Advertisement

ಎಸೆಸೆಲ್ಸಿ ಮಧ್ಯ ವಾರ್ಷಿಕ ಪರೀಕ್ಷೆ ಗೊಂದಲ

10:42 PM Dec 28, 2021 | Team Udayavani |

ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ (2021-22)ನೇ ಸಾಲಿನಲ್ಲಿ ಎಸೆಸೆಲ್ಸಿ ಓದುತ್ತಿರುವ ಮಕ್ಕಳಿಗೆ ಮಧ್ಯವಾರ್ಷಿಕ ಪರೀಕ್ಷೆ ನಡೆಸ ಬೇಕೇ? ಬೇಡವೇ ಎಂಬ ಗೊಂದಲ ನಿರ್ಮಾಣವಾಗಿದೆ.

Advertisement

ಕೆಲವು ಶಾಲೆಗಳಲ್ಲಿ ಮಧ್ಯ ವಾರ್ಷಿಕ ಹೆಸರಿನಲ್ಲಿ ಪರೀಕ್ಷೆ ನಡೆಸಲಾಗುತ್ತಿದ್ದು, ಪರೀಕ್ಷೆ ನಡೆಸದ ಶಾಲೆಗಳ ವಿದ್ಯಾರ್ಥಿ ಗಳಲ್ಲಿ ಗೊಂದಲ ನಿರ್ಮಾಣವಾಗಿದೆ. ಈಗಾಗಲೇ ಡಿಸೆಂಬರ್‌ ತಿಂಗಳು ಮುಗಿದಿದ್ದು, ಮುಖ್ಯ ಪರೀಕ್ಷೆಗೆ 3-4 ತಿಂಗಳು ಮಾತ್ರ ಬಾಕಿ ಇದೆ. ಇದರ ನಡುವೆ ಪೂರ್ವಸಿದ್ಧತಾ ಪರೀಕ್ಷೆ ಕೂಡ ನಡೆಸಬೇಕಿದೆ. ಹೀಗಾಗಿ, ಮಧ್ಯ ವಾರ್ಷಿಕ ಪರೀಕ್ಷೆ ನಡೆಸುತ್ತಾರೋ ಇಲ್ಲವೋ ಎಂಬ ಸ್ಪಷ್ಟತೆ ಇಲ್ಲದಂತಾಗಿದೆ.

ಕೆಲವು ಖಾಸಗಿ ಶಾಲೆಗಳು ಹಾಗೂ ಸರಕಾರಿ ಶಾಲೆಗಳ ಶಿಕ್ಷಕರು ಮಧ್ಯವಾರ್ಷಿಕ ಪರೀಕ್ಷೆ ನಡೆಸಬೇಕು. ಆದರೆ, ಈ ವರೆಗೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ವೇಳಾಪಟ್ಟಿ ಪ್ರಕಟಿಸಿಲ್ಲ. ಅದನ್ನೇ ಎದುರು ನೋಡುತ್ತಿದ್ದೇವೆ ಎನ್ನುತ್ತಾರೆ. ಮತ್ತೆ ಕೆಲವು ಖಾಸಗಿ ಶಾಲೆಗಳು ನಿರಂತರ ಮತ್ತು ವ್ಯಾಪಕ ಮೌಲ್ಯಮಾಪನ(ಸಿಸಿಇ)ವನ್ನು ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ನಡೆಸಲಾಗುತ್ತಿದೆ. ಶೈಕ್ಷಣಿಕ ವರ್ಷದ ದಸರಾ ರಜೆಗೂ ಮುನ್ನ ಮತ್ತು ಬಳಿಕ ಕ್ರಮವಾಗಿ ಎರಡು ರೂಪಣಾತ್ಮಕ ಮೌಲ್ಯಮಾಪನ ಮತ್ತು ಒಂದು ಸಂಕಲನಾತ್ಮಕ ಮೌಲ್ಯಮಾಪನ ನಡೆಸಲಾಗುತ್ತಿದೆ. ಮಧ್ಯವಾರ್ಷಿಕ ಪರೀಕ್ಷೆ ನಡೆಸುವುದಿಲ್ಲ ಎಂದು ಹೇಳಲಾಗಿದೆ.

ಕೇಂದ್ರ ಪಠ್ಯಕ್ರಮದ ಸಿಬಿಎಸ್‌ಇ ಮತ್ತು ಐಸಿಎಸ್‌ಇ ವಿದ್ಯಾರ್ಥಿಗಳಿಗೆ ಅರ್ಧವಾರ್ಷಿಕ ಪರೀಕ್ಷೆ ನಡೆಸಲಾಗಿದೆ. ಆದರೆ, ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳಿಗೆ ಮಧ್ಯವಾರ್ಷಿಕ ಪರೀಕ್ಷೆ ನಡೆಸದಿರುವುದು ಗೊಂದಲ ಮೂಡಿಸಿದೆ ಹಾಗೂ ತಾರತಮ್ಯದಿಂದ ಕೂಡಿದೆ. ಒಂದು ವೇಳೆ ಒಮಿಕ್ರಾನ್‌ ಸೋಂಕು ತೀವ್ರಗೊಂಡು ಶಾಲೆಗಳಲ್ಲಿ ಭೌತಿಕ ತರಗತಿಗಳನ್ನು ನಿಲ್ಲಿಸಿದರೆ, ಈ ಹಿಂದಿನ ವರ್ಷದಂತೆಯೇ ಈ ವರ್ಷವೂ ಅವೈಜ್ಞಾನಿಕವಾಗಿ ಫ‌ಲಿತಾಂಶ ನೀಡಬೇಕಾಗುತ್ತದೆ ಎಂದು ನೋಂದಾಯಿತ ಅನುದಾನ ರಹಿತ ಖಾಸಗಿ ಶಾಲೆಗಳ ಸಂಘದ (ರುಪ್ಸಾ) ಅಧ್ಯಕ್ಷ ಲೋಕೇಶ್‌ ತಾಳಿಕಟ್ಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ:ಸಿಬಿಐ, ಇಡಿ ನಿರ್ದೇಶಕರ ಅಧಿಕಾರಾವಧಿ ಹೆಚ್ಚಳಕ್ಕೆ ಕಾರಣ?: ಮಾಹಿತಿಗೆ ನಕಾರ

Advertisement

ಮಧ್ಯವಾರ್ಷಿಕ ಪರೀಕ್ಷೆ ನಡೆಸುವುದಿಲ್ಲ
ರಾಜ್ಯದಲ್ಲಿ ಈಗಾಗಲೇ ಎರಡು ರೂಪಣಾತ್ಮಕ ಮೌಲ್ಯಮಾಪನ ಮತ್ತು ಒಂದು ಸಂಕಲನಾತ್ಮಕ ಮೌಲ್ಯಮಾಪನ ನಡೆಸಿರುವುದರಿಂದ ಎಸೆಸೆಲ್ಸಿ ಮಕ್ಕಳಿಗೆ ಮಧ್ಯವಾರ್ಷಿಕ ಪರೀಕ್ಷೆ ನಡೆಸುವುದಿಲ್ಲ. ಅಲ್ಲದೆ, ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಮಧ್ಯವಾರ್ಷಿಕ ಪರೀಕ್ಷೆಯ ಯಾವುದೇ ಅಂಕಗಳನ್ನೂ ಪರಿಗಣಿಸುವುದಿಲ್ಲ. ಮಕ್ಕಳ ಕಲಿಕೆ ಆಧಾರದಲ್ಲಿಯೇ ಆಂತರಿಕ ಮೌಲ್ಯಮಾಪನದ ಅಂಕಗಳನ್ನು ನೀಡಲಾಗುತ್ತದೆ. ಆದ್ದರಿಂದ ಯಾವುದೇ ಗೊಂದಲವಿಲ್ಲ ಎಂದು ಖಾಸಗಿ ಶಾಲಾ ಸಂಘಟನೆಗಳ ಒಕ್ಕೂಟ (ಕ್ಯಾಮ್ಸ್‌) ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್‌ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next