ಮಂಗಳೂರು: ಕೋವಿಡ್-19 ಸೋಂಕು ಆತಂಕದ ಕಾರಣ ಮುಂದೂಡಿಕೆಯಾಗಿದ್ದ ರಾಜ್ಯದ ಎಸ್ಎಸ್ಎಲ್ ಸಿ ಪರೀಕ್ಷೆಗಳು ಬಹು ಚರ್ಚೆಯ ನಂತರ ಇಂದು ಆರಂಭವಾಗಲಿದೆ. ಮುಂದಿನ ಹತ್ತು ದಿನಗಳ ಕಾಲ ಪರೀಕ್ಷೆ ನಡೆಸಲಾಗುತ್ತಿದ್ದು, ಸರ್ಕಾರ ಸಕಲ ಸಿದ್ದತೆ ಮಾಡಿಕೊಂಡಿದೆ.
ಮಂಗಳೂರಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಗೆ ಸಿದ್ಧತೆ ಪೂರ್ಣವಾಗಿದ್ದು, ವಿದ್ಯಾರ್ಥಿಗಳು ಹೆತ್ತವರೊಂದಿಗೆ ಶಾಲೆಗೆ ಬರುತ್ತಿರುವ ದೃಶ್ಯ ಕಂಡುಬಂತು.
ಪ್ರತಿ ವಿದ್ಯಾರ್ಥಿಗಳ ಥರ್ಮಲ್ ಸ್ಕ್ರೀನಿಂಗ್ ಮಾಡಲು ಬಾಕ್ಸ್ ರಚನೆ ಮಾಡಲಾಗಿದ್ದು, ಪರೀಕ್ಷಾ ಕೊಠಡಿಗೆ ತೆರಳುವ ಮುನ್ನ ಪ್ರತೀ ವಿದ್ಯಾರ್ಥಿಗಳನ್ನು ಥರ್ಮಲ್ ಸ್ಕ್ರೀನಿಂಗ್ ಮಾಡಲಾಗುತ್ತಿದೆ.
ಪ್ರತೀ ವಿದ್ಯಾರ್ಥಿಗಳಿಗೆ ಸ್ಯಾನಿಟೈಸರ್ ವಿತರಣೆಗೆ ಮಾಡಲಾಗುವುದು, ಪ್ರತಿ ಶಾಲೆಗೆ ಇಬ್ಬರು ಪೊಲೀಸರು, ಇಬ್ಬರು ಸ್ಕೌಟ್ & ಗೈಡ್ಸ್ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗುವುದು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 95 ಪರೀಕ್ಷಾ ಕೇಂದ್ರಗಳಿದ್ದು, 30,368 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ನೆರೆಯ ಕಾಸರಗೋಡು ಜಿಲ್ಲೆಯಿಂದಲೂ ವಿದ್ಯಾರ್ಥಿಗಳು ಆಗಮಿಸಲಿದ್ದು, 367 ಮಂದಿ ವಿದ್ಯಾರ್ಥಿಗಳು ಕಾಸರಗೋಡಿನಿಂದ ಮಂಗಳೂರಿಗೆ ಬಂದು ಪರೀಕ್ಷೆ ಬರೆಯಲಿದ್ದಾರೆ.