ಬೆಂಗಳೂರು: ಕೋವಿಡ್ ಹಿನ್ನೆಲೆಯಲ್ಲಿ ಪೂರ್ಣಾವಧಿಯ ಶೈಕ್ಷಣಿಕ ವರ್ಷ ಸಿಗದ ಹಿನ್ನೆಲೆಯಲ್ಲಿ ಲಭ್ಯವಿರುವ ಶೈಕ್ಷಣಿಕ ದಿನದ ಆಧಾರದಲ್ಲಿ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಯಾವ ರೀತಿಯಲ್ಲಿ ಪರೀಕ್ಷೆ ಮಾಡಿ ಮೌಲ್ಯಮಾಪನ ಮಾಡಬೇಕು ಎಂದು ಮಾರ್ಗಸೂಚಿ ಬಿಡುಗಡೆ ಮಾಡಿರುವ ಶಿಕ್ಷಣ ಇಲಾಖೆ, ಮೇ 2ನೇ ವಾರದೊಳಗೆ ಎಸೆಸೆಲ್ಸಿ ಪೂರಕ ಪರೀಕ್ಷೆ ನಡೆಸಲು ಸೂಚನೆ ನೀಡಿದೆ. 2020-21ನೇ ಶೈಕ್ಷಣಿಕ ಸಾಲಿಗೆ ಪಠ್ಯವಸ್ತು, ಪರೀಕ್ಷೆಗಳನ್ನು ಮತ್ತು ಮೌಲ್ಯ ಮಾಪನ ತಂತ್ರಾಂಶಗಳು ಹೇಗಿರ ಬೇಕು ಎಂಬುದನ್ನು ಸವಿಸ್ತಾರವಾಗಿ ಹೇಳಿರುವ ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ, 10ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯ ಮಾಪನ, ಪರೀಕ್ಷೆಗೆ ಹೇಗಿರಬೇಕು ಎಂಬುದನ್ನು ವಿವರಿಸಿದೆ.
7,091 ಅತಿಥಿ ಉಪನ್ಯಾಸಕರ ನೇಮಕಕ್ಕೆ ಸೂಚನೆ :
ಬೆಂಗಳೂರು, ಜ. 22: ರಾಜ್ಯದ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾರ್ಯಭಾರಕ್ಕೆ ಅನುಗುಣವಾಗಿ 2020-21ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕಾಲೇಜು ಶಿಕ್ಷಣ ಇಲಾಖೆ ಅನುಮತಿ ಕಲ್ಪಿಸಿದೆ. ಈಗಾಗಲೇ ಕಾಲೇಜುಗಳಿಂದ ಬಂದಿರುವ ಪ್ರಸ್ತಾವನೆಯ ಆಧಾರದಲ್ಲಿ ಅತಿಥಿ ಉಪನ್ಯಾಸಕರ ಪಟ್ಟಿಯನ್ನು ಪರಿಷ್ಕರಿಸಿ ಕಾಲೇಜುವಾರು ಅಂತಿಮ ಪಟ್ಟಿ ಬಿಡುಗಡೆ ಮಾಡಲಾಗಿದೆ. ಇಲಾಖೆ ನೀಡಿ ರುವ ಪಟ್ಟಿಯಂತೆ ಆಯಾ ಕಾಲೇಜುಗಳ ಪ್ರಾಂಶುಪಾಲರು ನಿಯಮಾನುಸಾರವಾಗಿ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಬೇಕೆಂದು ಇಲಾಖೆ ತಿಳಿಸಿದೆ.