Advertisement

ಮಾರ್ಚ್‌ನೊಳಗೆ ಫ‌ಲಾನುಭವಿಗಳಿಗೆ ಹಕ್ಕು ಪತ್ರ ನೀಡಿ : ಅಧಿಕಾರಿಗಳಿಗೆ ಸಚಿವರಿಂದ ತಾಕೀತು

01:40 PM Feb 12, 2022 | Team Udayavani |

ಬೆಂಗಳೂರು: ಯಶವಂತಪುರ ವಿಧಾನ ಸಭಾಕ್ಷೇತ್ರ ವ್ಯಾಪ್ತಿಯಲ್ಲಿ ಕಳೆದ ಮೂರ್ನಾಲ್ಕು ವರ್ಷಗಳಿಂದ ಹಿಂದೆ ಹಕ್ಕುಪತ್ರಗಳಿಗೆ ಅರ್ಜಿ ಸಲ್ಲಿಸಿದರೂ ಇನ್ನೂ ಫ‌ಲಾನುಭವಿಗಳಿಗೆ ಹಕ್ಕು ಪತ್ರಗಳು ತಲುಪಿಲ್ಲ. ಆ ಹಿನ್ನೆಲೆ ಅರ್ಹ ಫಲಾನುಭವಿಗಳಿಗೆ ಮಾರ್ಚ್‌ ತಿಂಗಳೊಳಗೆ ಹಕ್ಕು ಪತ್ರ ವಿತರಣೆ ಮಾಡವಂತೆ ಸಚಿವ ಎಸ್‌.ಟಿ.ಸೋಮಶೇಖರ್‌ ಅಧಿಕಾರಿಗಳಿಗೆ ತಾಕೀತು ಮಾಡಿದರು.

Advertisement

ಶುಕ್ರವಾರ ಯಶವಂತಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಪಂಗಳಲ್ಲಿ ಹಕ್ಕುಪತ್ರ ವಿತರಣೆ, ಸ್ಮಶಾನಕ್ಕೆ ಜಾಗದ ಕೊರತೆ ಸೇರಿದಂತೆ ನಾನಾ ಸಮಸ್ಯೆಗಳು ಹಾಗೂ ಅವುಗಳಿಗೆ ಪರಿಹಾರ
ಕಂಡುಕೊಳ್ಳುವ ಕುರಿತು ಬೆಂಗಳೂರು ನಗರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಮಾತನಾಡಿದರು.

ಯಾವುದೇ ಕಾರಣಕ್ಕೂ ಈ ಗಡುವು ಮೀರಬಾರದು. ಬಡವರಿಗಾಗಿ ಸರ್ಕಾರ ರೂಪಿಸಿದ ಕಾರ್ಯಕ್ರಮ ಇದಾಗಿದೆ. 94 ಸಿಸಿಯಡಿ ಹಕ್ಕುಪತ್ರಗಳಿಗೆ ಅಲೆದಾಡುವುದನ್ನು ತಪ್ಪಿಸಬೇಕು ಎಂದು ಸೂಚಿಸಿದರು. ಹಕ್ಕುಪತ್ರ, ಸಾಗುವಳಿ ಚೀಟಿ ಸಮರ್ಪಕವಾಗಿ ವಿತರಣೆಯಾಗಬೇಕು. 94ಸಿಸಿಯಡಿ ಹಕ್ಕುಪತ್ರ ವಿತರಣೆಗೆ ಅಲೆದಾಡುವುದನ್ನು ತಪ್ಪಿಸಿ. ಬಡವರಿಗೆ ಒಂದು, ಶ್ರೀಮಂತರಿಗೆ ಒಂದು ಮಾಡಬೇಡಿ ಎಂದು ಸಭೆಯಲ್ಲಿ ಹಾಜರಿದ್ದ ಹಿರಿಯ ಅಧಿಕಾರಿಗಳಿಗೆ ಸೂಚಿಸಿದರು.

ಸಾಗುವಳಿ ಚೀಟಿಯಲ್ಲಿ ತಾರತಮ್ಯ ಎಸಗಲಾಗಿದೆ. ಕೆಲವರಿಗೆ ನೀಡುವುದು, ಕೆಲವರಿಗೆ ನೀಡದಿರುವುದು ಸರಿಯಲ್ಲ. ಕಿಮ್ಮತ್ತು ಕಟ್ಟಿಸಿಕೊಂಡು ಸಾಗುವಳಿ ಚೀಟಿ ಕೊಡದಿದ್ದರೆ ಹೇಗೆ
ಸರ್ಕಾರಿ ಭೂಮಿ ಮಂಜೂರು ಮಾಡುವಲ್ಲಿ ತಾರತಮ್ಯ ಮಾಡಬಾರದು ಎಂದು ಹೇಳಿದರು.

ಇದನ್ನೂ ಓದಿ : ಸೋಮವಾರದಿಂದ ವಿಧಾನಸಭೆಯ ಜಂಟಿ‌ ಅಧಿವೇಶನ: ಚುನಾವಣಾ ಸುಧಾರಣೆ ಬಗ್ಗೆ ಚರ್ಚೆ?

Advertisement

ಸ್ಮಶಾನ ಜಾಗ ಗುರುತಿಸಿ: ಹಲವು ಗ್ರಾಪಂಗಳಲ್ಲಿ ಸ್ಮಶಾನ ಇಲ್ಲದಿರುವುದರಿಂದ ಸರ್ಕಾರಿ ಜಾಗಗಳನ್ನು ಗುರುತಿಸಿ ಸ್ಮಶಾನ ಮಾಡಿಕೊಡಬೇಕು. ಹಲವೆಡೆ ಸರ್ಕಾರಿ ಭೂಮಿ ಲಭ್ಯವಿದ್ದರೂ ಸ್ಮಶಾನಕ್ಕೆ ಜಾಗ ಮಾಡಿಕೊಟ್ಟಿಲ್ಲ. ಬೆಂಗಳೂರು ನಗರಕ್ಕೆ ಹಲವು ಗ್ರಾಮಗಳು ಹೊಂದಿಕೊಂಡಿದ್ದು ಆದರೆ ಅಂತ್ಯಕ್ತಿಯೆಗೆ ಸೂಕ್ತ ಜಾಗ ಇಲ್ಲದಂತಾಗಿದೆ ಎಂದರು.

ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಪರಿಹಾರ ಕಾರ್ಯ ಕೈಗೊಳ್ಳಬೇಕು. ಸ್ಮಶಾನಕ್ಕೆಂದು ಗುರುತಿಸಿರುವ ಜಾಗಗಳನ್ನು ಒತ್ತುವರಿ ಮಾಡಿಕೊಳ್ಳುವುದರಿಂದ ಅವುಗಳಿಗೆ ತಂತಿಬೇಲಿ
ಹಾಕಿ ಹದ್ದುಬಸ್ತು ಮಾಡಬೇಕು. ಕೋವಿಡ್‌ ಸಂದರ್ಭದಲ್ಲಿ ಆರಂಭಿಸಿದ ವಿದ್ಯುತ್‌ ಚಿತಾಗಾರಗಳಿಗೆ ಸೂಕ್ತ ಮೂಲ ಸೌಕರ್ಯ ಒದಗಿಸಬೇಕು ಹೇಳಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಸಂಗಪ್ಪ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮಾ.25ರ ಒಳಗೆ ಹಕ್ಕುಪತ್ರ ವಿತರಣೆ : ಡೀಸಿ ಜಿಲ್ಲಾಧಿಕಾರಿ ಮಂಜುನಾಥ್‌ ಮಾತನಾಡಿ, ಮಾ.25ರೊಳಗೆ ಹಕ್ಕುಪತ್ರಗಳ ವಿತರಣೆಯಾಗಬೇಕು. ಸ್ಮಶಾನ ಜಾಗಗಳನ್ನು ಗುರುತಿಸಿ ಸಮಸ್ಯೆ ಇತ್ಯರ್ಥಪಡಿಸಬೇಕು. ಯಾವುದೇ ಸಮಸ್ಯೆಗಳಿದ್ದರೂ ತ್ವರಿತವಾಗಿ ಬಗೆಹರಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next