Advertisement

ಎಸ್ಸೆಸ್ಸೆಲ್ಸಿ ಪರೀಕ್ಷಾ ಅವ್ಯವಹಾರ: ಕಠಿಣ ಶಿಕ್ಷೆ

01:17 AM Mar 26, 2019 | Sriram |

ಬೆಂಗಳೂರು : ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆಯಲ್ಲಿ ಅವ್ಯವಹಾರ ನಡೆಸಲು ಪ್ರಯತ್ನಿಸಿದ ಶಿಕ್ಷಕರ ವಿರುದ್ಧ ಕಠಿಣ ಕ್ರಮಕ್ಕೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಆದೇಶಿಸಿದೆ.

Advertisement

ಸೋಮವಾರ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅಕ್ರಮಕ್ಕೆ ಪ್ರಯತ್ನಿಸಿದ ಶಿಕ್ಷಕರ ಮೇಲೆ ಕ್ರಿಮಿನಲ್‌ ಪ್ರಕರಣ ದಾಖಲಿಸಿ, ಇದಕ್ಕೆ ಸಹಕರಿಸಿದ ಕೊಠಡಿ ಮೇಲ್ವಿಚಾರಕರು ಹಾಗೂ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರನ್ನು ಅಮಾನತು ಮಾಡುವಂತೆ ನಿರ್ದೇಶನ ನೀಡಿದೆ.

ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ರಾಯಭಾಗ ತಾಲೂಕಿನ ಹಾರೂಗೇರಿ ಸಂಯುಕ್ತ ಪಿಯು ಕಾಲೇಜು ಪರೀಕ್ಷಾ ಕೇಂದ್ರದಲ್ಲಿ ಗಣಿತ ಪ್ರಶ್ನೆಪತ್ರಿಕೆಗೆ ಉತ್ತರಗಳನ್ನು ಸಿದ್ಧಪಡಿಸಿ ವಿದ್ಯಾರ್ಥಿಗಳಿಂದ ನಕಲು ಮಾಡಿಸಲು ಪ್ರಯತ್ನಿಸುತ್ತಿದ್ದರು ಎಂಬ ಆರೋಪದಡಿ ಅಲಕನೂರ ಸರ್ಕಾರಿ ಪ್ರೌಢಶಾಲೆ ಶಿಕ್ಷಕರಾದ ಎ.ಬಿ. ಪಾಟೀಲ, ಡಿ.ಪಿ. ಕಾಪ್ಸಿ ಮತ್ತು ಪಾಲಯ್ಯ ಅವರ ಮೇಲೆ ಶಿಕ್ಷಣ ಕಾಯ್ದೆ- 1983ರ ಪ್ರಕಾರ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಿ ಸಂಬಂಧಪಟ್ಟ ಉಪನಿರ್ದೇಶಕರಿಗೆ ನಿರ್ದೇಶಿಸಿ, ಅಕ್ರಮಕ್ಕೆ ಸಹಕರಿಸಿದ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಹಾಗೂ ಕೊಠಡಿ ಮೇಲ್ವಿಚಾರಕರನ್ನು ಅಮಾನುತು ಮಾಡಲು ಮಂಡಳಿ ನಿರ್ದೇಶಕಿ ವಿ. ಸುಮಂಗಲಾ ಆದೇಶ ಹೊರಡಿಸಿದ್ದಾರೆ.

ಖಾಸಗಿ ಅಭ್ಯರ್ಥಿ ಡಿಬಾರ್‌:
ಮೈಸೂರಿನ ಒಂಟಿಕೊಪ್ಪಲು ಪ್ರೌಢಶಾಲಾ ಪರೀಕ್ಷಾ ಕೇಂದ್ರದಲ್ಲಿ ಕೊಠಡಿಯೊಳಗೆ ನಕಲಿಗೆ ಪ್ರಯತ್ನಿಸಿದ ಖಾಸಗಿ ಅಭ್ಯರ್ಥಿಯನ್ನು ಡಿಬಾರ್‌ ಮಾಡಲಾಗಿದೆ. ಸಮೀಪದ ಜಯಲಕ್ಷ್ಮೀಪುರ ಪೊಲೀಸ್‌ ಠಾಣೆಯಲ್ಲಿ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗಿದೆ. ಪರೀಕ್ಷಾಕೇಂದ್ರದಿಂದ 11.15ರ ಸುಮಾರಿಗೆ ಮೊಬೈಲ್‌ ಮೂಲಕ ಪ್ರಶ್ನೆಗಳ ಫೋಟೋ ತೆಗೆದು ವಾಟ್ಸ್‌ ಆ್ಯಪ್‌ ಗ್ರೂಪ್‌ಗ್ಳಿಗೆ ಕಳುಹಿಸಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಡಿಬಾರ್‌ ಮಾಡಿ, ಪ್ರಕರಣ ದಾಖಲಿಸಲಾಗಿದೆ ಎಂದು ಮಂಡಳಿ ತಿಳಿಸಿದೆ.

ಡಿಡಿಪಿಐ ವಾಟ್ಸ್‌ಆ್ಯಪ್‌ಗೆ ಬಂದ ಎಸ್ಸೆಸ್ಸೆಲ್ಸಿ ಗಣಿತ ಪ್ರಶ್ನೆ ಪತ್ರಿಕೆ!
ವಿಜಯಪುರ: ಜಿಲ್ಲೆಯಲ್ಲಿ ನಡೆಯುತ್ತಿರುವ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸೋಮವಾರ ನಡೆದ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ. ಗಣಿತ ಪರೀಕ್ಷೆ ಆರಂಭವಾದ ಒಂದು ಗಂಟೆಯೊಳಗೆ ಪ್ರಶ್ನೆ ಪತ್ರಿಕೆ ಪ್ರತಿ ಮೊಬೈಲ್‌ನ ವಾಟ್ಸ್‌ಆ್ಯಪ್‌ಗ್ಳಲ್ಲಿ ಹರಿದಾಡಿದೆ.

Advertisement

ಈ ಕುರಿತು “ಉದಯವಾಣಿ’ಗೆ ಪ್ರತಿಕ್ರಿಯಿಸಿದ ಡಿಡಿಪಿಐ, ಎಸ್ಸೆಸ್ಸೆಲ್ಸಿ ಗಣಿತ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವ ದೂರು ಬಂದಿದೆ. ನನ್ನ ಮೊಬೈಲ್‌ನ ವಾಟ್ಸ್‌ಆ್ಯಪ್‌ಗೆ 11:30ರ ಸುಮಾರಿಗೆ ಗಣಿತ ಪ್ರಶ್ನೆ ಪತ್ರಿಕೆ ಬರುತ್ತಿದ್ದಂತೆ ಮಾಹಿತಿ ಸಂಗ್ರಹಿಸಿದ್ದೇನೆ. ಪ್ರಾಥಮಿಕ ಮಾಹಿತಿ ಪ್ರಕಾರ ಸಿಂದಗಿ ತಾಲೂಕಿನ ಮೋರಟಗಿ ಕಲ್ಪವೃಕ್ಷ ಶಾಲೆಯ ಪರೀಕ್ಷಾ ಕೇಂದ್ರದಿಂದ ಈ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವ ಮಾಹಿತಿ ಇದ್ದರೂ, ನಿಖರವಾಗಿಲ್ಲ. ಹೀಗಾಗಿ ಈ ಕುರಿತು ಸಮಗ್ರ ತನಿಖೆ ನಡೆಸಲು ಸಿಂಧಗಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ತಪ್ಪಿ¤ಸ್ತರ ವಿರುದ್ದ ಕ್ರಮ ಜರುಗಲಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next