Advertisement

Chennai: ತೆರಿಗೆಯಲ್ಲಿ ಶೇ.50 ಪಾಲಿಗೆ ತಮಿಳ್ನಾಡು ಮತ್ತೆ ಆಗ್ರಹ

08:07 PM Nov 18, 2024 | Team Udayavani |

ಚೆನ್ನೈ: ಕೇಂದ್ರ ಸರ್ಕಾರವು ರಾಜ್ಯಗಳಿಗೆ ನೀಡಲಾಗುವ ತೆರಿಗೆ ಅನುದಾನ ಹೆಚ್ಚಿಸಬೇಕೆಂಬ ಕೂಗು ಮತ್ತಷ್ಟು ಜೋರಾಗಿದೆ. ಕೇಂದ್ರ ಪ್ರಾಯೋಜಿತ ಯೋಜನೆಗಳಿಗೆ ಹೆಚ್ಚುವರಿ ವೆಚ್ಚವನ್ನು ಭರಿಸಲು ಕೇಂದ್ರದ ನಿಧಿಯ ಹಂಚಿಕೆಯಲ್ಲಿನ ಕುಸಿತ ಮತ್ತು ತಮಿಳುನಾಡಿಗೆ ಆರ್ಥಿಕ ಹೊರೆ ಹೆಚ್ಚುತ್ತಿದೆ ಎಂದು ಕಳವಳ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್‌, ತಮಿಳುನಾಡಿಗೆ ಕೇಂದ್ರ ತೆರಿಗೆಯ ಶೇ.50 ಪಾಲನ್ನು ನೀಡುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Advertisement

ದೇಶದ ಒಟ್ಟಾರೆ ಅಭಿವೃದ್ಧಿ ಹಾಗೂ ಅತ್ಯುತ್ತಮ ಪ್ರದರ್ಶನ ತೋರುತ್ತಿರುವ ತಮಿಳುನಾಡಿನಂಥ ರಾಜ್ಯಗಳಿಗೆ ಹೆಚ್ಚುವರಿ ಅನುದಾನವನ್ನು ಹಂಚಿಕೆ ಮಾಡಬೇಕೆಂದು ಅವರು ಕೋರಿದ್ದಾರೆ. 16ನೇ ಹಣಕಾಸು ಆಯೋಗದ ಸಭೆಯಲ್ಲಿ ಮಾತನಾಡಿದ ಅವರು, ಆಯೋಗದ ಶಿಫಾರಸು ತಮಿಳುನಾಡು ಜನರ ಆಶೋತ್ತರಗಳನ್ನು ಈಡೇರಿಸುವಂತಿರಲಿ ಮತ್ತು ಆ ಮೂಲಕ ದೇಶವು ಆರ್ಥಿಕ ಪ್ರಬಲ ರಾಷ್ಟ್ರವಾಗಲು ಮಹತ್ವದ ಕಾಣಿಕೆ ನೀಡುವಂತಾಗಲಿ ಎಂದು ಹೇಳಿದ್ದಾರೆ.

ಕೇಂದ್ರ ಸರ್ಕಾರಿ ಪ್ರಾಯೋಜತ್ವದ ಕಾರ್ಯಕ್ರಮಗಳಗೆ ನೀಡಲಾಗುವ ಹಣದಲ್ಲಿ ಕಡಿತವಾಗಿ, ತಮಿಳುನಾಡು ಮೇಲೆ ಹೆಚ್ಚಿನ ಹೊರೆ ಬೀಳುತ್ತಿದೆ. ಹಾಗಾಗಿ, ಕೇಂದ್ರ ಸರ್ಕಾರವು ತನ್ನ ಪಾಲಿನ ಅನುದಾನವನ್ನು ಶೇ.40ಕ್ಕೆ ಹೆಚ್ಚಿಸಬೇಕು. ಇದನ್ನು ಎಲ್ಲ ರಾಜ್ಯಗಳು ಒಪ್ಪಿಕೊಳ್ಳುತ್ತವೆ ಎಂದು ಸ್ಟಾಲಿನ್‌ ಒತ್ತಾಯಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next