Advertisement

SSLC ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡುತ್ತಿದ್ದ ಶಿಕ್ಷಕ ಹೃದಯಾಘಾತದಿಂದ ಸಾವು

09:51 PM Jul 09, 2020 | sudhir |

ವಿಜಯಪುರ : ನಗರದಲ್ಲಿ ಎಸ್‍ಎಸ್‍ಎಲ್‍ಸಿ ಉತ್ತರ ಪತ್ರಿಕೆ ಮೌಲ್ಯಮಾಪನ ಕರ್ತವ್ಯದಲ್ಲಿ ತೊಡಗಿದ್ದ 49 ವರ್ಷದ ಶಿಕ್ಷಕರೊಬ್ಬರು ಹೃದಯಾಘಾತದಿಂದ ಮೃತಪಟ್ಡ ಘಟನೆ ಗುರುವಾರ ನಡೆದಿದೆ.

Advertisement

ತಿಕೋಟ ತಾಲೂಕಿನ ಕೆ.ಸಿದ್ದಾಪುರ ಸರ್ಕಾರಿ ಪ್ರೌಢಶಾಲೆಯಲ್ಲಿ ಶಿಕ್ಷಕರಾಗಿ ಸೇವೆಯಲ್ಲಿದ್ದ 49 ವರ್ಷದ ಪಿ.ಸಿ.ಕೇಸುಗೋಳ  ಶಿಕ್ಷಕರು ನಗರದ ದರ್ಬಾರ ಪ್ರೌಢ ಶಾಲೆಯ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಉತ್ತರ ಪತ್ರಿಕೆ ಮೌಲ್ಯಮಾಪನ ಕರ್ತವ್ಯಕ್ಕೆ ಹಾಜರಾಗಿದ್ದರು.

ಮಧ್ಯಾಹ್ನ 3 ಗಂಟೆಗೆ ಉತ್ತರ ಪತ್ರಿಕೆ ಮೌಲ್ಯಮಾಪನ ಮಾಡುವಾಗಲೇ ಇದ್ದಕ್ಕಿದ್ದಂತೆ ಎದೆನೋವು ಕಾಣಿಸಿಕೊಂಡು ಹೃದಯಾಘಾತದಿಂದ ಮೃತಪಟ್ಟಿದ್ದಾರೆ.

ಮೃತರು ಪತ್ನಿ ಇಬ್ಬರು ಮಕ್ಕಳು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ. ಮೃತರ ಸ್ವಗ್ರಾಮ ಚಡಚಣ ತಾಲೂಕಿನ ಬಿ.ಕೆ.ಲೋಣಿ ಗ್ರಾಮದಲ್ಲಿ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next