Advertisement

ಏಪ್ರಿಲ್‌ ಅಂತ್ಯಕ್ಕೆ ಎಸ್ಸೆಸ್ಸೆಲ್ಸಿ,ದ್ವಿತೀಯ ಪಿಯು ಫ‌ಲಿತಾಂಶ 

12:30 AM Mar 19, 2019 | |

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯು ಹಾಗೂ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಫ‌ಲಿತಾಂಶವನ್ನು ಏಪ್ರಿಲ್‌ ಅಂತ್ಯಕ್ಕೆ ಪ್ರಕಟಿಸಲಿದ್ದೇವೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತ ಡಾ.ಪಿ.ಸಿ.ಜಾಫ‌ರ್‌ ಹೇಳಿದರು.

Advertisement

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾ.1ರಿಂದ ಆರಂಭವಾದ ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ಮಾ.18ಕ್ಕೆ ಪೂರ್ಣಗೊಂಡಿದೆ.

ಮಾ.21ರಿಂದ ಆರಂಭವಾಗಲಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆ ಏ.4ಕ್ಕೆ ಕೊನೆಗೊಳ್ಳಲಿದೆ. ಮಾ.25ರಿಂದ ದ್ವಿತೀಯ ಪಿಯು ಮತ್ತು ಏ.10ರಿಂದ ಎಸ್ಸೆಸ್ಸೆಲ್ಸಿ ಮೌಲ್ಯಮಾಪನ ಆರಂಭಿಸಲಾಗುತ್ತದೆ. ಏಪ್ರಿಲ್‌ ಅಂತ್ಯಕ್ಕೆ ಎರಡೂ ಫ‌ಲಿತಾಂಶ ಪ್ರಕಟಿಸಲಿದ್ದೇವೆ ಎಂದು ವಿವರಿಸಿದರು. 

ಮಾ.21ರಿಂದ ಪಿಯು ಉತ್ತರ ಪತ್ರಿಕೆಗಳ ಕೋಡಿಂಗ್‌ ಮತ್ತು ಡಿ ಕೋಡಿಂಗ್‌ ಪ್ರಕ್ರಿಯೆ ಆರಂಭಗೊಳ್ಳಲಿದೆ. 25ರಿಂದ ಮೌಲ್ಯಮಾಪನ ನಡೆಯಲಿದೆ. ಏ.18 ಮತ್ತು ಏ.23ರಂದು ಲೋಕಸಭಾ ಚುನಾವಣೆ ನಡೆಯುವುದರಿಂದ ಸಮಯ ಹೊಂದಾಣಿಕೆ ಮಾಡಿಕೊಂಡು ಮೌಲ್ಯಮಾಪನ ಪೂರ್ಣಗೊಳಿಸಲಾಗುತ್ತದೆ.

ಏಪ್ರಿಲ್‌ ಅಂತ್ಯಕ್ಕೆ ವಿದ್ಯಾರ್ಥಿಗಳ ಫ‌ಲಿತಾಂಶ ಘೋಷಿಸಲಿದ್ದೇವೆ ಎಂದರು.ಸರ್ಕಾರಿ ಪಪೂ ಕಾಲೇಜಿನ ಉಪನ್ಯಾಸಕರ ಸಂಘಕ್ಕೆ ಮೌಲ್ಯಮಾಪನ ಮಾಡುವಂತೆ ಮನವಿ ಮಾಡಲಾಗುವುದು. ಒಂದು ವೇಳೆ ಒಪ್ಪಿಕೊಳ್ಳದಿದ್ದರೆ,ಮೌಲ್ಯಮಾಪನ ಮಾಡಿಸುವುದಕ್ಕಾಗಿ ಈಗಾಗಲೇ ಪರ್ಯಾಯ ಮಾರ್ಗಗಳ ಬಗ್ಗೆ ಚಿಂತನೆ ಮಾಡಲಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರು ಯಾವುದೇ ಕಾರಣಕ್ಕೂ ಆತಂಕಪಡುವ ಅಗತ್ಯವಿಲ್ಲ. ಪ್ರತಿ ವರ್ಷದಂತೆ ಈ ವರ್ಷವೂ ಸುಸೂತ್ರವಾಗಿ ಮೌಲ್ಯಮಾಪನ ನಡೆಯಲಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next