Advertisement

ಎಸ್ಸೆಸ್ಸೆಲ್ಸಿ ಪರೀಕ್ಷೆ ಶಾಂತಿಯುತ: ಡಿಬಾರ್‌ ಇಲ್ಲ

01:22 PM Mar 31, 2017 | |

ಧಾರವಾಡ: ಎಸ್ಸೆಸ್ಸೆಲ್ಸಿ ಪರೀಕ್ಷೆಗಳು ಆರಂಭಗೊಂಡಿದ್ದು, ಗುರುವಾರ ಜರುಗಿದ ಪ್ರಥಮ ಭಾಷೆಗೆ ಜಿಲ್ಲೆಯ 91 ಕೇಂದ್ರಗಳಲ್ಲಿ ಒಟ್ಟು 26,763 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಶಾಂತಿಯುತ ಪರೀಕ್ಷೆ ನಡೆದಿದೆ. 91 ಕೇಂದ್ರಗಳ ಪೈಕಿ ಒಟ್ಟು 76 ಕೇಂದ್ರಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಿಕ್ಷಣ ಇಲಾಖೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿತ್ತು.

Advertisement

ಪ್ರಥಮ ಭಾಷೆ ಪರೀಕ್ಷೆಯಲ್ಲಿ ಯಾವ ವಿದ್ಯಾರ್ಥಿಗಳೂ ನಕಲು ಮಾಡಿದ ಪ್ರಕರಣಗಳು ಬೆಳಕಿಗೆ ಬಂದಿಲ್ಲ. ಡಿಬಾರ್‌ ಆಗಿಲ್ಲ. 14,236 ವಿದ್ಯಾರ್ಥಿಗಳು, 13,346 ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 27,582 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಬೇಕಿತ್ತು. ಆದರೆ, 13,660 ವಿದ್ಯಾರ್ಥಿಗಳು, 13,103  ವಿದ್ಯಾರ್ಥಿನಿಯರು ಸೇರಿದಂತೆ ಒಟ್ಟು 26,763 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿದ್ದರು.

819 ವಿದ್ಯಾರ್ಥಿ, ವಿದ್ಯಾರ್ಥಿನಿಯರು ಪರೀಕ್ಷೆಗೆ ಗೈರಾಗಿದ್ದರು. ಆ  ಪೈಕಿ 276 ವಿದ್ಯಾರ್ಥಿಗಳು, 243 ಜನ ವಿದ್ಯಾರ್ಥಿನಿಯರು ಪರೀಕ್ಷೆಗೆ ಹಾಜರಾಗಿರಲಿಲ್ಲ. ಎಲ್ಲಾ ಪರೀûಾ ಕೇಂದ್ರಗಳಿಗೆ ನಿಗದಿತ ಸಮಯಕ್ಕೆ ಸರಿಯಾಗಿ ಪ್ರಶ್ನೆ ಪತ್ರಿಕೆಗಳನ್ನು  ತಲುಪಿಸಲಾಗಿತ್ತು. ಯಾವ ಕೇಂದ್ರದಲ್ಲೂ ತಡವಾಗಿ ಪರೀಕ್ಷೆ ಆರಂಭವಾದ ಬಗ್ಗೆ ವರದಿಯಾಗಿಲ್ಲ. ಎಂದು ಡಿಡಿಪಿಐ ಎನ್‌.ಎಚ್‌.ನಾಗೂರ ತಿಳಿಸಿದ್ದಾರೆ. 

ಮಕ್ಕಳಿಗೆ ಶುಭ ಕೋರಿಕೆ: ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ಹಾಜರಾಗಲು ಬಂದ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಪೋಷಕರು, ಕೆಲ ಸಂಘಟನೆಗಳ ಕಾರ್ಯಕರ್ತರು ಹೂ ನೀಡಿ ಪರೀಕ್ಷೆ ಚೆನ್ನಾಗಿ ಬರೆಯುವಂತೆ ಶುಭ ಕೋರಿದರು. 

Advertisement

Udayavani is now on Telegram. Click here to join our channel and stay updated with the latest news.

Next