ನವದೆಹಲಿ: ಮುಂದಿನ ಲೋಕಸಭೆ ಚುನಾವಣೆಯ ಮುನ್ನೋಟ ಎಂದೇ ಪರಿಗಣಿಸಲಾಗಿರುವ ಗುಜರಾತ್ ಹಾಗೂ ಹಿಮಾಚಲಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ಸೋಮವಾರ ಬೆಳಗ್ಗೆ 8ಗಂಟೆಗೆ ಆರಂಭಗೊಂಡಿದ್ದು, ಬಹುತೇಕ ಚುನಾವಣಾ ಫಲಿತಾಂಶ ಹೊರಬಿದ್ದಿದೆ. ಗುಜರಾತ್ ನಲ್ಲಿ ಬಿಜೆಪಿ 109 ಸ್ಥಾನಗಳನ್ನು ಪಡೆಯುವ ಮೂಲಕ ಮತ್ತೆ ಅಧಿಕಾರದ ಗದ್ದುಗೆ ಏರಿದೆ. ಹಿಮಾಚಲ ಪ್ರದೇಶದಲ್ಲಿ ಆಡಳಿತ ವಿರೋಧಿ ಅಲೆ ಕಂಡು ಬಂದಿತ್ತು, ಬಿಜೆಪಿ 43 ಸ್ಥಾನ ಗಳಿಸುವ ಮೂಲಕ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಆಡಳಿತಾರೂಢ ಕಾಂಗ್ರೆಸ್ 22 ಸ್ಥಾನ ಪಡೆದು ಹೀನಾಯವಾಗಿ ಸೋಲನ್ನನುಭವಿಸಿದೆ.
(ಮೊಬೈಲ್ ನಲ್ಲಿ ಗುಜರಾತ್ ಫಲಿತಾಂಶಕ್ಕಾಗಿ ಇಲ್ಲಿ ಕ್ಲಿಕ್ಕಿಸಿ) ಕ್ಷಣ, ಕ್ಷಣದ ಮಾಹಿತಿ..
*ಗುಜರಾತ್, ಹಿಮಾಚಲ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್. ಗುಜರಾತ್ ನ 182 ವಿಧಾನಸಭಾ ಕ್ಷೇತ್ರ ಹಾಗೂ ಹಿಮಾಚಲ ಪ್ರದೇಶದ 68 ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ನಡೆದಿತ್ತು.
*ಇಂದು ನಿರ್ಧಾರವಾಗಲಿದೆ ಘಟಾನುಘಟನಿಗಳ ಭವಿಷ್ಯ, ಗುಜರಾತ್ ನಲ್ಲಿ ಅಂಚೆ ಮತಗಳ ಎಣಿಕೆ ಆರಂಭಿಸಿದ ಸಿಬ್ಬಂದಿಗಳು.
*ಮುಂದಿನ ಲೋಕಸಭಾ ಚುನಾವಣೆಯ ಮುನ್ನೋಟ ಎಂದೇ ಪರಿಗಣಿಸಲಾಗಿರುವ ಗುಜರಾತ್, ಹಿಮಾಚಲಪ್ರದೇಶ ವಿಧಾನಸಭಾ ಚುನಾವಣೆಯ ಮತಎಣಿಕೆ ಆರಂಭ.