Advertisement

ಮುಷ್ಕರ ಹಿಂಪಡೆದ ವೈದ್ಯರಿಗೆ ಧನ್ಯವಾದ ತಿಳಿಸಿದ ಎಸ್‌.ಟಿ.ಸೋಮಶೇಖರ್‌

07:42 PM Aug 23, 2020 | sudhir |

ಬೆಂಗಳೂರು: ವೈದ್ಯರ ಬೇಡಿಕೆಗಳನ್ನು ಈಡೇರಿಸುವುದಾಗಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್‌ ಪಡೆದ ವೈದ್ಯರ ಕ್ರಮ ಸ್ವಾಗತಾರ್ಹವಾಗಿದ್ದು, ಧನ್ಯವಾದ ತಿಳಿಸುತ್ತೇನೆ ಎಂದು ಸಚಿವ ಎಸ್‌.ಟಿ. ಸೋಮಶೇಖರ್‌ ತಿಳಿಸಿದ್ದಾರೆ.

Advertisement

ನಾಲ್ಕೈದು ತಿಂಗಳಿನಿಂದ ಕೋವಿಡ್‌-19 ಮಹಾಮಾರಿ ವಿರುದ್ಧ ವೈದ್ಯರು, ವೈದ್ಯಕೀಯ ಸಿಬ್ಬಂದಿ, ಜಿಲ್ಲಾಡಳಿತ ಸೇರಿದಂತೆ ಅನೇಕ ಇಲಾಖೆಗಳ ತಂಡ ಅವಿರತವಾಗಿ ಕಾರ್ಯ ನಿರ್ವಹಿಸುತ್ತಿದೆ. ಇದು ಎಂದಿಗೂ ಸ್ಮರಣೀಯವಾಗಿದ್ದು, ಯಾರೂ ಎಂದಿಗೂ ಮರೆಯಲಾಗದು.

ಇನ್ನು ಕೋವಿಡ್‌-19ರ ಸಂದರ್ಭದಲ್ಲಿ ವೈದ್ಯರು ಅನೇಕ ಸಮಸ್ಯೆಗಳನ್ನು ಎದುರಿಸುತ್ತಿದ್ದು, ಅದನ್ನು ಬಗೆಹರಿಸುವ ನಿಟ್ಟಿನಲ್ಲಿ ವೈದ್ಯರು ಮುಷ್ಕರಕ್ಕೆ ಕರೆ ನೀಡಿದ್ದರು. ವೈದ್ಯರ ಸಮಸ್ಯೆಗಳು ಸರ್ಕಾರದ ಗಮನಕ್ಕೆ ಬಂದಿದ್ದು, ಬೇಡಿಕೆ ಈಡೇರಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿ ಹಿನ್ನೆಲೆಯಲ್ಲಿ ಮುಷ್ಕರ ವಾಪಸ್‌ ಪಡೆದಿರುವ ಕ್ರಮ ಸ್ವಾಗತಾರ್ಹ. ಇದಕ್ಕಾಗಿ ವೈದ್ಯಾಧಿಕಾರಿಗಳ ರಾಜ್ಯ ಸಂಘ ಹಾಗೂ ಮೈಸೂರು ಸಂಘಕ್ಕೆ ಧನ್ಯವಾದ ತಿಳಿಸುತ್ತೇನೆ ಎಂದು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next