Advertisement

ಆಗಸ್ಟ್ 10ರಂದು ಎಸ್ಎಸ್ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟ: ಸಚಿವ ಸುರೇಶ್ ಕುಮಾರ್

03:58 PM Aug 07, 2020 | keerthan |

ಬೆಂಗಳೂರು: ಎಸ್ಎಸ್ಎಲ್ ಸಿ ಪರೀಕ್ಷೆಯ ಫಲಿತಾಂಶವನ್ನು ಮುಂದಿನ ಸೋಮವಾರ ( ಆಗಸ್ಟ್ 10) ರಂದು ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಲಾಗುವುದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

Advertisement

ಈ ಬಗ್ಗೆ ತನ್ನ ಫೇಸ್ ಬುಕ್ ಖಾತೆಯಲ್ಲಿ ಸ್ಪಷ್ಟಪಡಿಸಿರುವ ಸುರೇಶ್ ಕುಮಾರ್ ಅವರು ಮಧ್ಯಾಹ್ನ ಮೂರು ಗಂಟೆಗೆ ಫಲಿತಾಂಶ ಪ್ರಕಟಿಸಲಾಗುವುದು ಎಂದಿದ್ದಾರೆ.

ಜೂನ್ 25ರಿಂದ ಜುಲೈ 4ರವರೆಗೆ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ನಡೆಸಲಾಗಿತ್ತು.

ಮಾರ್ಚ್ ಅಂತ್ಯದಲ್ಲಿ ನಡೆಯಬೇಕಿದ್ದ ಪರೀಕ್ಷೆಯು ಕೋವಿಡ್-19 ಸೋಂಕು ಕಾರಣದಿಂದ ಮುಂದೂಡಲಾಗಿತ್ತು. ನಂತರ ಪರ ವಿರೋಧ ಚರ್ಚೆಯ ನಡುವೆ ಸೂಕ್ತ ಸುರಕ್ಷಿತಾ ಕ್ರಮಗಳೊಂದಿಗೆ ಜೂನ್ 25ರಿಂದ ಪರೀಕ್ಷೆ ನಡೆಸಲಾಗಿತ್ತು. ಪರೀಕ್ಷಾ ಕೊಠಡಿಗಳನ್ನು ಸ್ಯಾನಿಟೈಸ್ ಮಾಡಿ, ಕೊಠಡಿ ಪ್ರವೇಶಕ್ಕೆ ಮುನ್ನ ಥರ್ಮಲ್ ಟೆಸ್ಟ್ ನಡೆಸಿ, ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು.

ಎಲ್ಲ ಇಲಾಖೆಗಳ ಸಹಯೋಗದೊಂದಿಗೆ ರಾಜ್ಯದ ಸುಮಾರು ಎರಡು ಸಾವಿರಕ್ಕೂ ಅಧಿಕ ಪರೀಕ್ಷಾ ಕೇಂದ್ರದಲ್ಲಿ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಆ ಎಲ್ಲ ವಿದ್ಯಾರ್ಥಿಗಳ ಫಲಿತಾಂಶ ಸೋಮವಾರ ಹೊರಬೀಳಲಿದೆ.

Advertisement

ಸರಿ ಸುಮಾರು ಶೇ.98ರಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. ಕೋವಿಡ್ ಕಾರಣದಿಂದಾಗಿ ಕಂಟೈನ್ಮೆಂಟ್ ವಲಯ ಹಾಗೂ ಆರೋಗ್ಯ ಸಮಸ್ಯೆಯಿದ್ದ ಮಕ್ಕಳಿಗೆ ಪ್ರತ್ಯೇಕ ಕೊಠಡಿಯಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಹಾಗೆಯೇ ಹೊರ ರಾಜ್ಯದ 500ಕ್ಕೂ ಅಧಿಕ ಮಕ್ಕಳಿಗೆ ಗಡಿ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡಲಾಗಿತ್ತು. ಪರೀಕ್ಷಾ ಕೇಂದ್ರದಲ್ಲಿ ಮಕ್ಕಳ ಸುರಕ್ಷತೆಗೆ ಹೆಚ್ಚಿನ ಆದ್ಯತೆ ನೀಡಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next