ಚೆನ್ನೈ: ಸೆ.7ರಿಂದ ತಮಿಳುನಾಡಿನ ಕನ್ಯಾಕುಮಾರಿಯಿಂದ ಆರಂಭವಾಗಲಿರುವ ಕಾಂಗ್ರೆಸ್‌ನ “ಭಾರತ್ ಜೋಡೋ ಯಾತ್ರೆ’ಗೂ ಮುನ್ನ ತಮಿಳುನಾಡಿನ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಅವರು ರಾಷ್ಟ್ರ ಧ್ವಜವನ್ನು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಹಸ್ತಾಂತರಿಸಲಿದ್ದಾರೆ.
ಯಾತ್ರೆಗೆ ಚಾಲನೆ ನೀಡುವುದಕ್ಕೂ ಮೊದಲು ರಾಹುಲ್ ಅವರು ಶ್ರೀಪೆರಂಬದೂರ್‌ನಲ್ಲಿರುವ ತಂದೆ ರಾಜೀವ್ ಗಾಂಧಿ ಅವರ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ.
ನಂತರ ಮಹಾತ್ಮಾ ಗಾಂಧಿ ಮಂಡಪಂನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸ್ಟಾಲಿನ್ ಜತೆ ವೇದಿಕೆ ಹಂಚಿಕೊಳ್ಳಲಿದ್ದಾರೆ.
ಈ ಕಾರ್ಯಕ್ರಮದಲ್ಲಿ ಸಿಎಂ ಸ್ಟಾಲಿನ್‌ರಿಂದ ತ್ರಿವರ್ಣ ಧ್ವಜವನ್ನು ಪಡೆದ ನಂತರ, ಯಾತ್ರೆ ಆರಂಭವಾಗುವ ಸ್ಥಳಕ್ಕೆ ರಾಹುಲ್ ಬರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸೆ.7ರಂದು ಕನ್ಯಾಕುಮಾರಿಯಿಂದ ಹೊರಡಲಿರುವ ರಾಹುಲ್ ನೇತೃತ್ವದ ಪಾದಯಾತ್ರೆಯು ಸೆ.8ರಂದು ಬೆಳಗ್ಗೆ 7 ಗಂಟೆ ಹೊತ್ತಿಗೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ತಲುಪಲಿದೆ.
ಸೆ.30ರಂದು ಕರ್ನಾಟಕಕ್ಕೆ ಬರಲಿದ್ದು, 21 ದಿನಗಳ ಕಾಲ ರಾಜ್ಯದಲ್ಲಿ ಸಾಗಲಿದೆ.