Advertisement
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ರವಿವಾರ ಹಮ್ಮಿಕೊಂಡಿದ್ದ ದೇವರಾಜು ಅರಸು ಅವರ 108ನೇ ಜನ್ಮ ದಿನಾಚರಣೆ ಹಾಗೂ ಡಿ.ದೇವರಾಜ ಅರಸು ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
Related Articles
ದೇವರಾಜ ಅರಸರು “ಉಳುವವನೇ ಭೂಮಿ ಒಡೆಯ’ ಎಂಬ ಕಾನೂನನ್ನು ಜಾರಿಗೆ ತಂದರು. ಇದಕ್ಕೆ ಕಾಗೋಡು ತಿಮ್ಮಪ್ಪನವರು ಮಾಡಿದ ಹೋರಾಟ ಸ್ಫೂರ್ತಿ. ಬಿಜೆಪಿ ಅವಧಿಯಲ್ಲಿ ಉಳ್ಳವರೇ ಭೂಮಿ ಒಡೆಯ ಎನ್ನುವಂತೆ ಕಾನೂನು ಮಾಡಿದ್ದರು. ಕಾಗೋಡು ಹೋರಾಟ ಮತ್ತು ಗೇಣಿ ಹೋರಾಟದ ಫಲಾನುಭವಿಗಳು ಮತ್ತು ಈಗಿನ ಪೀಳಿಗೆಯ ಯುವಕ, ಯುವತಿಯರು ಇದನ್ನೆಲ್ಲ ಅರ್ಥ ಮಾಡಿಕೊಳ್ಳಬೇಕು ಎಂದರು.
Advertisement
ಸಂವಿಧಾನದಲ್ಲಿ ಮೀಸಲಾತಿಗೆ ಅವಕಾಶ ಇದ್ದರೂ ಅದು ಜಾರಿ ಆಗಿರಲಿಲ್ಲ. ರಾಜ್ಯದಲ್ಲಿ ದೇವರಾಜ ಅರಸರು ಮುಖ್ಯಮಂತ್ರಿಯಾಗಿ ಹಾವನೂರು ವರದಿ ತರಿಸಿಕೊಂಡು ಅದನ್ನು ಜಾರಿ ಮಾಡುವ ಎದೆಗಾರಿಕೆ ತೋರಿಸಿದರು. ಹೀಗೆ ಮಾಡುವಾಗ ಎಲ್ಲ ಜಾತಿ-ಸಮುದಾಯಗಳನ್ನೂ ವಿಶ್ವಾಸಕ್ಕೆ ತೆಗೆದುಕೊಂಡರು. ಆ ಮೂಲಕ ಸಂವಿಧಾನಬದ್ಧವಾದ ಮೀಸಲಾತಿಯನ್ನು ಕನ್ನಡ ನೆಲದಲ್ಲಿ ಜಾರಿ ಮಾಡಿದರು ಎಂದರು.
ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ನೀಡಿ ಸಮ್ಮಾನಿಸಲಾಯಿತು. ಸಮಾಜವಾದಿ ಚಳವಳಿ ಮತ್ತು ಗೇಣಿ ಹೋರಾಟಗಾರ ಕಾಗೋಡು ತಿಮ್ಮಪ್ಪ ಅವರಿಗೆ ದೇವರಾಜು ಅರಸು ಪ್ರಶಸ್ತಿ ಲಭಿಸಿರುವುದರಿಂದ ಪ್ರಶಸ್ತಿಯ ಮೌಲ್ಯ ಹೆಚ್ಚಾಗಿದೆ. ನಾನು ಮುಖ್ಯಮಂತ್ರಿ ಆಗಿರುವ ಅವಧಿಯÇÉೇ ಕಾಗೋಡು ತಿಮ್ಮಪ್ಪ ಅವರಿಗೆ ಅರಸು ಪ್ರಶಸ್ತಿ ಲಭಿಸಿರುವುದು ನನಗೆ ಅತ್ಯಂತ ಖುಷಿ ತಂದಿದೆ. ಬಹಳಷ್ಟು ಯುವ ನಾಯಕರನ್ನು ಕಾಗೋಡು ತಿಮ್ಮಪ್ಪ ಬೆಳೆಸಿ¨ªಾರೆ ಎಂದು ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.
ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಶಿವರಾಜ ಎಸ್.ತಂಗಡಗಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ , ಶಾಸಕ ಗೋಪಾಲಕೃಷ್ಣ ಬೇಳೂರು, ನಾಗರಾಜ ಯಾದವ್, ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು. ಎಲೆಕ್ಟ್ರಾನಿಕ್ ಸಿಟಿಗೆ ಅರಸು ಹೆಸರು?
ಹಲವು ಸುಧಾರಣೆಗಳನ್ನು ಜಾರಿಗೆ ತಂದ ದೇವರಾಜ ಅರಸು ಅವರು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ಆ ಕಾಲದಲ್ಲಿ ಜಾಗ ಕೊಟ್ಟವರು. ಹೀಗಾಗಿ ಅದರ ಹೆಸರನ್ನು ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ಬದಲಿಸುವ ಸಾಧ್ಯವೇ ಎಂಬುದನ್ನು ಸಚಿವ ಸಂಪುಟ ಸಭೆಯಲ್ಲಿ ಪರಿಶೀಲಿಸಲಾಗುವುದು ಎಂದು ಸಿಎಂ ಪ್ರಕಟಿಸಿದರು.