Advertisement
ಸಂತ ಫಿಲೋಮಿನಾ ಕಾಲೇಜಿನಲ್ಲಿ ಗುರುವಾರ ನಡೆದ ವಜ್ರಮಹೋತ್ಸವ ಆಚರಣೆಯ ಸಮಾರೋಪ ಸಮಾರಂಭದಲ್ಲಿ ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ ಅವರು ಮಾತನಾಡಿದರು.
ಸಂತ ಫಿಲೋಮಿನಾ ಕಾಲೇಜು ಡೊನೇಶನ್ ಮತ್ತು ಟ್ಯೂಶನ್‌ಗಳ ಮಧ್ಯೆ ಸಿಲುಕಿಕೊಳ್ಳದೆ ಮೌಲ್ಯಾಧಾರಿತ ಶಿಕ್ಷಣದೊಂದಿಗೆ ಗ್ರಾಮೀಣ ಭಾಗ ದವರೂ ಸುಶಿಕ್ಷಿತರಾಗುವಂತೆ ಮಾಡಿರುವುದು ಹೆಮ್ಮೆಯ ಸಂಗತಿ. ಹತ್ತಾರು ಕ್ರೀಡಾಳುಗಳು, ವೈದ್ಯರು, ಕಲಾವಿದರು, ರಾಜಕೀಯ ವ್ಯಕ್ತಿ ಗಳನ್ನು ನಾಡಿಗೆ ಪರಿಚಯಿಸಿ, ಮೌಲ್ಯ ಯುತವಾಗಿ ಮುನ್ನುಗುತ್ತಿದೆ. 60 ಸಂವತ್ಸರಗಳನ್ನು ಪೂರೈಸಿರುವ ಈ ಸಂಸ್ಥೆ ವಿಶ್ವವಿದ್ಯಾನಿಲಯವಾಗಿ ಪರಿ ವರ್ತನೆ ಗೊಂಡು ಶತಮಾನಗಳಾಚೆಗೂ ಪಸರಿಸಲಿ ಎಂದರು. ಶ್ರೇಷ್ಠ ಮನ್ನಣೆ
ರಾಜ್ಯದ ಉನ್ನತ ಶಿಕ್ಷಣ ಸಚಿವರ ಪ್ರತಿನಿಧಿಯಾಗಿ ಭಾಗವಹಿಸಿದ್ದ ಉದ್ಯಮಿ ಎಂ.ಬಿ. ಸದಾಶಿವ ಮಾತನಾಡಿ, ಶಿಸ್ತು, ಬದ್ಧತೆ, ಪ್ರಾಮಾಣಿಕತೆ ಮೊದಲಾದ ಆದರ್ಶ, ಮೌಲ್ಯಗಳನ್ನು ಶಿಕ್ಷಣದೊಂದಿಗೆ ಅಳವಡಿಸಿಕೊಂಡಾಗ ಸಂಸ್ಥೆಯು ಶ್ರೇಷ್ಠ ಮನ್ನಣೆಯನ್ನು ಗಳಿಸಲು ಸಾಧ್ಯ ಎಂದರು.
Related Articles
Advertisement
ಸಮ್ಮಾನ2018ರಲ್ಲಿ ಧರ್ಮಾಧ್ಯಕ್ಷರಾಗಿ ನೇಮಕಗೊಂಡು ಮೊದಲ ಬಾರಿಗೆ ಕಾಲೇಜಿಗೆ ಆಗಮಿಸಿದ ಡಾ| ಪೀಟರ್ ಪೌಲ್ ಸಲ್ಡಾನ್ಹಾ, ವಿಜಿಎಸ್‌ಟಿ ಪ್ರಶಸ್ತಿ ವಿಜೇತ ಕಾಲೇಜಿನ ಕ್ಯಾಂಪಸ್ ನಿರ್ದೇಶಕ ವಂ| ಡಾ| ಆ್ಯಂಟನಿ ಪ್ರಕಾಶ್ ಮೊಂತೆರೊ, ಮಂಗಳೂರು ವಿವಿ ಸಿಂಡಿಕೇಟ್‌ಗೆ ನಾಮನಿರ್ದೇಶನಗೊಂಡ ಕಾಲೇಜಿನ ಪ್ರಾಂಶುಪಾಲ ಪ್ರೊ| ಲಿಯೋ ನೊರೊನ್ಹಾ, ಪಿಎಚ್‌ಡಿ ಪದವಿ ಗಳಿಸಿದ ಭೌತಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ| ಕೆ. ಚಂದ್ರಶೇಖರ ಮತ್ತು ರಸಾಯನಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಡಾ| ಮಾಲಿನಿ ಕೆ. ಅವರನ್ನು ಸಮ್ಮಾನಿಸಲಾಯಿತು. ಪದವಿಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪನಿರ್ದೇಶಕಿ ಎಲ್ವಿರಾ ಫಿಲೋ ಮಿನಾ, ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಉದ್ಯಮಿ ಮೈಕಲ್ ಡಿ’ಸೋಜಾ, ಹಿರಿಯ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜೈರಾಜ್ ಭಂಡಾರಿ, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಆ್ಯಂಟನಿ ಒಲಿವೆರ, ಪ.ಪೂ. ಕಾಲೇಜಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ದುರ್ಗಾಪ್ರಸಾದ್ ರೈ, ಮಾೖದೆ ದೇವುಸ್ ಚರ್ಚ್ ಪಾಲನ ಮಂಡಳಿಯ ಉಪಾಧ್ಯಕ್ಷ ಜೆ.ಪಿ. ರೋಡ್ರಿಗಸ್ ಉಪಸ್ಥಿತರಿದ್ದರು. ಕಾಲೇಜಿನ ಸಂಚಾಲಕ ವಂ| ಅಲ್ಫ್ರೆಡ್ ಜೆ. ಪಿಂಟೊ ಸ್ವಾಗತಿಸಿ, ಪ್ರಾಂಶುಪಾಲ ಪ್ರೊ| ಲಿಯೋ ನೊರೊನ್ಹಾ ಕಾಲೇಜಿನ ಆರು ದಶಕಗಳ ಸಾಧನೆಗಳ ವರದಿ ಮಂಡಿಸಿದರು. ಪ.ಪೂ. ಕಾಲೇಜಿನ ಪ್ರಾಂಶುಪಾಲ ವಂ| ವಿಜಯ್ ಲೋಬೊ ವಂದಿಸಿದರು. ಆಂಗ್ಲ ಭಾಷಾ ವಿಭಾಗದ ಮುಖ್ಯಸ್ಥೆ ಭಾರತಿ ಎಸ್. ರೈ ಕಾರ್ಯಕ್ರಮ ನಿರ್ವಹಿಸಿದರು. ಶಿಕ್ಷಣ ನಿರಂತರ ಪ್ರಕ್ರಿಯೆ
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಮಂಗಳೂರು ಧರ್ಮಪ್ರಾಂತದ ಧರ್ಮಾಧ್ಯಕ್ಷ ವಂ| ಡಾ| ಪೀಟರ್ ಪೌಲ್ ಸಲ್ಡಾನ್ಹಾ ಮಾತನಾಡಿ, ನಾವು ವಸ್ತುಸ್ಥಿತಿಯನ್ನು ಅವಲೋಕಿಸುವಾಗ ಸಾಧಕ-ಬಾಧಕಗಳೆರಡನ್ನೂ ಸಮಾನವಾಗಿ ಪರಿಗಣಿಸಬೇಕು. ಆಗ ಮಾತ್ರ ಬೆಳವಣಿಗೆ ಸಾಧ್ಯ. ಶಿಕ್ಷಣವು ನಿರಂತರ ಪ್ರಕ್ರಿಯೆ. ಅದು ಕಾಲೇಜಿನ ಚೌಕಟ್ಟನ್ನು ಮೀರಿದ ಬೆಳವಣಿಗೆಯಾಗಬೇಕು ಎಂದರು.