Advertisement
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶಿಕ್ಷಣಾಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಕಳೆದ ವರ್ಷದ ಮಾದರಿಯಲ್ಲಿಯೇ ಈ ವರ್ಷವೂ ಎಲ್ಲ ಪ್ರಕ್ರಿಯೆಯು ತೀವ್ರವಾಗಿ ನಡೆದು ಜಿಲ್ಲೆಯಲ್ಲಿನ ಪ್ರತಿಭಾವಂತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಅನುಕೂಲವಾಗಬೇಕು. ಪ್ರಸಕ್ತ ಸಾಲಿನಲ್ಲಿ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲೆಯ ಕನ್ನಡ, ಉರ್ದು, ಮರಾಠಿ ಮಾಧ್ಯಮದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಜಿಲ್ಲೆಯ ಅನುದಾನಿತ ಹಾಗೂ ಅನುದಾನ ರಹಿತ ಪಿಯುಸಿ ಕಾಲೇಜಿನಲ್ಲಿ ಜಿಲ್ಲಾಡಳಿತ ಹಾಗೂ ಸಂಸ್ಥೆಯ ಆಡಳಿತ ಮಂಡಳಿಯ ಮತ್ತು ಪ್ರಾಂಶುಪಾಲರ ಸಹಕಾರದಿಂದ 2020-21ನೇ ಸಾಲಿಗಾಗಿ ಉಚಿತ ಪ್ರವೇಶ ಯೋಜನೆಯನ್ನು ಸರಿಯಾಗಿ ಅನುಷ್ಠಾನಗೊಳಿಸಲು ಕಾಳಜಿ ವಹಿಸಬೇಕು ಎಂದರು.
Advertisement
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ದಾಖಲೆ ಸಿದ್ಧಪಡಿಸಿಕೊಳ್ಳಿ
01:48 PM Aug 04, 2020 | Suhan S |
Advertisement
Udayavani is now on Telegram. Click here to join our channel and stay updated with the latest news.