Advertisement
ಜಿ.ಪಂ., ಶಾಲಾ ಶಿಕ್ಷಣ ಮತ್ತು ಸಾಕ್ಷ ರತಾ ಇಲಾಖೆಯು ಜಂಟಿಯಾಗಿ ಕೆಲವು ಕಾರ್ಯ ಕ್ರಮಗಳನ್ನು ರೂಪಿಸಿ ಅನುಷ್ಠಾನ ಮಾಡಲಾಗು ತ್ತಿದೆ. ಪ್ರತೀ ವರ್ಷ ಎಸೆಸೆಲ್ಸಿ ಫಲಿತಾಂಶದಲ್ಲಿ ಉಡುಪಿ ಜಿಲ್ಲೆ ಅಗ್ರಶ್ರೇಣಿಯಲ್ಲಿರುತ್ತದೆ. ಅದೇ ಗುಣಮಟ್ಟವನ್ನು ಕಾಯ್ದುಕೊಂಡು, ಫಲಿತಾಂಶ ವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗಿದೆ.
ಇನ್ನು ಕೆಲವು ಶಾಲೆಗಳಲ್ಲಿ ಉತ್ತಮ ಶ್ರೇಣಿ ಯಲ್ಲಿ ಉತ್ತೀರ್ಣರಾಗಬಲ್ಲ, ಉತ್ತೀರ್ಣ ಆಗಬಲ್ಲ ಹಾಗೂ ಅಧ್ಯಯನದಲ್ಲಿ ತುಂಬ ಹಿಂದಿರುವ ವಿದ್ಯಾರ್ಥಿಗಳು ಎಂದು ಮೂರು ವಿಂಗಡನೆ ಮಾಡಿಕೊಳ್ಳಲಾಗಿದೆ. ಅಧ್ಯಯನದಲ್ಲಿ ಹಿಂದಿರುವ ವಿದ್ಯಾರ್ಥಿಗಳ ಮೇಲೆ ವಿಶೇಷ ನಿಗಾ ಇರಿಸಿ ಯಾವ ವಿಷಯದಲ್ಲಿ ಅವರು ಹಿಂದಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ವಿಶೇಷ ತರಗತಿಗಳ ಮೂಲಕ ತರಬೇತಿ ನೀಡಲಾಗುತ್ತಿದೆ. ಇನ್ನು ಕೆಲವೊಂದು ಶಾಲೆಗಳಲ್ಲಿ ಗಣಿತ, ಇಂಗ್ಲಿಷ್ ಹಾಗೂ ವಿಜ್ಞಾನ ತರಗತಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ. ವಿದ್ಯಾರ್ಥಿಗಳ ಪಾಲಕ, ಪೋಷಕರಿಗೆ ಮಕ್ಕಳ ಓದಿನ ಬಗ್ಗೆ ನಿರಂತರ ಸಂದೇಶ ರವಾನೆ ಮಾಡುವುದು. ಹೀಗೆ ವಿಭಿನ್ನ ರೀತಿಯ ಪ್ರಯತ್ನಗಳನ್ನು ಶಾಲೆಗಳಲ್ಲಿ ನಡೆಸಲಾಗುತ್ತಿದೆ. ಇದರ ಜತೆಗೆ ಜಿ.ಪಂ.ನಿಂದಲೂ ಕೆಲವು ಕಾರ್ಯಕ್ರಮ ರೂಪಿಸಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
Related Articles
ಸಮಾಜಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾಕರ ಕಲ್ಯಾಣ ಇಲಾಖೆ ಸಹಿತ ವಿವಿಧ ಇಲಾ ಖೆಯ ಹಾಸ್ಟೆಲ್‌ಗಳಲ್ಲೂ ಎಸೆಸೆಲ್ಸಿ ವಿದ್ಯಾರ್ಥಿ ಗಳನ್ನು ವಿಶೇಷ ರೀತಿಯಲ್ಲಿ ಪರೀಕ್ಷೆಗೆ ಸಜ್ಜುಗೊಳಿಸಲಾಗುತ್ತಿದೆ. ಬೆಳಗ್ಗೆ ಬೇಗ ಎದ್ದು ಓದಲು ಹಾಸ್ಟೆಲ್‌ಗಳಲ್ಲಿ ಸೂಚನೆ ನೀಡಲಾಗುತ್ತಿದೆ. ಹಾಸ್ಟೆಲ್‌ನಲ್ಲೇ ಪ್ರತ್ಯೇಕ ವೇಳಾಪಟ್ಟಿ ಹಾಕಿಕೊಂಡು ಓದಲು ಸೂಚನೆ ನೀಡಲಾಗಿದೆ. ನಿಲಯ ಪಾಲಕರು ಎಸೆಸೆಲ್ಸಿ ವಿದ್ಯಾರ್ಥಿಗಳ ಓದಿನ ಮೇಲೂ ವಿಶೇಷ ಗಮನ ಹರಿಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
Advertisement