ಬೆಂಗಳೂರು: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ಅರ್ಹ ಅಭ್ಯರ್ಥಿಗಳು ನೋಂದಣಿ ಮಾಡಿಕೊಳ್ಳಲು ಮತ್ತು ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿ ಪಡೆಯುವ ಅವಧಿಯನ್ನು ಮೇ 18ರ ವರೆಗೆ ವಿಸ್ತರಿಸಿದೆ. ಸ್ಕ್ಯಾನ್ ಪ್ರತಿ ಪಡೆಯಲು ಮೇ 14 ಮತ್ತು ಪೂರಕ ಪರೀಕ್ಷೆಗೆ ನೋಂದಣಿ ಮಾಡಿಕೊಳ್ಳಲು ಮೇ 15 ಕೊನೆಯ ದಿನವಾಗಿತ್ತು. ಅಭ್ಯರ್ಥಿಗಳು ಹಾಗೂ ಪಾಲಕರ ಒತ್ತಾಯದ ಮೇರೆಗೆ ಅವಧಿ ವಿಸ್ತರಿಸಲಾಗಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಿರ್ದೇಶಕರು ತಿಳಿಸಿದ್ದಾರೆ.
Advertisement