Advertisement

ವಾರದಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಶುರು

10:35 PM Dec 30, 2019 | Lakshmi GovindaRaj |

ಮೈಸೂರು: ನಟ ದಿ.ವಿಷ್ಣುವರ್ಧನ್‌ ಅವರ 10ನೇ ಪುಣ್ಯ ಸ್ಮರಣೆ ಅಂಗವಾಗಿ ಮೈಸೂರಿನ ಹೊರವಲಯದಲ್ಲಿ ಸ್ಮಾರಕ ನಿರ್ಮಿಸಲು ಉದ್ದೇಶಿಸಿರುವ ಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಮೈಸೂರು ತಾಲೂಕಿನ ಉದೂºರು ಬಳಿಯ ಹಾಲಾಳು ಗ್ರಾಮದಲ್ಲಿ ನಿರ್ಮಿಸಲು ಉದ್ದೇಶಿ ಸಿರುವ ಸ್ಮಾರಕ ಸ್ಥಳಕ್ಕೆ ಭೇಟಿ ನೀಡಿದ ಭಾರತಿ ವಿಷ್ಣುವರ್ಧನ್‌, ಅಭಿಮಾನಿಗಳ ಸಮ್ಮುಖದಲ್ಲಿ ವಿಷ್ಣುವರ್ಧನ್‌ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿದರು.

Advertisement

ಈ ವೇಳೆ ಡಾ.ವಿಷ್ಣು ಅಭಿಮಾನಿ ಗಳು ಆಯೋಜಿಸಿದ್ದ ರಕ್ತ ದಾನ, ಆರೋಗ್ಯ ತಪಾಸಣೆ ಕಾರ್ಯಕ್ರಮಕ್ಕೂ ಚಾಲನೆ ನೀಡಿ ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಹಲವು ದಿನಗಳಿಂದ ನನೆಗುದಿಗೆ ಬಿದ್ದಿರುವ ವಿಷ್ಣು ಸ್ಮಾರಕದ ನಿರ್ಮಾಣ ಕಾರ್ಯ ಇನ್ನು ಒಂದು ವಾರದಲ್ಲಿ ಶುರುವಾಗಲಿದೆ. ಮಾನಂದವಾಡಿ ಮುಖ್ಯರಸ್ತೆಗೆ ಹೊಂದಿಕೊಂಡಂತಿರುವ ಈ ಜಾಗದ ಪೈಕಿ 2 ಎಕರೆಯಲ್ಲಿ ಸ್ಮಾರಕ ನಿರ್ಮಿಸಲು ಯೋಜನೆ ರೂಪಿಸಲಾಗಿದೆ.

ಹಾಲಾಳು ಗ್ರಾಮದ ಸರ್ವೇ ನಂ.8ರಲ್ಲಿ ಸ್ಮಾರಕ ನಿರ್ಮಾಣಕ್ಕೆ 5 ಎಕರೆ ಜಾಗವನ್ನು ಸರ್ಕಾರ ನೀಡಿದೆ. ಆದರೆ, ಸ್ಮಾರಕ ನಿರ್ಮಾಣ ಕಾರ್ಯ 10 ವರ್ಷ ವಿಳಂಬವಾದರೂ ಬೇಸರವಾಗಿಲ್ಲ. ವಿಷ್ಣು ಸ್ಮಾರಕ ವಿಚಾರವಾಗಿ ಸಿಎಂ ಯಡಿಯೂರಪ್ಪ ಸಹಾಯ ನೀಡುವ ಭರವಸೆ ನೀಡಿದ್ದಾರೆ. ಇದೊಂದು ಸಂತಸ ವಿಚಾರ. 10 ವರ್ಷಗಳ ಬಳಿಕವಾದರೂ ಸ್ಮಾರಕ ನಿರ್ಮಾಣವಾಗುತ್ತಿರುವುದು ಖುಷಿ ತಂದಿದೆ ಎಂದರು. ಪುತ್ರಿ ಕೀರ್ತಿ ವಿಷ್ಣುವರ್ಧನ್‌, ಅಳಿಯ ಅನಿರುದ್ಧ್ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next