Advertisement
2 ಖಾಸಗಿ ಕೇಂದ್ರ ಸಹಿತವಾಗಿ 58 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಕೊಠಡಿ ಮೇಲ್ವಿಚಾರಕರು, ವಿಚಕ್ಷಣದ ದಳ ಸಿಬಂದಿ ನಿಯೋಜನೆಯೂ ಪೂರ್ಣಗೊಂಡಿದೆ. ಜಿಲ್ಲೆಯ 266 ಪ್ರೌಢಶಾಲೆಯ 7,229 ಬಾಲಕರು, 6,793 ಬಾಲಕಿಯರು ಸೇರಿ 14,022 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ 13,672 ಹೊಸ ಹಾಗೂ 350 ಪುನರಾವರ್ತಿತ, ಖಾಸಗಿ ವಿದ್ಯಾರ್ಥಿಗಳು ಇದ್ದಾರೆ.
Related Articles
Advertisement
ಕೊರೊನಾ ಮುಂಜಾಗೃತಿಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ವಿದ್ಯಾರ್ಥಿಯಿಲ್ಲ. ಆದರೂ, ಪರೀಕ್ಷಾ ಕೇಂದ್ರವನ್ನು ಸಂಪೂರ್ಣವಾಗಿ ಸುರಕ್ಷಿತವಾಗಿಡಲು ಸ್ಯಾನಿಟೈಸೇಷನ್ ಮಾಡಲಾಗಿದೆ. ವಿದ್ಯಾರ್ಥಿಗಳಿಗೆ, ಮೇಲ್ವಿಚಾರಕರಿಗೆ ಹಾಗೂ ಭದ್ರತಾ ಸಿಬಂದಿ ಸಹಿತ ಎಲ್ಲರಿಗೂ ಮಾಸ್ಕ್ ಕಡ್ಡಾಯ ಮಾಡಲಾಗಿದೆ. ಎಲ್ಲ ಕೇಂದ್ರದಲ್ಲೂ ವಿಶೇಷ ಕೊಠಡಿ ಇರುತ್ತದೆ. ಆರೋಗ್ಯ ತಪಾಸಣೆ, ಥರ್ಮಲ್ ಸ್ಕ್ರೀನಿಂಗ್ ನಡೆಸಲಾಗುತ್ತದೆ. ದಿಢೀರ್ ಅಸ್ವಸ್ಥತೆಗೆ ಒಳಗಾದ ವಿದ್ಯಾರ್ಥಿಗೆ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಲಾಗಿದೆ. ಯಾವುದಕ್ಕೆಲ್ಲ ಅವಕಾಶವಿಲ್ಲ?
ಪರೀಕ್ಷಾ ಕೊಠಡಿಯ ಒಳಗೆ ಮೊಬೈಲ್, ಸ್ಮಾರ್ಟ್ ವಾಚ್, ಕೆಮರಾ, ಅತ್ಯಾಧುನಿಕ ಕ್ಯಾಲ್ಕುಲೇಟರ್ ಸಹಿತವಾಗಿ ಯಾವುದೇ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಕೊಂಡೊಯ್ಯಲು ಅವಕಾಶ ಇಲ್ಲ. ಪರೀಕ್ಷಾ ಕೇಂದ್ರದ ಮೊಬೈಲ್ ಸ್ವಾಧೀನ ಅಧಿಕಾರಿಗಳು ಮೇಲ್ವಿಚಾರಣೆ ಮಾಡಲಿದ್ದಾರೆ. ಸಕಲ ವ್ಯವಸ್ಥೆ
ಜಿಲ್ಲೆಯಲ್ಲಿ ವಿದ್ಯಾರ್ಥಿಗಳು ಸುಗಮವಾಗಿ ಪರೀಕ್ಷೆ ಬರೆಯಲು ಬೇಕಾದ ಎಲ್ಲ ವ್ಯವಸ್ಥೆ ಮಾಡಿದ್ದೇವೆ. ಪರೀಕ್ಷಾ ದಿನ ಗ ಳಲ್ಲಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ.
-ಗೋವಿಂದ ಮಡಿವಾಳ, ಡಿಡಿಪಿಐ, ಉಡುಪಿ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ವಿದ್ಯಾರ್ಥಿಗಳು ಇಲ್ಲ. ಆದರೆ, ಎಲ್ಲ ಕೇಂದ್ರದಲ್ಲೂ ವಿದ್ಯಾರ್ಥಿಗಳ ಸುರಕ್ಷತೆಗೆ ಆದ್ಯತೆ ನೀಡಲಾಗಿದೆ. ಮಾಸ್ಕ್ ಕಡ್ಡಾಯವಾಗಿದೆ. – ಜಾಹ್ನವಿ ಸಿ., ಎಸೆಸೆಲ್ಸಿ ಜಿಲ್ಲಾ ನೋಡಲ್ ಅಧಿಕಾರಿ