Advertisement
ಮಂಗಳಾ ಕ್ರೀಡಾಂಗಣಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಿದ ಕ್ರೀಡಾ ಪಟುಗಳು ಮಂಗಳೂರಿನಲ್ಲಿದ್ದಾರೆ. ಕ್ರೀಡಾ ಸಾಧನೆಗೆ ತಯಾರಾಗಿರುವ ವಿದ್ಯಾರ್ಥಿ ಸಮೂಹವಿದೆ. ಇವರನ್ನು ಉತ್ತೇಜಿಸುವ ನಿಟ್ಟಿನಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ಕ್ರೀಡಾಸೌಲಭ್ಯ ಒದಗಿಸಲು ಇಲಾಖೆ ಬದ್ಧವಾಗಿದೆ. ಇದಕ್ಕಾಗಿ ಬಜೆಟ್‌ನಲ್ಲಿ ಹೆಚ್ಚುವರಿ ಅನುದಾನ ನೀಡುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ತಿಳಿಸಿದರು.
ಕರಾವಳಿ ಉತ್ಸವ ಮೈದಾನವನ್ನು ಕ್ರೀಡೆಗೆ ಮಾತ್ರ ಮೀಸಲಿರಿಸುವಂತೆ ಮನವಿಗಳು ಬಂದಿವೆ. ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಬೇಕಿದೆ. ಈಜುಕೊಳ, ವಿವಿಧ ಕ್ರೀಡಾಂಗಣಗಳ ನಿರ್ಮಾಣಕ್ಕೆ ಕ್ರೀಡಾ ಇಲಾಖೆಗೆ ಭೂಮಿ ಒದಗಿಸುವ ಕುರಿತು ಕಂದಾಯ ಇಲಾಖೆ ಜತೆ ಮಾತುಕತೆ ನಡೆಸಲಾಗುವುದು ಎಂದರು. ಸ್ಮಾರ್ಟ್ ಸಿಟಿ ಯೋಜನೆಯಡಿ ನಗರದ ಬಸ್ ನಿಲ್ದಾಣ ಪಡೀಲ್ ಮತ್ತು ಕೂಳೂರಿಗೆ ಸ್ಥಳಾಂತರವಾಗಲಿದೆ. ಆ ಬಳಿಕ ಹಂಪನಕಟ್ಟೆ ಪ್ರದೇಶದಲ್ಲಿ ವಸ್ತು ಪ್ರದರ್ಶ ನಕ್ಕೆ ಅವಶ್ಯವಿರುವ ಜಾಗ ಲಭ್ಯವಾಗ ಲಿದ್ದು, ಕರಾವಳಿ ಉತ್ಸವ ಮೈದಾನದಲ್ಲಿ ನಡೆಯುವ ವಸ್ತು ಪ್ರದರ್ಶನ ಸಹಿತ ಎಲ್ಲ ಕಾರ್ಯಕ್ರಮಗಳನ್ನು ಹಂಪನಕಟ್ಟೆಗೆ ಸ್ಥಳಾಂತರವಾಗುವುದು. ಬಳಿಕ ಕರಾವಳಿ ಉತ್ಸವ ಮೈದಾನ ಸಂಪೂರ್ಣವಾಗಿ ಕ್ರೀಡಾ ಚಟುವಟಿಕೆಗೆ ದೊರೆಯಲಿದೆ ಎಂದು ತಿಳಿಸಿದರು.
Related Articles
Advertisement
ಅನುದಾನಕ್ಕೆ ಶಾಸಕರಿಂದ ಮನವಿಮಂಗಳಾ ಕ್ರೀಡಾಂಗಣದ ಅಭಿವೃದ್ಧಿ ಹಾಗೂ ನಗರದದಲ್ಲಿ ವಿವಿಧ ಕ್ರೀಡಾಂಗಣಗಳಿಗೆ ಮೂಲಸೌಕರ್ಯಗಳನ್ನು ಒದಗಿಸಲು 3.35 ಕೋಟಿ ರೂ.ಅನುದಾನ ಒದಗಿಸಬೇಕು, ಶ್ರೀನಿವಾಸ ಮಲ್ಯ ಒಳಾಂಗಣ ಕ್ರೀಡಾಂಗಣ ದುರಸ್ತಿಗೆ 14.75 ಲಕ್ಷ ರೂ. ನೀಡಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ಸಚಿವ ರಹೀಂಖಾನ್ ಅವರಿಗೆ ಮನವಿ ಸಲ್ಲಿಸಿದರು. ಈ ಬಗ್ಗೆ ಬೆಂಗಳೂರಿನಲ್ಲಿ ಭೇಟಿ ಮಾಡಿ, ಅಧಿಕಾರಿಗಳ ಜತೆ ಚರ್ಚಿಸಿ ತೀರ್ಮಾನ ಕೈಗೊಳ್ಳೋಣ ಎಂದು ಸಚಿವರು ಶಾಸಕರಿಗೆ ತಿಳಿಸಿದರು. ಬಾಕಿ ಅನುದಾನ ಶೀಘ್ರ ಒದಗಿಸಿ
ಕ್ರೀಡಾ ಇಲಾಖೆ ಉಪನಿರ್ದೇಶಕ ಪ್ರದೀಪ್ ಡಿ’ಸೋಜಾ ಅವರು, ಕ್ರೀಡಾಂಗಣದ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಬೇಕು. ಸರಕಾರ ಮತ್ತು ಜಿಲ್ಲಾ ಪಂಚಾಯತ್‌ನಿಂದ ಕ್ರೀಡಾ ಇಲಾಖೆಗೆ ಬಾಕಿ ಇರುವ ಅನುದಾನವನ್ನು ಶೀಘ್ರ ಒದಗಿಸಬೇಕು ಎಂದು ಮನವಿ ಮಾಡಿದರು.