ಹೊಸದಿಲ್ಲಿ: 16 ವರ್ಷದ ಬಾಲಕಿಯೋರ್ವಳ ಮೇಲೆ ಯುವಕನೋರ್ವ ಸುಮಾರು 20 ಬಾರಿ ಚಾಕುವಿನಿಂದ ಚುಚ್ಚಿ ಕೊಲೆಗೈದ ಘಟನೆ ರಾಷ್ಟ್ರ ರಾಜಧಾನಿ ದೆಹಲಿಯ ರೋಶಿನಿ ಶಹಬಾದ್ ಡೈರಿ ಏರಿಯಾದಲ್ಲಿ ನಡೆದಿದೆ. ಸಾರ್ವಜನಿಕರು ನೋಡುತ್ತಿರುವಂತೆಯೇ ಆರೋಪಿ ಯುವಕ ದಾರುಣ ಕೃತ್ಯ ನಡೆಸಿದ್ದಾನೆ. ಸಂಪೂರ್ಣ ಘಟನೆ ಸಿಸಿ ಟಿವಿಯಲ್ಲಿ ದಾಖಲಾಗಿದೆ.
ಆರೋಪಿಯನ್ನು ಸಾಹಿಲ್ ಎಂದು ಗುರುತಿಸಲಾಗಿದೆ. ಆರೋಪಿ ಮತ್ತು ಹುಡುಗಿ ಪ್ರೇಮ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಈ ಘಟನೆಗೆ ಮೊದಲು ಅವರಿಬ್ಬರ ನಡುವೆ ಜಗಳವಾಗಿತ್ತು ಎಂದು ವರದಿಯಾಗಿದೆ.
ಹುಡುಗಿಯು ಪರಿಯಸ್ಥರ ಬರ್ತ್ ಡೇ ಪಾರ್ಟಿಗೆಂದು ತೆರಳುತ್ತಿದ್ದಳು. ಈ ವೇಳೆ ಅಡ್ಡಗಟ್ಟಿದ ಆರೋಪಿ ಸಾಹಿಲ್ ಮನಸೋಇಚ್ಛೆ ಚುಚ್ಚಿದ್ದಾನೆ. ಘಟನೆ ಎಷ್ಟು ಭೀಕರವಾಗಿತ್ತೆಂದರೆ ಒಂದು ಹಂತದಲ್ಲಿ ಚಾಕು ಆಕೆಯ ತಲೆಯಲ್ಲಿ ಸಿಕ್ಕಿ ಹಾಕಿಕೊಂಡಿತ್ತು. ಬಳಿಕ ಸಾಹಿಲ್ ಬಳಿಯಿದ್ದ ಸಿಮೆಂಟ್ ಸ್ಲ್ಯಾಬೊಂದನ್ನು ಎತ್ತಿ ಆಕೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಈ ವೇಳೆ ಬಹಳಷ್ಟು ಮಂದಿ ಸುತ್ತ ಇದ್ದರೂ, ಯಾರೂ ತಡೆಯುವ ಪ್ರಯತ್ನ ಮಾಡಿಲ್ಲ.
ಸದ್ಯ ಆರೋಪಿ ಸಾಹಿಲ್ ತಲೆ ಮರೆಸಿಕೊಂಡಿದ್ದು, ಆತನ ಹುಡುಕಾಟ ನಡೆಯುತ್ತಿದೆ.
Related Articles
ಮೃತ ಹುಡುಗಿಯ ತಂದೆಯ ದೂರಿನ ಮೇರೆಗೆ ಶಹಬಾದ್ ಡೈರಿ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 302 ರ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.