Advertisement

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸುಸೂತ್ರ ನಡೆಸಿ: ಎಡಿಸಿ ಮಂಜುನಾ¥

06:58 PM Sep 16, 2020 | Suhan S |

ಬಳ್ಳಾರಿ: ಎಸ್ಸೆಸ್ಸೆಸಿ ಪೂರಕ ಪರೀಕ್ಷೆಗಳು ಸೆ. 21ರಿಂದ ಸೆ. 28ರವರೆಗೆ ನಡೆಯಲಿದ್ದುಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗಳಂತೆ ಪೋರಕ ಪರೀಕ್ಷೆಗಳನ್ನು ಸಹ ಯಾವುದೇ ರೀತಿಯ ಲೋಪಗಳಿಗೆ ಅಸ್ಪದ ಮಾಡಿಕೊಡದೇ ಅತ್ಯಂತ ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಅಧಿಕಾರಿಗಳು ಅಗತ್ಯ ಕ್ರಮಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಪಿ.ಎಸ್‌.ಮಂಜುನಾಥ ಹೇಳಿದರು.

Advertisement

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ನಡೆದ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಪೂರ್ವ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷೆಗೆ ಕೋವಿಡ್‌ -19 ಪಾಸಿಟಿವ್‌ ಕಂಡುಬಂದ ವಿದ್ಯಾರ್ಥಿಗಳಿಗೆ ನಗರದ ಮೆಡಿಕಲ್‌ ಡೆಂಟಲ್‌ ಕಾಲೇಜಿನಲ್ಲಿ ಪ್ರತ್ಯೇಕವಾಗಿ ಪರೀಕ್ಷೆಗಳನ್ನು ಬರೆಯಿಸಬೇಕು. ಜಿಲ್ಲೆಯ 26 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಿಗೆ ಸ್ಯಾನಿಟೈಸರ್‌ ಮೂಲಕ ಸ್ವತ್ಛಗೊಳಿಸಬೇಕು ಮತ್ತು ಪ್ರತಿ ವಿದ್ಯಾರ್ಥಿಗಳನ್ನು ಪರೀಕ್ಷಾ ಕೇಂದ್ರಗಳಲ್ಲಿ ಆರೋಗ್ಯ ತಪಾಸಣೆ ಮಾಡಿಯೇ ಒಳಬಿಡಬೇಕು ಎಂದರು.

ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಿ.ರಾಮಪ್ಪ ಮಾತನಾಡಿ, ಪರೀಕ್ಷಾ ಕೇಂದ್ರಗಳಲ್ಲಿ ಮೂಲಭೂತ ಸೌಲಭ್ಯಗಳಾದ ನೀರು, ಗಾಳಿ, ಬೆಳಕು, ವಿದ್ಯುತ್‌ ವ್ಯವಸ್ಥೆಯನ್ನು ಸರಿಯಾಗಿ ಮಾಡಿಕೊಳ್ಳಬೇಕು.ಪರೀಕ್ಷಾ ಕೊಠಡಿಗಳಲ್ಲಿ ಸಿಸಿಟಿವಿಗಳ ಕಾರ್ಯವನ್ನು ಪರಿಶೀಲಿಸಿಕೊಳ್ಳಬೇಕು.ಆರೋಗ್ಯ ಇಲಾಖೆ, ಪೊಲೀಸ್‌ ಇಲಾಖೆ ಹಾಗೂ ಇತರೆ ಇಲಾಖೆಗಳ ಸಹಾಯವನ್ನು ಪಡೆದು ಪರೀಕ್ಷಾಸಮಯದಲ್ಲಿ ಯಾವುದೇ ಅವ್ಯವಹಾರ ಹಾಗೂ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕು ಎಂದು ಅವರು ಹೇಳಿದರು.

ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿ ಕಾರಿಗಳು, ಮುಖ್ಯ ಅಧೀಕ್ಷಕರು, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಕಸ್ಟೋಡಿಯನ್‌ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next