Advertisement
ಉಪಮೇಯರ್ ಚುನಾವಣೆಯಲ್ಲಿ ತಮ್ಮನ್ನು ಪರಿಗಣಿಸಿಲ್ಲ ಎಂಬ ಕಾರಣದಿಂದ ಜೆಡಿಎಸ್‌ನ ಮಂಜುಳಾ ನಾರಾಯಣಸ್ವಾಮಿ ಹಾಗೂ ದೇವದಾಸ್, ಮೇಯರ್ ಚುನಾವಣೆಯಲ್ಲಿ ಬಿಜೆಪಿಯನ್ನು ಬೆಂಬಲಿಸಿದ್ದರು. ಬಳಿಕ ಪಕ್ಷದ ವರಿಷ್ಠರ ಬಳಿ ಕ್ಷಮೆಯಾಚಿಸಿದ ಸದಸ್ಯರಿಗೆ ಸ್ಥಾಯಿ ಸಮಿತಿ ಸದಸ್ಯ ಸ್ಥಾನವನ್ನು ನೀಡಲಾಗಿತ್ತು.
Related Articles
Advertisement
ಬಜೆಟ್ ಮೇಲೆ ಪರಿಣಾಮ: ಜೆಡಿಎಸ್ ಬಂಡಾಯ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಚುನಾವಣೆ ನಡೆಸದಿದ್ದರೆ 2019-2020ನೇ ಸಾಲಿನ ಬಿಬಿಎಂಪಿ ಬಜೆಟ್ ಮೇಲೆ ವ್ಯತಿರಿಕ್ತ ಪರಿಣಾಮ ಬೀರಲಿದೆ. ಕಾರಣ ಫೆಬ್ರವರಿ ತಿಂಗಳಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಬಜೆಟ್ ಮಂಡನೆಯಾಗಲಿವೆ. ಅದನ್ನು ಆಧರಿಸಿ ಪಾಲಿಕೆ ಬಜೆಟ್ ಮಂಡಿಸಬೇಕು. ಆ ಹಿನ್ನೆಲೆಯಲ್ಲಿ ಈಗಾಗಲೇ ಬಜೆಟ್ ಸಿದ್ಧತೆ ಆರಂಭವಾಗಬೇಕಿತ್ತು. ಆದರೆ, ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷರು ಆಯ್ಕೆಯಾಗದ ಹಿನ್ನೆಲೆಯಲ್ಲಿ ಯಾವುದೇ ಸಿದ್ಧತೆಗಳು ಆರಂಭವಾಗಿಲ್ಲ.
ಸಮಿತಿ ಕಳೆದುಕೊಳ್ಳಲು ಕಾರಣವೇನು?: ಮೇಯರ್ ಚುನಾವಣೆ ವೇಳೆ ಬಿಜೆಪಿ ಬೆಂಬಲಿಸಿದ ನಂತರವೂ ಜೆಡಿಎಸ್ ನಾಯಕರು ಮಂಜುಳಾ ನಾರಾಯಣಸ್ವಾಮಿ ಹಾಗೂ ದೇವದಾಸ್‌ರನ್ನು ಎರಡು ಸ್ಥಾಯಿ ಸಮಿತಿಗಳಿಗೆ ಸದಸ್ಯರನ್ನಾಗಿ ಮಾಡಿದ್ದರು. ಆದರೆ, ಅಧ್ಯಕ್ಷರ ಆಯ್ಕೆ ಚುನಾವಣೆ ದಿನ ಅವರಿಬ್ಬರೂ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ ಮುಜುಗರ ಉಂಟುಮಾಡಿದ್ದರು. ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ಪಡೆಯಬೇಕಾದರೆ ಸಮಿತಿಯಲ್ಲಿನ 11 ಸದಸ್ಯರ ಪೈಕಿ ಆರು ಮಂದಿ ಬೆಂಬಲವಿರಬೇಕು.
ಅದರಂತೆ ಸಾಮಾಜಿಕ ನ್ಯಾಯ ಹಾಗೂ ವಾರ್ಡ್ ಮಟ್ಟದ ಸಾರ್ವಜನಿಕ ಕಾಮಗಾರಿ ಸ್ಥಾಯಿ ಸಮಿತಿಗಳಲ್ಲಿ ಬಿಜೆಪಿಯ ತಲಾ ಐದು ಸದಸ್ಯರಿದ್ದು, ಜೆಡಿಎಸ್-ಕಾಂಗ್ರೆಸ್‌ನ ಆರು ಸದಸ್ಯರಿದ್ದಾರೆ. ಇದೀಗ ಬಂಡಾಯ ಸದಸ್ಯರು ಮತ್ತೆ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿ, ಬಿಜೆಪಿಯ ಐವರು ಸದಸ್ಯರು ಬೆಂಬಲ ನೀಡಿದರೆ ಅಧ್ಯಕ್ಷರಾಗಿ ಆಯ್ಕೆಯಾಗುತ್ತಾರೆ. ಆಗ ಕಾಂಗ್ರೆಸ್, ಜೆಡಿಎಸ್ ತಮ್ಮ ಪಾಲಿನ ತಲಾ ಒಂದು ಸಮಿತಿ ಕಳೆದುಕೊಳ್ಳಲಿವೆ.
ಸಂಧಾನಕ್ಕೆ ರಾಮಲಿಂಗಾರೆಡ್ಡಿ ನಿರಾಸಕ್ತಿ: ಬಿಬಿಎಂಪಿಯಲ್ಲಿ ಕಳೆದ ನಾಲ್ಕು ವರ್ಷಗಳಿಂದ ಮೈತ್ರಿ ಆಡಳಿತ ಸುಸೂತ್ರವಾಗಿ ಮುಂದುವರಿಯುವಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರು ಪ್ರಮುಖ ಪಾತ್ರವಹಿಸಿದ್ದರು. ಆದರೆ, ಸಮ್ಮಿಶ್ರ ಸರ್ಕಾರದ ಸಂಪುಟ ಪುನಾರಚನೆಯಲ್ಲಿ ಮಂತ್ರಿ ಸ್ಥಾನ ದೊರೆಯದ ಹಿನ್ನೆಲೆಯಲ್ಲಿ ಅವರು ಬೇಸರಗೊಂಡಿದ್ದಾರೆ. ಹೀಗಾಗಿ, ಈ ಬಾರಿ ಅವರು ಜೆಡಿಎಸ್ ಬಂಡಾಯ ಸದಸ್ಯರು ಹಾಗೂ ವರಿಷ್ಟರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದು ಅನುಮಾನ ಎನ್ನಲಾಗಿದೆ.
ಬಿಜೆಪಿ ಸದಸ್ಯರು ಚುನಾವಣೆ ಪ್ರಕ್ರಿಯೆ ನಡೆಸಲು ಅವಕಾಶ ನೀಡದೆ ಪ್ರತಿಭಟಿಸಿದ ಕಾರಣ, ಚುನಾವಣೆ ಮುಂದೂಡಲಾಗಿತ್ತು. ಚುನಾವಣೆ ದಿನಾಂಕ ನಿಗದಿಪಡಿಸುವ ಕುರಿತು ಚರ್ಚಿಸಿ ಶೀಘ್ರವೇ ತೀರ್ಮಾನ ಕೈಗೊಳ್ಳಲಾಗುವುದು.-ಗಂಗಾಂಬಿಕೆ, ಮೇಯರ್ ಸ್ಥಾಯಿ ಸಮಿತಿಗಳನ್ನು ಕಳೆದುಕೊಳ್ಳುವ ಭಯದಿಂದ ಕಾಂಗ್ರೆಸ್, ಜೆಡಿಎಸ್ ಚುನಾವಣೆ ಮುಂದೂಡಿದೆ. ಜ.2ರೊಳಗೆ ಚುನಾವಣೆ ನಡೆಸದಿದ್ದರೆ ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ಮುಂದಿನ ನಡೆ ಬಗ್ಗೆ ನಿರ್ಧರಿಸುತ್ತೇವೆ.
-ಪದ್ಮನಾಭರೆಡ್ಡಿ, ಪ್ರತಿಪಕ್ಷ ನಾಯಕ * ವೆಂ.ಸುನೀಲ್‌ಕುಮಾರ್