Advertisement
ನಗರದ ಗುರುಭವನದಲ್ಲಿ ಬುಧವಾರ ಜಿಲ್ಲಾಡಳಿತ, ಜಿಪಂ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಕುರಿತು ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಗೆ ಆಯೋಜಿಸಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಜಿಪಂ ಸಿಇಒ ಮಹಮ್ಮದ ರೋಷನ್ ಮಾತನಾಡಿ, ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯಿಂದ ಈಗಾಗಲೇ ಕ್ವಿಜ್ ಹಾಗೂ ಟೆಸ್ಟ್ ಪರೀಕ್ಷೆ ಮಾಡಲಾಗಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಮಟ್ಟ ತಿಳಿಯಲು ಕೆಂಪು, ಹಳದಿ ಹಾಗೂ ಹಸಿರು ಗುಂಪುಗಳಾಗಿ ವಿಂಗಡಿಸಲಾಗಿದೆ. ಕೆಂಪು ಗುಂಪಿನ ಮಕ್ಕಳ ಕಲಿಕೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಬೇಕು.
ಮೂರು ವಿಭಾಗದಲ್ಲಿ ವಿಂಗಡಣೆಯಿಂದ ವಿಷಯ, ಶಿಕ್ಷಕರ ಹಾಗೂ ವಿದ್ಯಾರ್ಥಿಗಳ ಸ್ಥಿತಿಗತಿ ಬಗ್ಗೆ ಮಾಹಿತಿ ದೊರೆಯುತ್ತಿದ್ದು, ಕಲಿಕೆಯಲ್ಲಿ ಹಿಂದಿರುವ ಶಾಲೆಗಳ ಮೇಲೆ ನಿಗಾವಹಿಸಲು ಸಹಕಾರಿಯಾಗಿದೆ. ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶ ಸುಧಾರಣೆ ಸಂಕಲ್ಪದಿಂದ ಒಂಚೂರು ಹಿಂದೆ ಹೋಗಬಾರದು. ಈ ವರ್ಷದಲ್ಲಿ ಜಿಲ್ಲೆಗೆ ರಾಜ್ಯಕ್ಕೆ ಮೊದನೇ ಸ್ಥಾನದಲ್ಲಿ ಬರಲು ಪ್ರಮಾಣ ಮಾಡೋಣ ಎಂದು ಹೇಳಿದರು.
ಇದನ್ನೂ ಓದಿ :ಹೊಸನೀರಲಗಿಯಲ್ಲಿ ಡಿಸಿ ಗ್ರಾಮ ವಾಸ್ತವ್ಯ
ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನೆಪ್ಪ ವಡಗೇರಿ ಮಾತನಾಡಿ, ಎಸ್ಸೆಸ್ಸೆಲ್ಸಿ ಫಲಿತಾಂಶ ಸುಧಾರಣೆಗೆ ಹಾಕಿಕೊಂಡ ರೂಪುರೇಷೆಗಳ ತಿಳಿಸಿ, ಶಿಕ್ಷಕರು ಇನ್ಮುಂದೆ ರಜೆ ಪಡೆಯದೇ ಕಲಿಕೆಗೆ ಒತ್ತು ನೀಡಬೇಕು. ಸಾಧ್ಯವಾದರೇ ರಜೆ ದಿನಗಳಲ್ಲಿ ವಿಶೇಷ ತರಗತಿ ನಡೆಸುವಂತೆ ತಿಳಿಸಿದರು. ಈ ವೇಳೆ ಡಯಟ್ ಉಪನಿರ್ದೇಶಕ ಡಿ.ಎಂ. ಬಸವರಾಜ, ಡಯಟ್ ಹಿರಿಯ ಪ್ರಾಚಾರ್ಯ ಖಾಜಿ, ಅಕ್ಷರ ದಾಸೋಹ ಅಧಿ ಕಾರಿ ಅಡಿಗ, ಸುನಿತಾ, ಸವಣೂರ ಬಿಇಒ ಬೆನಕಪ್ಪ, ಹಾವೇರಿ ಬಿಇಒ ಎಂ.ಎಚ್. ಪಾಟೀಲ, ಶಿಗ್ಗಾವಿ ಬಿಇಒ ಚಿಕ್ಕಮಠ, ಹಾನಗಲ್ಲ ಬಿಇಒ ಶ್ರೀನಿವಾಸ, ರಾಣಿಬೆನ್ನೂರು ಬಿಇಒ ಗುರುಪ್ರಸಾದ, ಹಿರೇಕೆರೂರು ಬಿಇಒ ಸಿದ್ದಲಿಂಗಪ್ಪ ಸೇರಿದಂತೆ ಜಿಲ್ಲೆಯ ಖಾಸಗಿ ಶಾಲೆಗಳ ಆಡಳಿತ ಮಂಡಳಿ ಮುಖ್ಯಸ್ಥರು ಉಪಸ್ಥಿತರಿದ್ದರು.