Advertisement
ಈ ಬಾರಿಯ ಪರೀಕ್ಷೆಗೆ 4,41,910 ಬಾಲಕರು ಮತ್ತು 4,28,058 ಬಾಲಕಿಯರು ಸೇರಿ ಒಟ್ಟು 8,69,968 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಈ ಪೈಕಿ 8,10,368 ಶಾಲಾ ವಿದ್ಯಾರ್ಥಿಗಳು, 18,225 ಖಾಸಗಿ ವಿದ್ಯಾರ್ಥಿಗಳು ಹಾಗೂ 41,375 ಪುನರಾವರ್ತಿತ ವಿದ್ಯಾರ್ಥಿಗಳಿದ್ದಾರೆ. 5,424 ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
Related Articles
Advertisement
ಜಿಲ್ಲಾಧಿಕಾರಗಳ ಹಂತದಲ್ಲಿ ವಿಚಕ್ಷಣ ಜಾಗೃತದಳ ನೇಮಿಸಲು ತಿಳಿಸಲಾಗಿದೆ. ಇಲಾಖೆಯ ವಿವಿಧ ಹಂತದ ಅಧಿಕಾರಿಗಳನ್ನು ಪರೀಕ್ಷಾ ಕೇಂದ್ರಗಳಿಗೆ ಸ್ಥಾನಿಕ ಜಾಗೃತ ದಳದ ಅಧಿಕಾರಿಗಳನ್ನಾಗಿ ನೇಮಿಸಲಾಗಿದೆ. ಕನ್ನಡ, ಆಂಗ್ಲ, ಹಿಂದಿ, ತೆಲುಗು, ತಮಿಳು, ಉರ್ದು ಮತ್ತು ಮರಾಠಿ ಸೇರಿ ಒಟ್ಟು 7 ಮಾಧ್ಯಮಗಳಲ್ಲಿ ಪರೀಕ್ಷೆ ನಡೆಯುತ್ತಿದೆ.
ಎಸ್‌ಎಸ್‌ಎಲ್‌ಸಿಯಲ್ಲಿ ಮೊದಲ ಬಾರಿಗೆ ಮೂರು ಅಂತಿಮ ಪರೀಕ್ಷೆ ಬರೆಯುವ ಅವಕಾಶವನ್ನು ನೀಡಲಾಗಿದೆ. ಸೋಮವಾರದಿಂದ ಮೊದಲ ಪರೀಕ್ಷೆ ಆರಂಭಗೊಳ್ಳಲಿದ್ದು ಏ.6ರವರೆಗೆ ನಡೆಯಲಿದೆ.ಏತನ್ಮಧ್ಯೆ ಹೈಕೋರ್ಟ್‌ನ ಅನುಮತಿಯ ಮೇರೆಗೆ ಸೋಮವಾರದಿಂದ 5,8 ಮತ್ತು 9ನೇ ತರಗತಿಯ ಮೌಲ್ಯಾಂಕನ ಪರೀಕ್ಷೆಯು ನಡೆಯಲಿದೆ.
ಸಿಸಿ ಕ್ಯಾಮರಾ ಅಳವಡಿಕೆಎಲ್ಲ 2,750 ಪರೀಕ್ಷಾ ಕೇಂದ್ರಗಳಲ್ಲಿ ಬಿಗಿ ಭದ್ರತೆ ವಹಿಸಲಾಗಿದ್ದು ಹೆಚ್ಚುವರಿ ನಿಗಾ ಇಡುವ ಉದ್ದೇಶದಿಂದ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ. ಸಿಸಿಟಿವಿ ಕ್ಯಾಮರಾ ಮೂಲಕ ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಪರೀಕ್ಷಾ ಅವ್ಯವಹಾರಗಳು ನಡೆದರೂ ಪತ್ತೆ ಹಚ್ಚಲಾಗುತ್ರದೆ ಎಂದು ಪರೀಕ್ಷಾ ಮಂಡಳಿ ಹೇಳಿದೆ.