Advertisement
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಪ್ರಾಣಿದಯಾ ಸಂಘದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು ಮಾತನಾಡಿ, ಸರ್ಕಾರಿ ಗೋಶಾಲೆ ತೆರೆಯುವ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ನಿರ್ಮಿಸುತ್ತಿರುವ ಸರ್ಕಾರಿ ಗೋಶಾಲೆಯ ಕಾಮಗಾರಿಗಳನ್ನು ತ್ವರಿಗತಿಯಲ್ಲಿ ಪೂರ್ಣಗೊಳಿಸಿ, ಮುಂದಿನ ಅಕ್ಟೋಬರ್ ವೇಳೆಗೆ ಗೋಶಾಲೆಯನ್ನು ಆರಂಭಿಸಬೇಕು. ಜೊತೆಗೆ ಮತ್ತೆರಡು ಸರ್ಕಾರಿ ಗೋ ಶಾಲೆಗಳನ್ನು ತೆರೆಯಲು ಸಂಬಂಧಪಟ್ಟತಹಶೀಲ್ದಾರ್ಗಳ ಸಮನ್ವಯತೆಯೊಂದಿಗೆ ಸೂಕ್ತ ಸ್ಥಳಗಳನ್ನು ಗುರುತಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.
Related Articles
ಮಾಂಸ ಮಾರಾಟಕ್ಕೆ ಬಳಸಿಕೊಳ್ಳಲಾಗುವುದು.
Advertisement
ವಿಶೇಷ ಎಂದರೆ ಗ್ರಾಮಾಂತರ ಭಾಗಗಳಲ್ಲಿ ಮಾರಾಟವಾಗುವ ಗುಡ್ಡೆ ಮಾಂಸದ ರೀತಿಯಲ್ಲಿ ಮಾಂಸವನ್ನು ಗ್ರಾಹಕರಿಗೆ ಪೂರೈಸಲಾಗುವುದು ಎಂದು ಪಶುಪಾಲನಾ ಇಲಾಖೆಯ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಸಭೆಯಲ್ಲಿ ರಾಸು ಪರಿಪಾಲನೆ ಮಾಡುತ್ತಿರುವ ಖಾಸಗಿ ಗೋಶಾಲೆಗಳ ಮಾಲಿಕರಿಗೆ ರಾಸುಗಳ ಸಂಖ್ಯೆ ಮತ್ತು ಪರಿಪಾಲನೆಯನ್ನು ಖಾತ್ರಿಪಡಿಸಿಕೊಂಡು ಸಹಾಯಧನ ನೀಡಲು ತೀರ್ಮಾನಿಸಲಾಯಿತು. ಗೌರವ ಅನಿಮಲ್ ವೆಲ್ ಪೇರ್ ವಾರ್ಡನ್ ಮತ್ತು ಗೌರವ ವಕೀಲರನ್ನು ನೇಮಿಸಲು ಒಪ್ಪಿಗೆ ನೀಡಲಾಯಿತು.ಪುಣ್ಯಕೋಟಿ ದತ್ತು ಯೋಜನೆಯಡಿ ಹೈನು ರೈತರಿಂದ ಸಹಾಯಧನಕ್ಕಾಗಿ ಆನ್‌ಲೈನ್‌ನಲ್ಲಿ ಹೆಚ್ಚಿನ ನೋಂದಣಿ ಮಾಡಿಸಲು ತೀರ್ಮಾನಿಸಲಾಯಿತು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಪಶು ಪಾಲನಾ ಇಲಾಖೆಯ ಉಪನಿರ್ದೇಶಕ ರವಿ, ವನ್ಯಜೀವಿ ಸಂರಕ್ಷಕ ಪೃಥ್ವಿರಾಜ್, ಪ್ರಾಣಿ ದಯಾ ಸಂಘದ ಪದಾಧಿಕಾರಿ ರಾಧ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.