Advertisement
ಒಟ್ಟು 2 ಎಕರೆ 14 ಗುಂಟೆ ಜಾಗದಲ್ಲಿ 16.50 ಕೋಟಿ ವೆಚ್ಚದಲ್ಲಿ ಒಳಾಂಗಣ ಕ್ರೀಡಾಂಗಣ ಮತ್ತು ಮಹಿಳಾ ಕ್ರೀಡಾ ವಸತಿ ನಿಲಯ ನಿರ್ಮಿಸಲಾಗಿದೆ. ಬೆಳಗಾವಿ ಕ್ರೀಡಾ ವಸತಿ ನಿಲಯದಲ್ಲಿ ಕುಸ್ತಿ, ಜ್ಯೂಡೊ, ವಾಲಿಬಾಲ್, ಅಥ್ಲೆಟಿಕ್ ಮತ್ತು ಸೆ„ಕ್ಲಿಂಗ್‌ಗೆ ತರಬೇತಿ ನೀಡಲಾಗುತ್ತಿದೆ. ಒಳಾಂಗಣ ಕ್ರೀಡಾಂಗಣದ ಕಟ್ಟಡದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಉಪಕರಣಗಳುಳ್ಳ ಜಿಮ್ ಹಾಲ್, ಜ್ಯೂಡೊ ಹಾಲ್, ಕುಸ್ತಿ ಅಂಕಣಗಳನ್ನು ನಿರ್ಮಿಸಲಾಗಿದ್ದು ಅತ್ಯಾಧುನಿಕ ವ್ಯವಸ್ಥೆ ಒದಗಿಸಲಾಗಿದೆ.
ಅನುದಾನ ನೀಡಲಾಗಿದ್ದು, ಇದರಲ್ಲಿ ಮೂರೂವರೆ ಕೋಟಿ ಹಣ ಬಿಡುಗಡೆ ಮಾಡಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ| ನಾರಾಯಣಗೌಡ ಮಾಹಿತಿ ನೀಡಿದರು. ಬೆಳಗಾವಿ ಕ್ರೀಡಾ ವಸತಿ ನಿಲಯದಲ್ಲಿ ತರಬೇತಿ ಪಡೆಯುತ್ತಿರುವ ಹಲವರು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ್ದಾರೆ. ಈ ಭಾಗದ ಪ್ರತಿಭಾನ್ವಿತ ಕ್ರೀಡಾಪಟುಗಳು ಹೆಚ್ಚಿನ ಸಾಧನೆ ಮಾಡಬೇಕೆಂಬ ಸದುದ್ದೇಶದಿಂದ ಅತ್ಯಾಧುನಿಕ ವ್ಯವಸ್ಥೆಯುಳ್ಳ ಕ್ರೀಡಾ ಸಮುಚ್ಚಯ ನಿರ್ಮಿಸಲಾಗಿದ್ದು, ಇದರಿಂದ ಕ್ರೀಡಾಪಟುಗಳಿಗೆ ಅನುಕೂಲವಾಗಲಿದೆ.
Related Articles
Advertisement
ಈ ಒಳಾಂಗಣ ಕ್ರೀಡಾಂಗಣ ಮತ್ತು ಮಹಿಳಾ ಕ್ರೀಡಾಪಟುಗಳ ವಸತಿ ನಿರ್ಮಾಣದ ಕಾಮಗಾರಿಗೆ ಅನುದಾನ ಬಿಡುಗಡೆ ಮಾಡಿಸುವಲ್ಲಿ ಕೇಂದ್ರ ಸಚಿವರಾಗಿದ್ದ ದಿ| ಸುರೇಶ ಅಂಗಡಿಯವರ ಪಾತ್ರ ಮಹತ್ವದ್ದಾಗಿದೆ ಎಂದು ಸಚಿವರು ಇದೇ ಸಂದರ್ಭದಲ್ಲಿ ಸ್ಮರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಶಾಸಕ ಅನಿಲ ಬೆನಕೆ ಮೊದಲಾದವರು ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಹಾನಗರಪಾಲಿಕೆಯ ಆವರಣದಲ್ಲಿ ಎರಡು ಕೋಟಿ ರೂ ವೆಚ್ಚದಲ್ಲಿ ಸಂಸದೀಯ ಭವನದ ಮಾದರಿಯಲ್ಲಿ ನಿರ್ಮಾಣ ಮಾಡಿರುವ ಅನೆಕ್ಸ್ ಕಟ್ಟಡವನ್ನು ಉದ್ಘಾಟಿಸಿದರು.