Advertisement

ಮಲ್ಪೆ ಸೈಂಟ್‌ ಮೇರಿಸ್‌ ದ್ವೀಪದಲ್ಲಿ ಮುಳುಗಿ ಇಬ್ಬರು ವಿದ್ಯಾರ್ಥಿಗಳು ಸಾವು, ಓರ್ವ ನಾಪತ್ತೆ

04:25 PM Apr 07, 2022 | Team Udayavani |

ಉಡುಪಿ :  ಗುರುವಾರ ಮಲ್ಪೆ ಸೈಂಟ್ ಮೇರಿಸ್ ಐಲ್ಯಾಂಡ್ ನಲ್ಲಿ ಪ್ರವಾಸಕ್ಕೆಂದು ಆಗಮಿಸಿದ್ದ ಕೇರಳ ಮೂಲದ ಮೂವರು ವಿದ್ಯಾರ್ಥಿಗಳು ಸಮುದ್ರ ಪಾಲಾಗಿದ್ದು, ಇಬ್ಬರ ಮೃತ ದೇಹ ಪತ್ತೆಯಾಗಿದೆ. ಇನ್ನೊಬ್ಬರ ಮೃತ ದೇಹಕ್ಕಾಗಿ ಶೋಧ ಕಾರ್ಯ ಮುಂದುವರಿದಿದೆ.

Advertisement

ಮೃತರನ್ನು ಕೇರಳ ರಾಜ್ಯದ ಕೊಟ್ಟಾಯಂ ನ ಮಂಗಳಂ ಇಂಜಿನಿಯರಿಂಗ್ ಕಾಲೇಜಿನ ಅಲೆನ್ ರೇಜಿ (22), ಅಮಲ್ ಸೀ ಅನಿಲ್( 22) ಮತ್ತು ಆ್ಯಂಟನಿ (21) ಎಂದು ಗುರುತಿಸಲಾಗಿದೆ.

ಇವರು ಕೊಟ್ಟಾಯಂ ನಿಂದ 42 ವಿದ್ಯಾರ್ಥಿಗಳು ಮತ್ತು ಇಬ್ಬರು ಪ್ರಾಧ್ಯಾಪಕರ ಜೊತೆ ಪ್ರವಾಸಕ್ಕೆ ಬಂದಿದ್ದು, ಸೈಂಟ್ ಮೇರಿಸ್ ಅಪಾಯಕಾರಿ ಸಮುದ್ರ ಭಾಗದಲ್ಲಿ ನೀರಿನಲ್ಲಿ ಆಟವಾಡಲು ಇಳಿದಾಗ, ಆಕಸ್ಮಿಕವಾಗಿ ಮುಳುಗಡೆಯಾಗಿದ್ದಾರೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ಇದನ್ನೂ ಓದಿ : ಅಮಿತ್ ಶಾ ಭೇಟಿ ಮಾಡಿದ ಜಗದೀಶ್ ಶೆಟ್ಟರ್: ಖಾತೆ ಉಳಿಸುವ ಯತ್ನ?

Advertisement

Udayavani is now on Telegram. Click here to join our channel and stay updated with the latest news.

Next