಲಿ ಅವ್ಯವಹಾರ ತಡೆಗಟ್ಟಲು ಹಾಗೂ ಪರೀಕ್ಷೆ ಸುವ್ಯವಸ್ಥಿತವಾಗಿ ಜರುಗಿಸಲು ಜಿಲ್ಲಾ ಮತ್ತು ತಾಲೂಕು ಮಟ್ಟದಲ್ಲಿ ಜಾಗೃತ ದಳಗಳನ್ನು ರಚಿಸಲಾಗಿದ್ದು, ವೀಕ್ಷಕರನ್ನೂ ನೇಮಿಸಲಾಗಿದೆ. ಜಿಲ್ಲಾಮಟ್ಟದ ಜಾಗೃತ ದಳವನ್ನು ಡಿಸಿ ಅಧ್ಯಕ್ಷತೆಯಲ್ಲಿ ಹಾಗೂ ತಾಲೂಕುಮಟ್ಟದ ಜಾಗೃತ ದಳವನ್ನು ಎಸಿ ಅಧ್ಯಕ್ಷತೆಯಲ್ಲಿ ರಚಿಸಲಾಗಿದೆ. ಜಿಲ್ಲೆಯಲ್ಲಿ 90 ಪರೀಕ್ಷಾ ಕೇಂದ್ರಗಳು ಹಾಗೂ 17 ಉಪಕೇಂದ್ರಗಳು ಇದ್ದು, ಜಿಲ್ಲೆಯ ಎಲ್ಲಾ ತಾಲೂಕಾ ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳಲ್ಲಿ ಅವ್ಯವಹಾರ ತಡೆಗಟ್ಟಲು ವೀಕ್ಷಕರನ್ನು, ವಿಶೇಷ ವೀಕ್ಷಕರನ್ನು ಸಹ ನೇಮಿಸಲಾಗಿದೆ ಎಂದು ಡಿಸಿ ದೀಪಾ ಚೋಳನ್ ತಿಳಿಸಿದ್ದಾರೆ ಹೇಳಿದ್ದಾರೆ.