Advertisement
ಪರೀಕ್ಷೆಗೆ 11,415 ಶಾಲೆಗಳಿಂದ 63,363 ವಿದ್ಯಾರ್ಥಿ ಗಳು, 31,283 ವಿದ್ಯಾರ್ಥಿನಿಯರು ಹಾಗೂ ಮೂವರು ತೃತೀಯ ಲಿಂಗಿಗಳು ಸಹಿತ ಒಟ್ಟಾರೆ 94,649 ಮಕ್ಕಳು ನೋಂದಣಿ ಮಾಡಿಕೊಂಡಿದ್ದಾರೆ. ರಾಜ್ಯಾದ್ಯಂತ 423 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ. ಈ ಪೈಕಿ 343 ಸಾಮಾನ್ಯ ಮತ್ತು 80 ಖಾಸಗಿ ಕೇಂದ್ರಗಳನ್ನು ನಿಗದಿ ಮಾಡಲಾಗಿದೆ.
ಪೂರಕ ಪರೀಕ್ಷೆಯ ಉತ್ತರ ಪತ್ರಿಕೆಗಳನ್ನು ಜು.11ರಿಂದ ರಾಜ್ಯಾದ್ಯಂತ 5 ಜಿಲ್ಲೆಗಳ 28 ಕೇಂದ್ರಗಳಲ್ಲಿ ಮೌಲ್ಯಮಾಪನ ನಡೆಸಲಾಗುವುದು. ಆಗಸ್ಟ್ ಮೊದಲನೇ ವಾರದಲ್ಲಿ ಫಲಿತಾಂಶ ಪ್ರಕಟಿಸಲು ಮಂಡಳಿ ಗುರಿ ಹೊಂದಿದೆ ಎಂದು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕ ಎಚ್.ಎನ್. ಗೋಪಾಲಕೃಷ್ಣ ತಿಳಿಸಿದ್ದಾರೆ.
Related Articles
ಬೆಂಗಳೂರು: ಸಿಇಟಿ ಅಭ್ಯರ್ಥಿಗಳು ತಮ್ಮ ಅರ್ಜಿಯ ಮಾಹಿತಿ ತಿದ್ದುಪಡಿ ಹಾಗೂ ಮೀಸಲಾತಿಯನ್ನು ಕ್ಲೇಮ್ ಮಾಡಿಕೊಳ್ಳಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಕೊನೆಯ ಅವಕಾಶ ನೀಡಿದ್ದು, ಈ ತಿಂಗಳ 28ರೊಳಗೆ ತಿದ್ದುಪಡಿ ಮಾಡಿಕೊಳ್ಳಬಹುದಾಗಿದೆ.
Advertisement
ಸಿಇಟಿ ಫಲಿತಾಂಶ ಘೋಷಿಸಿದ ಬಳಿಕ ಯಾವುದೇ ರೀತಿಯಲ್ಲಿ ಮಾಹಿತಿ ತಿದ್ದುಪಡಿಗೆ ಅವಕಾಶ ಇರುವುದಿಲ್ಲ. ಆದ್ದರಿಂದ ಅಭ್ಯರ್ಥಿಗಳು ಹಾಗೂ ಪೋಷಕರು ತಮ್ಮ ಅರ್ಜಿಗಳನ್ನು ಮತ್ತೊಮ್ಮೆ ಕಡ್ಡಾಯವಾಗಿ ಪರಿಶೀಲಿಸಿಕೊಳ್ಳುವಂತೆ ಕೆಇಎ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.