Advertisement

ಈ ಬಾರಿಯ ಎಸ್ ಎಸ್ ಎಲ್ ಸಿ ಪರೀಕ್ಷಾ ಮಾದರಿಯಲ್ಲಿ ಕೊಂಚ ಬದಲಾವಣೆ : ಅನ್ಬು ಕುಮಾರ್

06:48 PM Mar 03, 2021 | Team Udayavani |

ಬೆಂಗಳೂರು :  ಎಸ್ ಎಸ್ ಎಲ್ ಸಿ ಪರೀಕ್ಷೆ ಯ ವೇಳಾ ಪಟ್ಟಿಯನ್ನು ಈಗಾಗಲೇ ಶಿಕ್ಷಣ ಇಲಾಖೆ ಪ್ರಕಟ ಮಾಡಿದೆ. ಈ ಬಾರಿಯ ಪ್ರಶ್ನೆ ಪತ್ರಿಕೆ ಮಾದರಿಯಲ್ಲಿ ಸ್ವಲ್ಪ ಬದಲಾವಣೆ ಮಾಡಲಾಗಿದ್ದು, ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳನ್ನು ಹೆಚ್ಚಿಸಲಾಗಿದೆ. ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಅನ್ಬು ಕುಮಾರ್ ತಿಳಿಸಿದ್ದಾರೆ.

Advertisement

ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಾಮಾನ್ಯವಾಗಿ ಪ್ರತಿ ವರ್ಷ 20 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳಿರುತ್ತವೆ. ಆದರೆ ಈ ಬಾರಿ ಇದರ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಈ ಬಾರಿ 30 ಅಂಕಗಳಿಗೆ ಮಲ್ಟಿಪಲ್ ಚಾಯ್ಸ್ ಪ್ರಶ್ನೆಗಳಿರಲಿವೆ ಎಂದು ಇಲಾಖೆ ಹೇಳಿದೆ.

ಇನ್ನು, ಎಸ್ ಎಸ್ ಎಲ್ ಸಿ ಪರೀಕ್ಷೆಯ ಅಂಕಗಳಲ್ಲಿಯೂ ಯಾವುದೇ ರೀತಿಯ ವ್ಯತ್ಯಾಸಗಳಿರುವುದಿಲ್ಲ. 100 ಅಂಕಗಳಿಗೆ ಪರೀಕ್ಷೆ ನಡೆಯುತ್ತದೆ. ಇದರಲ್ಲಿ 20 ಅಂಕಗಳಿಗೆ ಆಂತರಿಕ ಪರೀಕ್ಷೆ  ಮತ್ತು 80 ಅಂಕಗಳಿಗೆ  ಮುಖ್ಯ ಪರೀಕ್ಷೆ ನಡೆಯುತ್ತದೆ. ಉಳಿದಂತೆ, ಪರೀಕ್ಷೆ ಎಸ್ ಎಸ್ಎಲ್ ಸಿ ಬೋರ್ಡ್ ಸ್ಟಾಂಡರ್ಡ್ ನಂತೆಯೇ ನಡೆಯಲಿದೆ ಎಂದು ಅನ್ಬು ಕುಮಾರ್ ಮಾಹಿತಿ ನೀಡಿದ್ದಾರೆ.

ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷಾ ವೇಳಾ ಪಟ್ಟಿ  ಪ್ರಕಟವಾಗಿದ್ದು, ಜೂನ್ 21ರಿಂದ ಜುಲೈ 5ರವರೆಗೆ ಎಸ್ ಎಸ್ಎಲ್ ಸಿ ಪರೀಕ್ಷೆ ನಡೆಯಲಿದೆ.

ಓದಿ :  ಕಲ್ಯಾಣ ಕರ್ನಾಟಕ ಭಾಗದ ವಿದ್ಯಾರ್ಥಿಗಳ ಹಾಸ್ಟೆಲ್ ನಿರ್ಮಾಣಕ್ಕೆ ಸಚಿವ ಸಂಪುಟ ಅನುಮೋದನೆ

Advertisement
Advertisement

Udayavani is now on Telegram. Click here to join our channel and stay updated with the latest news.

Next