Advertisement

ಅಂಗನವಾಡಿಗಳಲ್ಲೇ ನರ್ಸರಿ ಆರಂಭಿಸಿ

04:03 PM Dec 06, 2019 | Team Udayavani |

ಮಂಡ್ಯ: ಅಂಗನವಾಡಿ ಕೇಂದ್ರದಲ್ಲಿಯೇ ಶಾಲಾ ಪೂರ್ವಪ್ರಾಥಮಿಕ ಶಿಕ್ಷಣ ಪ್ರಾರಂಭಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.

Advertisement

ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಕೊಡಗಿನಿಂದ ಬೆಂಗಳೂರಿನವರೆಗೆ ಆಗಮಿಸಿರುವ ಪಾದಯಾತ್ರೆ ಸ್ವಾಗತಿಸಿದ ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರು ಕೆಲ ಕಾಲ ಧರಣಿ ಮಾಡಿದರು. ಸಮಾಜ ಬದವಾಲವಣೆ ಬಯಸುತ್ತಿದೆ. ಆದರೆ, ಅಂಗನವಾಡಿ ಕೇಂದ್ರಗಳು ಮಾತ್ರ ಹಳೆಯ ರೀತಿಯಲ್ಲಿಯೇ ಇವೆ. ಆದ್ದರಿಂದ, ಕೇಂದ್ರಗಳನ್ನು ಪಾಲನಾ ಮತ್ತು ಕಲಿಕೆಯ ಕೇಂದ್ರವನ್ನಾಗಿಸಬೇಕು. ಹೊಸ ಶಿಕ್ಷಣ ನೀತಿಯ ಶಿಫಾರಸಿನಲ್ಲಿರುವ 3ರಿಂದ 9 ವರ್ಷದ ವರ್ಗೀಕರಣವನ್ನು ವಿರೋಧಿಸಬೇಕು. ಈಗಿರುವ ನಿವೃತ್ತಿ ಸೌಲಭ್ಯವನ್ನು ಬದಲಿಸಿ ಎಲ್‌ಐಸಿ ಆಧಾರಿತ ಮಾಸಾಶನ ನೀಡಬೇಕು ಎಂದು ಆಗ್ರಹಿಸಿದರು.

ಬೇಡಿಕೆಗಳು: ಸೇವಾ ಜೇಷ್ಠತೆ ಆಧಾರದಲ್ಲಿ ಕನಿಷ್ಠ ವೇತನ ಜಾರಿ ಮಾಡಬೇಕು. ಮೇಲ್ವಿಚಾರಕಿಯಾಗಿ ಮುಂಬಡ್ತಿ ಹೊಂದುವ ಹುದ್ದೆಯನ್ನು ಸಂಪೂರ್ಣವಾಗಿ ಅಂಗನವಾಡಿ ನೌಕರರಿಗೆ ನೀಡಬೇಕು. ಕೇಂದ್ರ ಸರ್ಕಾರ ಶೇ.45 ಮೀಸಲಾತಿ ಆಧಾರದಲ್ಲಿ ಕೆಪಿಎಸ್‌ಸಿ ಮುಖಾಂತರ ಮೇಲ್ವಿಚಾರಕಿ ಹುದ್ದೆ ಭರ್ತಿ ಮಾಡಿಕೊಳ್ಳುವ ನಿರ್ಧಾರದಿಂದ ನಮಗೆ ಅನ್ಯಾಯವಾಗಿದ್ದು, ಇದನ್ನು ಕೂಡಲೇ ಸರಿಪಡಿಸಬೇಕು. ಅನುಕಂಪದ ಆಧಾರದಲ್ಲಿರುವಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹೆಣ್ಣು ಮಕ್ಕಳಿಗೆ ಮಾತ್ರವಲ್ಲದೆ ಕುಟುಂಬದವರಿಗೂ ಎನ್ನುವ ತಿದ್ದುಪಡಿಯಾಗಬೇಕು. ಸೇವಾ ನಿಯಮಾವಳಿ ರಚಿಸಬೇಕು. ಐದು ವರ್ಷ ಪೂರೈಸಿದ ಮೇಲ್ವಿಚಾರಕಿಯರನ್ನು ಕಡ್ಡಾಯವಾಗಿ ವರ್ಗಾವಣೆ ಮಾಡಬೇಕೆಂದು ಆಗ್ರಹಿಸಿ ಮನವಿ ಸಲ್ಲಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಹಾಯಕ ಅಧಿಕಾರಿ ಕೃಷ್ಣಪ್ಪ ಮನವಿ ಸ್ವೀಕರಿಸಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷೆ ಜಯಲಕ್ಷ್ಮಮ್ಮ, ಪ್ರಮೀಳಾಕುಮಾರಿ, ಸಿ.ಕುಮಾರಿ, ಎಂ.ಎಂ.ಶಿವಕುಮಾರ್‌, ಸುನಂದಾ ಜಯರಾಮು ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next