Advertisement

ಎಸ್ಸೆಸ್ಸೆಲ್ಸಿ ಉತ್ತಮ ಫ‌ಲಿತಾಂಶ ಪಡೆದ ಶಾಲೆಗೆ ಬಹುಮಾನ

06:40 AM Jun 18, 2020 | Lakshmi GovindaRaj |

ಹಾಸನ: ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫ‌ಲಿತಾಂಶದಲ್ಲಿ ಜಿಲ್ಲೆಯಲ್ಲಿ ಮೊದಲ ಸ್ಥಾನಗಳಿಸುವ ಶಾಲೆಗೆ ವೈಯಕ್ತಿಕವಾಗಿ ಒಂದು ಲಕ್ಷ ರೂ. ಬಹುಮಾನ ನೀಡ ಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ  ಘೋಷಣೆ ಮಾಡಿದರು. ನಗರದ ಸಂತ ಜೋಸೆಫ‌ರ ಪ್ರೌಢ ಶಾಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಸಿದ್ಧತೆ ಪರಿಶೀಲನೆ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದರು.

Advertisement

ಕಳೆದ ವರ್ಷದ ಫ‌ಲಿತಾಂಶದಲ್ಲಿ ಹಾಸನ ಜಿಲ್ಲೆಯು  ರಾಜ್ಯದಲ್ಲಿ ಮೊದಲ ಸ್ಥಾನ ಗಳಿ ಸಿತ್ತು. ಈ ಬಾರಿಯೂ ಅದೇ ರೀತಿಯ ಫ‌ಲಿತಾಂಶ ಬರಬೇಕು ಎಂದರು. ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ 89 ಪರೀಕ್ಷಾ ಕೇಂದ್ರಗಳಲ್ಲಿ 21,257 ವಿದ್ಯಾರ್ಥಿಗಳು ಪರೀಕ್ಷೆ  ಬರೆಯಲಿದ್ದಾರೆ. ಪ್ರತಿ ಕೇಂದ್ರದಲ್ಲಿಯೂ ಸುರಕ್ಷತಾ ಕ್ರಮ ಕೈಗೊಳ್ಳಲಾಗಿದೆ. ಸಾರಿಗೆ ವ್ಯವಸ್ಥೆ ಕಲ್ಪಿಸುವಂತೆ ಕೆಎಸ್‌ಆರ್‌ಟಿಸಿ ಡಿಸಿ ಜೊತೆಗೆ ಚರ್ಚಿಸಲಾಗಿದೆ ಎಂದು ವಿವರಿಸಿದರು.

ಮುಳ್ಳಿನ ಮೇಲಿನ ನಡಿಗೆ: ಸ್ಕೌಟ್ಸ್‌ ಮತ್ತು ಗೈಡ್ಸ್‌ ರಾಜ್ಯ ಆಯುಕ್ತ ಪಿ.ಜಿ.ಆರ್‌. ಸಿಂಧ್ಯ ಮಾತನಾಡಿ, ಹಾಸನ ಜಿಲ್ಲೆಯಲ್ಲಿ ಉಸ್ತುವಾರಿ ಸಚಿವನಾಗಿ ಕೆಲಸ ಮಾಡುವುದು ಮುಳ್ಳಿನ ಮೇಲೆ ನಡೆದಂತೆ. ಕೆ. ಗೋಪಾಲಯ್ಯ ಅವರು ತಮ್ಮ  ಕ್ಷೇತ್ರವನ್ನು ಮಾದರಿಯನ್ನಾಗಿ ಅಭಿವೃದ್ಧಿ ಮಾಡಿದ್ದಾರೆ. ಹಾಸನವನ್ನು ಅದೇ ರೀತಿ ಅಭಿವೃದಿಟಛಿ ಪಡಿಸಲಿ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ವತಿಯಿಂದ ಎಲ್ಲಾ ತಾಲೂಕು ಕ್ಷೇತ್ರ  ಶಿಕ್ಷಣಾಧಿಕಾರಿಗಳಿಗೆ 9 ಸಾವಿರ ಮಾಸ್ಕ್ ಹಸ್ತಾಂತರಿಸಿದರು. ಡಿಡಿಪಿಐ ಕೆ.ಎಸ್‌.ಪ್ರಕಾಶ್‌, ಎಸ್ಪಿ ಆರ್‌. ಶ್ರೀನಿವಾಸ್‌ಗೌಡ, ಜಿಪಂ ಸಿಇಒ ಬಿ.ಎ. ಪರಮೇಶ್‌, ಎಸಿ ಡಾ.ನವೀನ್‌ ಭಟ್‌, ಸ್ಕೌಟ್ಸ್‌ ಮತ್ತು ಗೈಡ್ಸ್‌ ಜಿಲ್ಲಾ ಆಯುಕ್ತ ಡಾ.ವೈ.ಎಸ್‌.  ವೀರಭದ್ರಪ್ಪ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next