Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ ಪರಿಶೀಲನೆ

04:41 AM Jun 19, 2020 | Team Udayavani |

ಚಾಮರಾಜನಗರ: ಜಿಲ್ಲೆಯಲ್ಲಿ ಜೂನ್‌ 25ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕೈಗೊಂಡಿರುವ ಸಿದ್ಧತೆಗಳನ್ನು ಡೀಸಿ ಡಾ. ಎಂ.ಆರ್‌.ರವಿ ಪರಿಶೀಲಿಸಿದರು. ನಗರದ ಜಿಲ್ಲಾಧಿಕಾರಿ ಗಳ ಕಚೇರಿ ಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ  ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್‌ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲನೆ ಮಾಡಬೇಕು.

Advertisement

ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಮಾಸ್ಕ್, ಸ್ಯಾನಿಟೈಸರ್‌ ನೀಡುವ ಜೊತೆಗೆ  ಸಾಮಾಜಿಕ ಅಂತರದ ಮಹತ್ವದ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಸುರಕ್ಷತಾ ಕ್ರಮಗಳೊಂದಿಗೆ ಪರೀಕ್ಷೆ ನಡೆಯಲು ನಿಗಾವಹಿಸಬೇಕು ಎಂದರು. ಆರೋಗ್ಯ ತಪಾಸಣೆ: ಪರೀಕ್ಷಾ ಕೇಂದ್ರದ ಪ್ರವೇಶದ್ವಾರದಲ್ಲಿಯೇ ಆರೋಗ್ಯ ತಪಾ  ಸಣಾ ಕೌಂಟರ್‌ಗಳನ್ನು ತೆರೆಯಲು ಸೂಚಿಸಲಾಗಿದೆ.

ಕೌಂಟರ್‌ಗಳಲ್ಲಿ ಆರೋಗ್ಯ ಸಿಬ್ಬಂದಿ ನೇಮಕ ಮಾಡ ಲಾಗಿದೆ. ಜೊತೆಗೆ ಇಲಾಖೆಯ ಅಧಿಕಾರಿ, ಸಿಬ್ಬಂದಿ ನಿಯೋಜಿಸಲಾಗಿದೆ. ನೇಮಕವಾಗಿರುವವರು ಸರಿಯಾದ ಸಮಯಕ್ಕೆ ವರದಿ  ಮಾಡಿಕೊಂಡಿದ್ದಾ ರೆಯೇ ಎಂಬ ಬಗ್ಗೆ ಖಾತರಿ ಪಡಿಸಿಕೊಳ್ಳ ಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ವಿದ್ಯಾರ್ಥಿಗಳಿಗೆ ಬಸ್‌ ವ್ಯವಸ್ಥೆ ಬಗ್ಗೆ ಮತ್ತೂಮ್ಮೆ ನಿಗಾವಹಿಸಿ ಸುರಕ್ಷಿತವಾಗಿ ಪರೀಕ್ಷಾ ಕೇಂದ್ರಗಳಿಗೆ ಕರೆತಂದು ಪುನಃ ಗ್ರಾಮಗಳಿಗೆ   ಕಳುಹಿಸಿಕೊಡಲು ವಿಶೇಷ ಗಮನ ನೀಡಬೇಕು ಎಂದು ಸೂಚನೆ  ನೀಡಿದರು.

ಉಪವಿಭಾಗಾಧಿಕಾರಿ ನಿಖೀತಾ, ಡಿಎಚ್‌ಒ ಡಾ.ಎಂ.ಸಿ.ರವಿ,  ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಸುರೇಶ್‌, ಪ.ಪೂ.ಇಲಾಖೆಯ ಉಪ  ನಿರ್ದೇಶಕ ಕೃಷ್ಣಮೂರ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜವರೇಗೌಡ, ಶ್ರೀನಿವಾಸ್‌, ಶಿವಶಂಕರ್‌, ಡಿವೈಎಸ್‌ಪಿ ನವೀನ್‌ಕುಮಾರ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next