Advertisement

ಕೋವಿಡ್ ಆತಂಕದ ನಡುವೆ ಬೆಳಗಾವಿ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭ

10:59 AM Jun 25, 2020 | keerthan |

ಬೆಳಗಾವಿ: ಕೋವಿಡ್-19 ಆತಂಕ, ಪಾಲಕರ ಪರ-ವಿರೋಧ ಅಭಿಪ್ರಾಯದ ಮಧ್ಯೆಯೂ ಬೆಳಗಾವಿ ಜಿಲ್ಲೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಆರಂಭಗೊಂಡಿದೆ.

Advertisement

ಅಗತ್ಯ ಸುರಕ್ಷತಾ ಕ್ರಮ ಕೈಗೊಂಡು, ಸುಗಮವಾಗಿ ಪರೀಕ್ಷೆ ನಡೆಸುವ ನಿಟ್ಟಿನಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಜ್ಜಾಗಿದೆ. ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹೆಚ್ಚಿನ ಗಮನಹರಿಸಲಾಗಿದೆ.

ಬೆಳಗಾವಿ ಶೈಕ್ಷಣಿಕ ಜಿಲ್ಲೆಯ ಏಳು ವಲಯಗಳಲ್ಲಿ 124 ಪರೀಕ್ಷಾ ಕೇಂದ್ರಗಳಿವೆ. 33,590 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯಲ್ಲಿ 147 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು ಒಟ್ಟು 40781 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದಾರೆ.

ನಕಲು ತಡೆಯುವ ದೃಷ್ಟಿಯಿಂದ ಎಲ್ಲ ಪರೀಕ್ಷಾ ಕೇಂದ್ರಗಳಲ್ಲೂ ಸಿಸಿ ಕ್ಯಾಮರಾ ಅಳವಡಿಸಲಾಗಿದೆ.

Advertisement

124 ಸ್ಥಾನಿಕ ಜಾಗೃತ ದಳಗಳು ಪರೀಕ್ಷಾ ಚಟುವಟಿಕೆ ಮೇಲೆ ನಿಗಾವಹಿಸಲಿವೆ. 104 ಮುಖ್ಯ ಅಧೀಕ್ಷಕರು, 30 ಉಪ ಮುಖ್ಯ ಅಧೀಕ್ಷಕರು, 1,923 ಕೊಠಡಿ ಮೇಲ್ವಿಚಾರಕರು, 44 ಮಾರ್ಗಾಧಿಕಾರಿಗಳು ಹಾಗೂ 65 ಜಿಲ್ಲಾಮಟ್ಟದ ವೀಕ್ಷಕರು ಕಾರ್ಯ ನಿರ್ವಹಿಸಲಿದ್ದಾರೆ.

ಪ್ರತಿಯೊಬ್ಬ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಮಾಡಿ ಒಳಬಿಡಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next