Advertisement

ಕ್ರೀಡಾಂಗಣಗಳು ಬಳಕೆಯಾಗಲಿ: ಮೇಯರ್‌

06:23 AM Feb 05, 2019 | Team Udayavani |

ಬೆಂಗಳೂರು: ಬಿಬಿಎಂಪಿ ವತಿಯಿಂದ ಕೋಟ್ಯಂತರ ವೆಚ್ಚದಲ್ಲಿ ನಿರ್ಮಿಸಿರುವ ಒಳಾಂಗಣ ವ್ಯಾಯಾಮ ಶಾಲೆಯನ್ನು ಯುವಕರು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಮೇಯರ್‌ ಗಂಗಾಂಬಿಕೆ ಮನವಿ ಮಾಡಿದರು. 

Advertisement

ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ವಾಲಿಬಾಲ್‌ ಒಳಾಂಗಣ ಕ್ರೀಡಾಂಗಣ, ಗ್ರೀನ್‌ ರೂಂ ಹಾಗೂ ಶೆಟಲ್‌ ಕೋರ್ಟ್‌ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೂ ಸುಸಜ್ಜಿತ ಒಳಾಂಗಣ ವ್ಯಾಯಾಮ ಶಾಲೆ ಉದ್ಘಾಟಿಸಿ ಮಾತನಾಡಿದರು.

ಬೆಂಗಳೂರಿನ ದಕ್ಷಿಣ ಭಾಗದಲ್ಲಿ ಒಳಾಂಗಣ ಕ್ರೀಡಾಂಗಣ ಬಹಳ ಕಡಿಮೆಯಿವೆ. ಇದೀಗ ಪಾಲಿಕೆಯಿಂದ ಹಲವು ಯೋಜನೆಗಳಿಗೆ ಚಾಲನೆ ನೀಡಲಾಗಿದ್ದು, ಕ್ರೀಡಾಸಕ್ತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಜತೆಗೆ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಕ್ರೀಡಾಕೂಟಗಳನ್ನು ತಯಾರಿ ಮಾಡುವಲ್ಲಿ ಇದು ಸಹಕಾರಿಯಾಗಲಿದೆ ಎಂದು ಹೇಳಿದರು.

ಮಾಜಿ ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ಬಿಬಿಎಂಪಿ ಮತ್ತು ಸರ್ಕಾರದಿಂದ ಆರೋಗ್ಯ ರಕ್ಷಣೆಗೆ ವಿಶೇಷ ಆದ್ಯತೆ ನೀಡಲಾಗಿದ್ದು, ಖಾಸಗಿ ವಲಯದ ವ್ಯಾಯಾಮ ಶಾಲೆಗಳು ಸಾಮಾನ್ಯ ಜನರಿಗೆ ದುಬಾರಿಯಾಗಿದೆ. ಆ ಹಿನ್ನೆಲೆಯಲ್ಲಿ ಜನರಿಗೆ ಕೈಗೆಟುಕುವ ದರದಲ್ಲಿ ವ್ಯಾಯಾಮ ಶಾಲೆ ಸೌಲಭ್ಯ ಕಲ್ಪಿಸುತ್ತಿದ್ದು, ಜನತೆ ಸದುಪಯೋಗಪಡಿಸಿಕೊಳ್ಳಬೇಕು ಎಂದರು. 

ಶಾಸಕಿ ಸೌಮ್ಯರೆಡ್ಡಿ, ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಿಗೆ ವಿಶೇಷ ಒತ್ತು ನೀಡಲಾಗುತ್ತಿದೆ. ಅದರಂತೆ ಉಳಿದ ಕ್ಷೇತ್ರಗಳಲ್ಲಿಯೂ ಇದೇ ಮಾದರಿಯಲ್ಲಿ ಕ್ರೀಡೆಗಳಿಗೆ ಒತ್ತು ನೀಡಬೇಕಿದೆ. ಜನರ ಸಹಭಾಗಿತ್ವ ಇಲ್ಲದೆ ಯಾವುದೇ ಅಭಿವೃದ್ಧಿ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು. 

Advertisement

ಯುವ ಕ್ರೀಡಾಪಟುಗಳು ಕ್ರೀಡಾಂಗಣಗಳನ್ನು ಸಮರ್ಪಕವಾಗಿ ಬಳಸಿಕೊಂಡು ರಾಷ್ಟ್ರೀಯ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧೆ ಮಾಡುವ ಮೂಲಕ ನಗರಕ್ಕೆ ಕೀರ್ತಿ ತರಬೇಕಿದೆ. ಈ ಕ್ರೀಡಾಂಗಣದಲ್ಲಿ ಪ್ರತಿಯೊಂದು ಕ್ರೀಡಾ ಚಟುವಟಿಕೆಗಳಿಗೆ ಅಕವಾಶವಿದ್ದು, ಒಂದು ಕೋಟಿ ರೂ. ವೆಚ್ಚದಲ್ಲಿ ವ್ಯಾಯಾಮ ಶಾಲೆ ನಿರ್ಮಿಸಿ, ತರಬೇತುದಾರರನ್ನು ನೇಮಿಸಲಾಗಿದೆ. 
-ಎನ್‌.ನಾಗರಾಜು, ಬೈರಸಂದ್ರ ವಾರ್ಡ್‌ ಪಾಲಿಕೆ ಸದಸ್ಯ

Advertisement

Udayavani is now on Telegram. Click here to join our channel and stay updated with the latest news.

Next