Advertisement

ಜಿಲ್ಲೆಯ 13 ಕೇಂದ್ರಗಳಲ್ಲಿ 21ರಿಂದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ

11:28 AM Jun 20, 2019 | Team Udayavani |

ಕೊಪ್ಪಳ: ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ಜೂ. 21ರಿಂದ 28ರವರೆಗೆ ನಡೆಯಲಿದ್ದು, ಯಾವುದೇ ಅಕ್ರಮ ಚಟುವಟಿಕೆ ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಎಡಿಸಿ ಸೈಯದಾ ಅಯಿಷಾ ಸಂಬಂಧಿಸಿದ ಅಕಾರಿಗಳಿಗೆ ಸೂಚನೆ ನೀಡಿದರು.

Advertisement

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿದರು. ಪ್ರಶ್ನೆಪತ್ರಿಕೆ ಖಜಾನೆ ಇಲಾಖೆಗೆ ಠೇವಣಿಯಾಗುವುದರಿಂದ ವಿತರಣೆಯಾಗುವವರೆಗೂ ಎಲ್ಲವನ್ನೂ ವೀಡಿಯೋ ಚಿತ್ರೀಕರಣ ಆಗಬೇಕು. ಖಜಾನೆಯಿಂದ ಪ್ರಶ್ನೆ ಪತ್ರಿಕೆಗಳನ್ನು ತೆಗೆದುಕೊಂಡು ನಿಗದಿತ ಅವಧಿಯೊಳಗೆ ಪರೀಕ್ಷಾ ಕೇಂದ್ರಗಳಿಗೆ ತಲುಪಿಸುವ ಹೊಣೆ ಆಯಾ ಮಾರ್ಗಾಧಿಕಾರಿಗಳಿಗೆ ವಹಿಸಲಾಗಿದ್ದು, ವಿಳಂಬಕ್ಕೆ ಅವಕಾಶವಿಲ್ಲದಂತೆ ಪ್ರಶ್ನೆ ಪತ್ರಿಕೆಯನ್ನು ನಿಗದಿತ ಅವಧಿಯೊಳಗೆ ತಲುಪಿಸಬೇಕು ಎಂದರು.

ಪರೀಕ್ಷಾ ಕೇಂದ್ರದೊಳಗೆ ಮೊಬೈಲ್ ಫೋನ್‌, ಕ್ಯಾಲ್ಕುಲೇಟರ್‌ ಅಥವಾ ಇನ್ನಿತರೆ ಎಲೆಕ್ಟ್ರಾನಿಕ್‌ ಉಪಕರಣಗಳನ್ನು ಒಯ್ಯುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಸೂಕ್ತ ಆಸನದ ವ್ಯವಸ್ಥೆ, ಕುಡಿಯುವ ನೀರಿನ ಸಮರ್ಪಕ ವ್ಯವಸ್ಥೆಯನ್ನು ಆಯಾ ಪರೀಕ್ಷಾ ಕೇಂದ್ರದ ಮುಖ್ಯಸ್ಥರು ಕೈಗೊಳ್ಳಬೇಕು. ಪರೀಕ್ಷಾ ದಿನದಂದು ಕೇಂದ್ರಗಳಲ್ಲಿ ಸೂಕ್ತ ಪೊಲೀಸ್‌ ಬಂದೋಬಸ್ತ್ ಕೈಗೊಳ್ಳಬೇಕು. ಕೇಂದ್ರದ 200 ಮೀ.ವ್ಯಾಪ್ತಿ ಸುತ್ತ ನಿಷೇಧಾಜ್ಞೆ ಈಗಾಗಲೇ ಜಾರಿಗೊಳಿಸಿದೆ ಎಂದರು.

ಡಿಡಿಪಿಐ ಎ. ಶ್ಯಾಮಸುಂದರ ಮಾತನಾಡಿ, ಜಿಲ್ಲೆಯ 13 ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ. 13 ಪರೀಕ್ಷಾ ಕೇಂದ್ರಗಳಲ್ಲಿ 02 ಖಾಸಗಿ ಕೇಂದ್ರಗಳಿವೆ. ಜಿಲ್ಲೆಯ 4,445 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯ ಗಂಗಾವತಿ ತಾಲೂಕಿನ ಲಯನ್ಸ್‌ ಪ್ರೌಢ ಶಾಲೆ, ಎಂಎನ್‌ಎಂ ಸರಕಾರಿ ಪಪೂ ಬಾಲಕಿಯರ ಕಾಲೇಜು, ಬೆಥಲ್ ಆಂಗ್ಲ ಪ್ರೌಢಶಾಲೆ, ಕೊಟ್ಟುರೇಶ್ವರ ಪಪೂ ಕಾಲೇಜು, ಕೊಪ್ಪಳ ತಾಲೂಕಿನ ಬಾಲಕರ ಸರ್ಕಾರಿ ಪಪೂ ಕಾಲೇಜು, ಗವಿಸಿದ್ದೇಶ್ವರ ಪ್ರೌಢಶಾಲೆ, ಬಾಲಕಿಯರ ಸರಕಾರಿ ಪಪೂ ಕಾಲೇಜು, ಎಸ್‌.ಎಫ್‌.ಎಸ್‌ ಪ್ರೌಢಶಾಲೆ, ಸ್ವಾಮಿ ವಿವೇಕಾನಂದ ಪ್ರೌಢಶಾಲೆ, ಸರಕಾರಿ ಪದವಿಪೂರ್ವ ಕಾಲೇಜು ಭಾಗ್ಯನಗರ, ಕುಷ್ಟಗಿ ತಾಲೂಕಿನ ಸರಕಾರಿ ಪದವಿಪೂರ್ವ ಬಾಲಕರ ಕಾಲೇಜು, ಯಲಬುರ್ಗಾ ತಾಲೂಕಿನ ಸರಕಾರಿ ಪದವಿಪೂರ್ವ ಕಾಲೇಜು ಹಾಗೂ ಮಂಜುನಾಥ ಪ್ರೌಢಶಾಲೆ, ಈ ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗಳು ನಡೆಯಲಿವೆ ಎಂದರು.

ಸಭೆಯಲ್ಲಿ ಜಿಲ್ಲಾ ನೋಡಲ್ ಅಧಿಕಾರಿ ಸುಜಾತಾ, ಸಾರ್ವಜನಿಕ ಶಿಕ್ಷಣ ಇಲಾಖೆ ಶಿಕ್ಷಣಾಧಿಕಾರಿ ಶೋಭಾ ಬಾಗೇವಾಡಿ, ವಿಷಯ ಪರಿವೀಕ್ಷಕ ನಿಲಕಂಠಪ್ಪ ಕಂಬಳಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು, ವಿವಿಧ ತಾಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು, ತಾಲೂಕು ನೋಡಲ್ ಅಧಿಕಾರಿಗಳು, 13 ಪರೀಕ್ಷಾ ಕೇಂದ್ರಗಳ ಮುಖ್ಯ ಅಧಿಧೀಕ್ಷಕರು ಹಾಗೂ ಪ್ರಶ್ನೆ ಪತ್ರಿಕೆಗಳ ಪಾಲಕರು ಮತ್ತಿತರರು ಉಪಸ್ಥಿತರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next