Advertisement

ಮೇಕೆದಾಟು ಚರ್ಚೆ ತಡೆಯುವಂತೆ ಪ್ರಧಾನಿ ಮೋದಿಗೆ ಸ್ಟಾಲಿನ್‌ ಪತ್ರ

12:04 AM Jun 14, 2022 | Team Udayavani |

ಚೆನ್ನೈ: ಮೇಕೆದಾಟು ಯೋಜನೆ ವಿಚಾರದಲ್ಲಿ ತಮಿಳುನಾಡು ಮತ್ತೆ ಕ್ಯಾತೆ ತೆಗೆದಿದೆ.

Advertisement

ಜೂ. 17ರ ಸಭೆಯಲ್ಲಿ ಕಾವೇರಿ ನೀರು ನಿರ್ವಹಣ ಪ್ರಾಧಿಕಾರವು ಕರ್ನಾಟಕದ ಮೇಕೆದಾಟು ವಿಚಾರವನ್ನು ಚರ್ಚಿಸದಂತೆ ತಡೆಯಲು ತಮಿಳುನಾಡು ಹರಸಾಹಸ ಪಡುತ್ತಿದೆ. ಅದಕ್ಕೆ ಪುಷ್ಟಿ ನೀಡುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್‌ ಸೋಮವಾರ ಪ್ರಧಾನಿ ಮೋದಿಗೆ ಪತ್ರ ಬರೆದು ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.

ಪ್ರಾಧಿಕಾರದ ಕಾರ್ಯವ್ಯಾಪ್ತಿಯು ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ನೀಡಿರುವ ತೀರ್ಪನ್ನು ಅನುಷ್ಠಾನ ಮಾಡುವುದಕ್ಕೆ ಸೀಮಿತ. ಇದರ ವಿನಾ ಬೇರೆ ಯಾವುದೇ ವಿಚಾರವನ್ನೂ ಪ್ರಾಧಿಕಾರ ಕೈಗೆತ್ತಿಕೊಳ್ಳುವಂತಿಲ್ಲ. ಅಲ್ಲದೆ ಈ ವಿವಾದವು ನ್ಯಾಯಾಲಯದಲ್ಲಿದೆ.

ತಮಿಳುನಾಡು ಸಲ್ಲಿಸಿರುವ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬಾಕಿಯಿವೆ. ಹೀಗಾಗಿ ಸುಪ್ರೀಂ ಕೋರ್ಟ್‌ ತೀರ್ಪು ಬರುವವರೆಗೆ ಮೇಕೆದಾಟು ವಿಚಾರದಲ್ಲಿ ಯಾವುದೇ ಚರ್ಚೆ ಮಾಡದಂತೆ ಪ್ರಾಧಿಕಾರಕ್ಕೆ ಸಲಹೆ ನೀಡುವಂತೆ ಜಲಶಕ್ತಿ ಸಚಿವಾಲಯಕ್ಕೆ ಸೂಚಿಸಿ ಎಂದು ಪತ್ರದಲ್ಲಿ ಸ್ಟಾಲಿನ್‌ ಕೋರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next