Advertisement

SSLC ಫಲಿತಾಂಶ: ತುಮಕೂರು ಶೇ. 75.16 ರಷ್ಟು ಫಲಿತಾಂಶ

12:53 PM May 09, 2024 | Team Udayavani |

ತುಮಕೂರು: ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆ ಶೇ 75.16 ಫಲಿತಾಂಶ ದಾಖಲಿಸುವುದರೊಂದಿಗೆ ರಾಜ್ಯದಲ್ಲಿ 16ನೇ ಸ್ಥಾನದಲ್ಲಿದ್ದು, ಕಳೆದ ವರ್ಷದ ಫಲಿತಾಂಶಕ್ಕಿಂತ ನಾಲ್ಕು ಸ್ಥಾನ ಮೇಲೇರಿದೆ.

Advertisement

ಅಂತೆಯೇ ಮಧುಗಿರಿ ಉತ್ತರ ಶೈಕ್ಷಣಿಕ ಜಿಲ್ಲೆ ಶೇ. 62.44 ಫಲಿತಾಂಶ ದಾಖಲಿಸಿದ್ದು, ಕಳೆದ ವರ್ಷ ಫಲಿತಾಂಶದಲ್ಲಿ 9ನೇ ಸ್ಥಾನದಲ್ಲಿದ್ದ ಜಿಲ್ಲೆ, 30ನೇ ಸ್ಥಾನದಲ್ಲಿದೆ.

ತುಮಕೂರು ದಕ್ಷಿಣ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆ ಬರೆದ 22,198 ವಿದ್ಯಾರ್ಥಿಗಳ ಪೈಕಿ 16,683ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರೆ 5,515 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.

ಮಧುಗಿರಿ ಉತ್ತರ ಶೈಕ್ಷಣಿಕ ಜಿಲ್ಲೆಯಲ್ಲಿ ಪರೀಕ್ಷೆ ಬರೆದ 12,715 ವಿದ್ಯಾರ್ಥಿಗಳ ಪೈಕಿ 7,939 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದು, 4,776 ಮಂದಿ ಅನುತ್ತೀರ್ಣರಾಗಿದ್ದಾರೆ.

ಎರಡು ಶೈಕ್ಷಣಿಕ ಜಿಲ್ಲೆ ಫಲಿತಾಂಶದಲ್ಲಿ ಸಿರಾದ ವಾಸವಿ ಪ್ರೌಢಶಾಲೆ ವಿದ್ಯಾರ್ಥಿನಿ ಡಿ. ಹರ್ಷಿತಾ 625ಕ್ಕೆ 624 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next