ಬೆಂಗಳೂರು: ಪ್ರಸಕ್ತ ಸಾಲಿನ ಎಸೆಸೆಲ್ಸಿ ಪರೀಕ್ಷೆ ಫಲಿತಾಂಶವು ಮೇ 18- ಮೇ 20ರೊಳಗೆ ಪ್ರಕಟವಾಗುವ ಸಾಧ್ಯತೆಗಳಿವೆ ಎಂದು ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ.
ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೌಲ್ಯಮಾಪನವನ್ನು ಪೂರ್ಣಗೊಳಿಸಿದ್ದು, ತಾಂತ್ರಿಕ ಕಾರ್ಯಗಳು ನಡೆಯುತ್ತಿವೆ.
ಈಗಾಗಲೇ ಘೋಷಿಸಿರುವಂತೆ ಮೇ 2ನೇ ವಾರದಲ್ಲಿ ಫಲಿತಾಂಶ ಪ್ರಕಟಿಸಬೇಕಿತ್ತು. ಆದರೆ ದ್ವಿತೀಯ ಪಿಯುಸಿ ಪರೀಕ್ಷೆ ನಡೆಯುತ್ತಿರುವುದರಿಂದ ಅದು ಮುಗಿದ ಬಳಿಕ ಎಸೆಸೆಲ್ಸಿ ಫಲಿತಾಂಶ ಪ್ರಕಟಿಸುವ ಚಿಂತನೆ ನಡೆಸಿದೆ.
ಮೇ 18ಕ್ಕೆ ಪಿಯುಸಿ ಪರೀಕ್ಷೆ ಮುಗಿಯಲಿದ್ದು, ಅನಂತರ ಎಸೆಸೆಲ್ಸಿ ಫಲಿತಾಂಶ ಪ್ರಕಟಿಸಲಾಗುತ್ತದೆ ಎಂದು ಇಲಾಖೆಯ ಉನ್ನತ ಮೂಲಗಳು ತಿಳಿಸಿವೆ.
Related Articles
ಎಸೆಸೆಲ್ಸಿ ಉತ್ತರ ಪತ್ರಿಕೆ ಸ್ಕಾ éನ್
ಪ್ರತಿ ವೆಬ್‌ಸೈಟ್‌ನಲ್ಲೇ ಲಭ್ಯ
ಎಸೆಸೆಲ್ಸಿ ಮರು ಮೌಲ್ಯಮಾಪನ, ಅಂಕ ಮರು ಎಣಿಕೆ ಬಯಸುವ ವಿದ್ಯಾರ್ಥಿಗಳು ಈ ವರ್ಷದಿಂದ ಪರೀಕ್ಷಾ ಮಂಡಳಿಯ ವೆಬ್‌ಸೈಟ್‌ನಲ್ಲೇ ಉತ್ತರ ಪತ್ರಿಕೆ ಪಡೆಯಬಹುದು. ಅರ್ಜಿ ಸಲ್ಲಿಸಿದವರಿಗೆ ಮಂಡಳಿ ನೋಂದಣಿ ಸಂಖ್ಯೆ ನೀಡುತ್ತದೆ. ಅದನ್ನು ದಾಖಲಿಸಿದರೆ ಉತ್ತರಪತ್ರಿಕೆಯ ನಕಲು ಪ್ರತಿ ಸಿಗಲಿದ್ದು, ಡೌನ್‌ಲೋಡ್ ಮಾಡಬಹುದು ಎಂದು ಪರೀಕ್ಷಾ ಮಂಡಳಿ ತಿಳಿಸಿದೆ.